ನಕು ಲಾದಲ್ಲಿ ಭಾರತ-ಚೀನಾ ಸೈನಿಕರ ನಡುವೆ ಸಂಘರ್ಷ
ನವದೆಹಲಿ, ಜನವರಿ 25: ಭಾರತ ಮತ್ತು ಚೀನೀ ಪಡೆಗಳ ನಡುವೆ ಮತ್ತೊಮ್ಮೆ ದೈಹಿಕ ಸಂಘರ್ಷ ನಡೆದಿರುವುದು ತಡವಾಗಿ ವರದಿಯಾಗಿದೆ. ಪೂರ್ವ ಲಡಾಖ್‌ನ ವಾಸ್ತವ ಗಡಿ ನಿಯಂತ್ರಣ ರೇಖೆಯ ಪ್ರಸ್ತುತ ಇರುವ ಸೇನಾ ಬಿಕ್ಕಟ್ಟಿನ ಸ್ಥಳದಿಂದ ಸಾವಿರಾರು ಕಿಮೀ ದೂರದಲ್ಲಿರುವ ಸಿಕ್ಕಿಂನ ನಕು ಲಾದಲ್ಲಿ ಈ ಘಟನೆ ನಡೆದಿದೆ.
ಮೂರು ದಿನಗಳ ಹಿಂದೆ ಭಾರತದ ಗಡಿ ಭಾಗದೊಳಗೆ ಚೀನೀ ಪಡೆಗಳು ಒಳನುಸುಳುವ ಪ್ರಯತ್ನದ ವೇಳೆ ಈ ಸಂಘರ್ಷ ನಡೆದಿದೆ. ಭಾರತದ ಪಡೆಗಳು ಈ ಒಳನುಸುಳುವ ಪ್ರಯತ್ನವನ್ನು ತಡೆದಿದ್ದು, ದೈಹಿಕ ಸಂಘರ್ಷದ ಕಾರಣ ಎರಡೂ ದೇಶಗಳ ಸೈನಿಕರಿಗೆ ಗಾಯಗಳಾಗಿವೆ ಎಂದು ವರದಿಯಾಗಿದೆ.
ಈ ಸಂಘರ್ಷದ ಸಂದರ್ಭದಲ್ಲಿ ಯಾವುದೇ ಬಂದೂಕು-ಗುಂಡುಗಳ ಬಳಕೆಯಾಗಿಲ್ಲ. ಪರಿಸ್ಥಿತಿ ಈಗ ನಿಯಂತ್ರಣದಲ್ಲಿದೆ ಎಂದು ಮೂಲಗಳು ತಿಳಿಸಿವೆ. ಏಪ್ರಿಲ್-ಮೇ ತಿಂಗಳಿನಿಂದ ಎಲ್‌ಎಸಿಯ ಪೂರ್ವ ಲಡಾಖಿನ ವಿವಿಧ ಪ್ರದೇಶಗಳಲ್ಲಿ ಬಿಕ್ಕಟ್ಟು ತಲೆದೋರಿದೆ. ಆದರೆ ಈ ಬಾರಿ ನಕು ಲಾ ದಲ್ಲಿ ಘರ್ಷಣೆ ಉಂಟಾಗಿದೆ.

ಭಾನುವಾರ ಭಾರತ ಮತ್ತು ಚೀನಾದ ಕಮಾಂಡರ್ ಮಟ್ಟದ ಒಂಬತ್ತನೇ ಸುತ್ತಿನ ಮಾತುಕತೆ ನಡೆದಿದೆ. ಅದಕ್ಕೂ ಮೊದಲು ಈ ಸಂಘರ್ಷ ಸಂಭವಿಸಿದೆ. ವಾಸ್ತವವಾಗಿ ನಕು ಲಾ, ಭಾರತ ಮತ್ತು ಚೀನಾ ನಡುವಿನ ಮೂಲ ಬಿಕ್ಕಟ್ಟಿನ ಪ್ರದೇಶಗಳಲ್ಲಿ ಒಂದಾಗಿದೆ. ಪ್ಯಾಂಗಾಂಗ್ ತ್ಸೊ, ಗಲ್ವಾನ್, ಗೊಗ್ರಾ, ಹಾಟ್ ಸ್ಪ್ರಿಂಗ್ಸ್ ಗಳಲ್ಲಿ ಉಭಯ ದೇಶಗಳ ನಡುವೆ ಬಿಕ್ಕಟ್ಟು ತೀವ್ರವಾಗಿದೆ.
ಕಳೆದ ವರ್ಷ ಜೂನ್ ತಿಂಗಳಲ್ಲಿ ಭಾರತ ಮತ್ತು ಚೀನಾ ಸೈನಿಕರು ಗಲ್ವಾನ್ ಕಣಿವೆಯಲ್ಲಿ ಬಡಿಗೆ, ರಾಡುಗಳಿಂದ ಹೊಡೆದಾಡಿಕೊಂಡಿದ್ದರು. ಕಳೆದ ಐದು ವರ್ಷಗಳಲ್ಲಿಯೇ ಅತ್ಯಂತ ಭೀಕರ ಸಂಘರ್ಷ ಎನಿಸಿದ ಈ ಘಟನೆಯಲ್ಲಿ ಭಾರತದ 20 ಸೈನಿಕರು ಮೃತಪಟ್ಟಿದ್ದರು. ಚೀನಾದ ಸೈನಿಕರ ಸಾವು ನೋವಿನ ಸಂಖ್ಯೆ ಬಹಿರಂಗವಾಗಿಲ್ಲ.
-
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video












Click it and Unblock the Notifications