ಮಧ್ಯರಾತ್ರಿ ನಡೆದ ಪಾಕ್‌ನ ಡ್ರೋನ್‌ ದಾಳಿಗಳನ್ನು ಹಿಮ್ಮೆಟ್ಟಿಸಿದ ಭಾರತ: ಸೇನೆಯ ಅಧಿಕೃತ ಹೇಳಿಕೆ!

ಮೇ 8 ಹಾಗೂ 9 ರ ಮಧ್ಯರಾತ್ರಿ ಪಾಕಿಸ್ತಾನದ ಸೇನೆಯು ಭಾರತದ ಮೇಲೆ ಡ್ರೋನ್‌ ದಾಳಿ ನಡೆಸಿದೆ. ಜಮ್ಮು- ಕಾಶ್ಮೀರದ ಗಡಿ ನಿಯಂತ್ರಣ ರೇಖೆ ಸೇರಿದಂತೆ ದೇಶದ ಪಶ್ಚಿಮ ಭಾಗಗಳಲ್ಲಿ ಪಾಕಿಸ್ತಾನ ಸಶಸ್ತ್ರ ಪಡೆಗಳು ಸಂಘಟಿತ ದಾಳಿ ನಡೆಸಿವೆ. ಪಾಕ್‌ನ ಈ ದಾಳಿಗೆ ಭಾರತ ಸೂಕ್ತ ಪ್ರತ್ಯುತ್ತರ ನೀಡಿದೆ ಎಂದು ಭಾರತೀಯ ಸೇನೆ ಶುಕ್ರವಾರ ಬೆಳಿಗ್ಗೆ ಹೇಳಿಕೆ ನೀಡಿದೆ. ಡ್ರೋನ್ ದಾಳಿಯನ್ನು ಪರಿಣಾಮಕಾರಿಯಾಗಿ ಹಿಮ್ಮೆಟ್ಟಿಸಲಾಗಿದೆ ಎಂದು ಸೇನೆ ಎಕ್ಸ್‌-ಪೋಸ್ಟ್‌ನಲ್ಲಿ ಹಂಚಿಕೊಂಡಿದೆ.

ಭಾರತದ ಪಶ್ಚಿಮ ಗಡಿಯಲ್ಲಿ ಪಾಕಿಸ್ತಾನವು ಅನೇಕ ಡ್ರೋನ್ ದಾಳಿಗಳನ್ನು ನಡೆಸಿತು. ಡ್ರೋನ್‌ಗಳಲ್ಲದೇ ಇತರ ಯುದ್ಧಸಾಮಗ್ರಿಗಳನ್ನು ಬಳಸಿತು ಎಂದು ಭಾರತೀಯ ಸೇನೆಯು ಅಧಿಕೃತ ಹೇಳಿಕೆಯಲ್ಲಿ ತಿಳಿಸಿದೆ. ವೈಮಾನಿಕ ಆಕ್ರಮಣದ ಜೊತೆಗೆ ಹಲವಾರು ಕದನ ವಿರಾಮ ಉಲ್ಲಂಘನೆಗಳನ್ನು ಪಾಕಿಸ್ತಾನ ಮಾಡಿದೆ ಎಂದು ಸೇನೆ ಹೇಳಿದೆ.

Indian Army Repels Pakistan Drone Attacks Overnight

'ಪಾಕಿಸ್ತಾನ ಸಶಸ್ತ್ರ ಪಡೆಗಳು ಮೇ 08 ಮತ್ತು 09 ರ ಮಧ್ಯರಾತ್ರಿ ಭಾರತದ ಪಶ್ಚಿಮ ಗಡಿಯಲ್ಲಿ ಡ್ರೋನ್‌ಗಳನ್ನು ಹಾರಿಸಿವೆ. ಡ್ರೋನ್‌ಗಳಲ್ಲದೆ ಇತರ ಯುದ್ಧಸಾಮಗ್ರಿಗಳನ್ನು ಬಳಸಿಕೊಂಡು ಅನೇಕ ದಾಳಿಗಳನ್ನು ನಡೆಸಿವೆ. ಜಮ್ಮು- ಕಾಶ್ಮೀರದ ನಿಯಂತ್ರಣ ರೇಖೆಯ ಉದ್ದಕ್ಕೂ ಪಾಕ್ ಪಡೆಗಳು ಹಲವಾರು ಕದನ ವಿರಾಮ ಉಲ್ಲಂಘನೆಗಳನ್ನು ಮಾಡಿದೆ' ಎಂದು ಎಕ್ಸ್‌-ಪೋಸ್ಟ್‌ನಲ್ಲಿ ಹಂಚಿಕೊಳ್ಳಲಾಗಿದೆ.

