Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ
Viral Video: ವಿದೇಶದಲ್ಲಿರುವ ಭಾರತೀಯರು ಒಂದಿಲ್ಲೊಂದು ಕಾರಣಕ್ಕೆ ವಿವಾದವನ್ನು ಮೈಮೇಲೆ ಎಳೆದುಕೊಳ್ಳುತ್ತಿದ್ದಾರೆ. ಈಚೆಗೆ ಅಮೆರಿಕ, ಆಸ್ಟ್ರೇಲಿಯಾ ಹಾಗೂ ಕೆನಡಾ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ಕೆಲವು ಭಾರತೀಯರ ನಡವಳಿಕೆ ಚರ್ಚೆಗೆ ಗ್ರಾಸವಾಗಿದೆ. ಜೋರು ಸಂಗೀತ ಹಾಕಿಕೊಂಡು ರಸ್ತೆಗಳಲ್ಲಿ ನೃತ್ಯ ಮಾಡುವುದು ಹಾಗೂ ಚಿತ್ರಮಂದಿರಗಳಲ್ಲಿ ಟಿಕೆಟ್ ಹರಿದು ಬಿಸಾಕುವುದು ಸೇರಿದಂತೆ ಹಲವು ಕಾರಣಗಳಿಗೆ ಭಾರತೀಯರು ವಿದೇಶದಲ್ಲಿ ಟೀಕೆಗೆ ಗುರಿಯಾಗುತ್ತಿದ್ದಾರೆ. ಇದೀಗ ಭಾರತೀಯ ದಂಪತಿ ಡ್ಯಾನ್ಸ್ ಎಡವಟ್ಟು ಗಡೀಪಾರು ಭೀತಿಯನ್ನು ತಂದೊಡ್ಡಿದೆ. ಅದರ ವಿವರ ಇಲ್ಲಿದೆ.
ಅಮೆರಿಕದ ವಾಷಿಂಗ್ಟನ್ ಡಿಸಿಯಲ್ಲಿರುವ ಎರಡನೇ ಮಹಾಯುದ್ಧದ ಸ್ಮಾರಕದ ಮುಂದೆ ಭಾರತೀಯ ದಂಪತಿಗಳ ರೀಲ್ಸ್ವೊಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಇದೀಗ ಈ ವಿಡಿಯೋ ಅವರಿಗೆ ಸಂಕಷ್ಟವನ್ನು ತಂದೊಡ್ಡಿದ್ದು, ಗಡೀಪಾರು ಭೀತಿ ಶುರುವಾಗಿದೆ. ಅಲ್ಲದೆ ಆನ್ಲೈನ್ನಲ್ಲಿ ವ್ಯಾಪಕ ಟೀಕೆಗೆ ಗುರಿಯಾಗಿದೆ. ಇದು ಅಮೆರಿಕದ ಅಧಿಕಾರಿಗಳ ಗಮನಕ್ಕೂ ಬಂದಿದೆ ಎನ್ನಲಾಗಿದ್ದು, ಇದೀಗ ಅಮೆರಿಕದಲ್ಲಿರುವ ಭಾರತೀಯ ಮೂಲದ ವ್ಯಕ್ತಿಯನ್ನು ಗಡೀಪಾರು ಮಾಡುವ ಸಾಧ್ಯತೆ ಇದೆ.

ಸೋಷಿಯಲ್ ಮೀಡಿಯಾದಲ್ಲಿ ಮಧು ರಾಜು ಎಂಬವರು ವಲಸೆ ರಹಿತ ವೀಸಾದಲ್ಲಿ ಅಮೆರಿಕದಲ್ಲಿ ವಾಸಿಸುತ್ತಿದ್ದಾರೆ. ಮೂಲತಃ ಟಿಕ್ಟಾಕ್ನಲ್ಲಿ ಹಂಚಿಕೊಳ್ಳಲಾಗಿರುವ ಈ ಪೋಸ್ಟ್ ಇದೀಗ ವಿವಿಧ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಇಲ್ಲಿನ ನ್ಯಾಷನಲ್ ಮಾಲ್ನಲ್ಲಿರುವ ಅಮೆರಿಕದ ಎರಡನೇ ಮಹಾಯುದ್ಧದ ಸ್ಮಾರಕದ ಮುಂದೆ ದಂಪತಿ ಡ್ಯಾನ್ಸ್ ಮಾಡಿದ್ದಾರೆ. ಇನ್ನು ಸ್ಮಾರಕವನ್ನು ಎರಡನೇ ಮಹಾಯುದ್ಧದ ಸಮಯದಲ್ಲಿ ಸಶಸ್ತ್ರ ಪಡೆಗಳಲ್ಲಿ ಸೇವೆ ಸಲ್ಲಿಸಿದ 16 ಮಿಲಿಯನ್ ಅಮೆರಿಕನ್ನರು ಹಾಗೂ ಸಂಘರ್ಷದಲ್ಲಿ ಹುತಾತ್ಮರಾಗಿದ್ದ 400,000 ಕ್ಕೂ ಹೆಚ್ಚು ಜನರ ಸ್ಮರಣಾರ್ಥವಾಗಿದೆ. ಇದೀಗ ಈ ಸ್ಮಾರಕದ ಮುಂದೆ ಡ್ಯಾನ್ಸ್ ಮಾಡಿರುವುದು ವ್ಯಾಪಕ ಟೀಕೆಗೆ ಕಾರಣವಾಗಿದೆ.
ಒಂದು ವಾರದಿಂದ ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ವಿಡಿಯೋ ಆನ್ಲೈನ್ನಲ್ಲಿ ವೈರಲ್ ಆಗುತ್ತಿದ್ದಂತೆಯೇ ವಿವಾದ ಭುಗಿಲೆದ್ದಿತು, ರಾಷ್ಟ್ರೀಯ ತ್ಯಾಗಕ್ಕೆ ಸಂಬಂಧಿಸಿದ ಜಾಗದಲ್ಲಿ ಭಾರತೀಯರು ಅಗೌರವ ತೋರಿಸಿದ್ದಾರೆ ಎಂದು ಮಾಜಿ ಸೈನಿಕರ ಗುಂಪುಗಳು ಮತ್ತು ಸೋಷಿಯಲ್ ಮೀಡಿಯಾ ಬಳಕೆದಾರರು ಆಕ್ರೋಶ ಹೊರ ಹಾಕಿದ್ದಾರೆ.
ಈ ಸ್ಮಾರಕ ಪ್ರದೇಶವನ್ನು ಸೋಷಿಯಲ್ ಮೀಡಿಯಾ ಬಳಕೆಗೆ ಬಳಸಬಾರದು ಎಂದು ಹಲವರು ಆಗ್ರಹಿಸಿದ್ದಾರೆ. ಈ ಪ್ರದೇಶವು ತ್ಯಾಗ, ಬಲಿದಾನದ ಸಂಕೇತವಾಗಿದೆ ಇದು ಸೈನಿಕರಿಗೆ ಗೌರವ ಕೊಡುವ ಪ್ರದೇಶವಾಗಿದೆ. ಈ ಪ್ರದೇಶವು ಟಿಕ್ಟಾಕ್ ನೃತ್ಯ ಪ್ರದರ್ಶನಕ್ಕೆ ಜಾಗವಲ್ಲ ಎಂದು ಹಲವರು ಅಭಿಪ್ರಾಯಪಟ್ಟಿದ್ದಾರೆ. ಈ ರೀತಿಯ ನಡವಳಿಕೆಯು ವಿದೇಶದಲ್ಲಿರುವ ವಲಸಿಗರ ಮೇಲೆ ಕೆಟ್ಟದಾಗಿ ಪ್ರತಿಫಲಿಸುತ್ತದೆ / ಸಂಕಷ್ಟವನ್ನು ತಂದೊಡ್ಡಲಿದ್ದು, ಕೆಟ್ಟ ಅಭಿಪ್ರಾಯ ಮೂಡುವುದಕ್ಕೆ ಕಾರಣವಾಗಬಹುದು ಎಂದು ಹಲವರು ಅಭಿಪ್ರಾಯಪಟ್ಟಿದ್ದಾರೆ. ಭಾರತವು ಎರಡನೇ ಮಹಾಯುದ್ಧದ ಸಮಯದಲ್ಲಿ 2.5 ಮಿಲಿಯನ್ಗಿಂತಲೂ ಹೆಚ್ಚು ಸೈನಿಕರನ್ನು ಕಳುಹಿಸಿದೆ ಎಂದು ನೆಟ್ಟಿಗರೊಬ್ಬರು ಹೇಳಿದ್ದಾರೆ.