'ಪಾಕ್‌ನ ಡ್ರೋನ್ ದಾಳಿಗಳನ್ನು ಪರಿಣಾಮಕಾರಿಯಾಗಿ ಹಿಮ್ಮೆಟ್ಟಿಸಲಾಗಿದೆ. ಕದನ ವಿರಾಮ ಉಲ್ಲಂಘನೆಗಳಿಗೆ ಸೂಕ್ತ ಉತ್ತರವನ್ನು ನೀಡಲಾಗಿದೆ. ರಾಷ್ಟ್ರದ ಸಾರ್ವಭೌಮತ್ವ ಮತ್ತು ಸಮಗ್ರತೆಯನ್ನು ಕಾಪಾಡಲು ಭಾರತೀಯ ಸೇನೆಯು ಬದ್ಧವಾಗಿದೆ. ಶತ್ರು ರಾಷ್ಟ್ರದ ದುಷ್ಟ ಉದ್ದೇಶಗಳನ್ನು ಈಡೇರಲು ನಾವು ಬಿಡುವುದಿಲ್ಲ' ಎಂದು ಸೇನೆ ತಿಳಿಸಿದೆ.

ಗಡಿ ನಿಯಂತ್ರಣ ರೇಖೆಯಾದ್ಯಂತ ನಡೆಸಲಾದ ವಾಯುದಾಳಿಯನ್ನು ಹಿಮ್ಮೆಟ್ಟಿಸುವ ವಿಡಿಯೊವೊಂದನ್ನು ಭಾರತೀಯ ಸೇನೆಯು ಹಂಚಿಕೊಂಡಿದೆ.

ಆಪರೇಷನ್‌ ಸಿಂಧೂರ

ಕಳೆದ ತಿಂಗಳು ಕಾಶ್ಮೀರದ ಪೆಹಲ್‌ಗಾಮ್‌ನಲ್ಲಿ ಮೂವರು ಉಗ್ರರು ಭಾರತೀಯ ಪ್ರವಾಸಿಗರ ಮೇಲೆ ಮಾರಣಾಂತಿಕ ದಾಳಿ ನಡೆಸಿದ್ದರು. ಈ ದಾಳಿಯಲ್ಲಿ 25 ಪ್ರವಾಸಿಗರು ಮೃತಪಟ್ಟಿದ್ದರು. ಇದಕ್ಕೆ ಪ್ರತ್ಯುತ್ತರವಾಗಿ ಭಾರತವು ಆಪರೇಷನ್‌ ಸಿಂಧೂರ ಕಾರ್ಯಚರಣೆಯನ್ನು ಕೈಗೊಂಡಿದೆ. ಬುಧವಾರ ರಾತ್ರಿ ಪಾಕಿಸ್ತಾನ ಹಾಗೂ ಪಾಕ್‌ ಆಕ್ರಮಿತ ಉಗ್ರರ ಶಿಬಿರದ ಮೇಲೆ ಭಾರತ ಸೇನೆಯು ದಾಳಿ ನಡೆಸಿತು. ಈ ದಾಳಿಯಲ್ಲಿ ಎಪ್ಪತ್ತಕ್ಕೂ ಹೆಚ್ಚು ಉಗ್ರರು ಹತ್ಯೆಯಾಗಿದ್ದಾರೆ ಎಂದು ಸೇನೆ ತಿಳಿಸಿದೆ. ಇದಕ್ಕೆ ಪ್ರತಿಕಾರವಾಗಿ ಶತ್ರು ರಾಷ್ಟ್ರ ಪಾಕಿಸ್ತಾನ ಭಾರತದ ಗಡಿಯಲ್ಲಿ ದಾಳಿ ಆರಂಭಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+