ಭಾರತೀಯರಿಗೆ ಗಡೀಪಾರು ಭೀತಿ
ಇನ್ನು ಈ ವೈರಲ್ ವಿಡಿಯೋ ಇದೀಗ ಭಾರತೀಯರಿಗೆ ಗಡೀಪಾರು ಭೀತಿಯನ್ನು ತಂದೊಡ್ಡಿದೆ. ವಿಡಿಯೋದಲ್ಲಿರುವವರ ನಡವಳಿಕೆಯನ್ನು ಗಂಭೀರವಾಗಿ ಪರಿಗಣಿಸಿರುವುದಾಗಿ ಅಲ್ಲಿಯ ಅಧಿಕಾರಿಗಳು ಹೇಳಿದ್ದಾರೆ. ಹೀಗಾಗಿ ರಾಜು ಅವರ ವೀಸಾದ ಮೇಲೆ ಇದು ಪರಿಣಾಮ ಬೀರುವ ಸಾಧ್ಯತೆ ಇದೆ. ಅಲ್ಲದೆ ಇವರು ಗಡೀಪಾರಿಗೆ ಗುರಿಯಾಗುವ ಆತಂಕವೂ ಇದೆ.
Indian couple working in the United States on H-1B visas went to the World War II Memorial in Washington DC and danced there amid the ongoing war between Iran and the United States.
— Dr Nimo Yadav 2.0 (@DrNimoYadav) March 5, 2026
Indians 😭😭 pic.twitter.com/6LqS0azLm6
-
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Bangladesh Bus Tragedy: ನದಿಗೆ ಉರಳಿದ 50 ಪ್ರಯಾಣಿಕರಿದ್ದ ಬಸ್, ಹಲವರು ಸಾವು; ಎದೆ ನಡುಗಿಸೋ ವಿಡಿಯೋ -
Viral Video: ತೆಂಗಿನ ಚಿಪ್ಪನ್ನು ಮಗುವಿನ ಶೌಚಾಲಯ ಮಾಡಿಕೊಂಡ ದಂಪತಿ, ವಿಡಿಯೋ ವೈರಲ್ -
Free Biryani: ಒಂದು ಸಿಲಿಂಡರ್ ಕೊಡಿ, ತಿಂಗಳು ಪೂರ್ತಿ ಉಚಿತ ಬಿರಿಯಾನಿ ತಿನ್ನಿ: ಹೊಸೂರು ಹೋಟೆಲ್ನಿಂದ ಭರ್ಜರಿ ಆಫರ್ -
Rashmika Mandanna: ರಶ್ಮಿಕಾ ಮಂದಣ್ಣ - ವಿಜಯ್ ದೇವರಕೊಂಡ ಕನಸಿನ ಹನಿಮೂನ್: ವಿಶೇಷ ವಿಡಿಯೋ ಹಂಚಿಕೊಂಡ ಜೋಡಿ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
ಪ್ರಧಾನಿ ಮೋದಿಗೆ ಕರೆ ಮಾಡಿದ ಟ್ರಂಪ್: ಶಾಂತಿ ಸ್ಥಾಪನೆಗೆ ಭಾರತದ ಬೆಂಬಲ, ಮಹತ್ವ ಮಾತುಕತೆ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ











Click it and Unblock the Notifications