Get Updates
Get notified of breaking news, exclusive insights, and must-see stories!

ಭಾರತದಲ್ಲಿ ಎಲೆಕ್ಷನ್ ಪರ್ವ, 2026ರಲ್ಲಿ ಎದುರಾಗುವ ಪ್ರಮುಖ ಚುನಾವಣೆಗಳು ಇವು

ಭಾರತದಲ್ಲಿ ಮತ್ತೆ ಚುನಾವಣೆ ಪರ್ವ ಶುರುವಾಗುತ್ತಿದ್ದು, ದೊಡ್ಡ ದೊಡ್ಡ ರಾಜ್ಯಗಳಿಗೆ ಈ ವರ್ಷವೇ ವಿಧಾನಸಭೆ ಚುನಾವಣೆ ನಡೆಯಲಿದೆ. ದಕ್ಷಿಣ ಭಾರತವೂ ಸೇರಿದಂತೆ ಉತ್ತರ ಭಾರತದಲ್ಲೂ ಪ್ರಮುಖ ರಾಜ್ಯಗಳಿಗೆ ಮತದಾನ ನಡೆಯಲಿದೆ. ಬಿಜೆಪಿ ಈ ಬಾರಿ ತನ್ನ ಗೆಲುವಿನ ಓಟ ಮುಂದುವರಿಸಲು ಎಲ್ಲಾ ರೀತಿ ರಣತಂತ್ರ ಹೆಣೆಯುತ್ತಿದ್ದು, ವಿರೋಧ ಪಕ್ಷಗಳಲ್ಲಿ ಒಗ್ಗಟ್ಟಿನ ಮಂತ್ರ ಜಪಿಸಲಾಗುತ್ತಿದೆ. ಅದರಲ್ಲೂ ಈ ಬಾರಿ ದಕ್ಷಿಣ ಭಾರತದಲ್ಲಿ ತಮ್ಮ ಗೆಲುವು ವಿಸ್ತರಣೆ ಮಾಡಿಕೊಳ್ಳಲು ಬಿಜೆಪಿ ನಾಯಕರು ಹೊಸ, ಹೊಸ ತಂತ್ರಗಳನ್ನು ಸಿದ್ಧಪಡಿಸುತ್ತಿದ್ದಾರೆ. ಹಾಗಾದರೆ ಯಾವೆಲ್ಲಾ ರಾಜ್ಯಗಳಿಗೆ 2026ರಲ್ಲಿ ಎಲೆಕ್ಷನ್ ನಡೆಯಲಿದೆ? ಬನ್ನಿ ತಿಳಿಯೋಣ.

2026 ವಿಧಾನಸಭೆ ಚುನಾವಣೆ ನಡೆಯುವ ರಾಜ್ಯಗಳಲ್ಲಿ ಭಾಷೆ, ಕೇಂದ್ರ ಹಾಗೂ ರಾಜ್ಯ ಸಂಬಂಧ ಮತ್ತು ವಲಸೆ ವಿಚಾರವೇ ಚುನಾವಣೆ ವೇದಿಕೆಯಲ್ಲಿ ಪ್ರಮುಖ ಅಸ್ತ್ರವಾಗುವುದು ಬಹುತೇಕ ಖಚಿತವಾಗುತ್ತಿದೆ. ಹೀಗಿದ್ದಾಗ ಭಾರತೀಯ ಚುನಾವಣಾ ಆಯೋಗ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಮಾಡುತ್ತಿದ್ದು, ಹಲವು ರಾಜ್ಯಗಳಲ್ಲಿ ತಲ್ಲಣ ಸೃಷ್ಟಿಯಾಗಿತ್ತು. ಕೋಟ್ಯಂತರ ಮತದಾರರನ್ನು ಪಟ್ಟಿಯಿಂದ ಕೈಬಿಟ್ಟ ವಿಚಾರ ವಿರೋಧ ಪಕ್ಷಗಳು ಹಾಗೂ ಬಿಜೆಪಿ ಮಿತ್ರಪಕ್ಷಗಳ ನಡುವೆ ತಿಕ್ಕಾಟ ಜೋರಾಗುವಂತೆ ಮಾಡಿ ಚರ್ಚೆಗೆ ವೇದಿಕೆ ಒದಗಿಸಿತ್ತು. ಇಷ್ಟೆಲ್ಲದರ ನಡುವೆ ಇದೀಗ ಒಟ್ಟಾರೆ 4 ಪ್ರಮುಖ ರಾಜ್ಯಗಳು ಹಾಗೂ ಒಂದು ಕೇಂದ್ರಾಡಳಿತ ಪ್ರದೇಶಕ್ಕೆ ಚುನಾವಣೆ ನಡೆಯಲಿದೆ.

Indian elections 2026 Ideology incumbency and polarisation shaping the contest

ಅಸ್ಸಾಂ ರಾಜ್ಯದ ವಿಧಾನಸಭೆ ಚುನಾವಣೆ

ಈಶಾನ್ಯ ರಾಜ್ಯ ಅಸ್ಸಾಂ ಒಟ್ಟು 126 ವಿಧಾನಸಭೆ ಸ್ಥಾನಗಳನ್ನು ಹೊಂದಿದ್ದು, ಇಲ್ಲಿ 2026ರ ಮಾರ್ಚ್ ಅಥವಾ ಏಪ್ರಿಲ್ ತಿಂಗಳಲ್ಲಿ ಚುನಾವಣೆ ನಡೆಯಲಿದೆ. ಬಿಜೆಪಿ ನಾಯಕ & ಮುಖ್ಯಮಂತ್ರಿ ಹಿಮಂತ್ ಬಿಸ್ವಾ ಶರ್ಮಾ ಅಸ್ಸಾಂ ಹಾಲಿ ಸಿಎಂ ಆಗಿದ್ದು, ಮತ್ತೆ ಇಲ್ಲಿ ಅಧಿಕಾರ ಪಡೆಯಲು ಬಿಜೆಪಿ ನಾಯಕರು ಸಿದ್ಧತೆ ಆರಂಭಿಸಿದ್ದಾರೆ. ಬಹುತೇಕ ಹಿಮಂತ್ ಬಿಸ್ವಾ ಶರ್ಮಾ ನೇತೃತ್ವದಲ್ಲೇ ಚುನಾವಣೆ ಎದುರಿಸಲು ಬಿಜೆಪಿ ನಾಯಕರು ತಯಾರಿ ನಡೆಸಿದ್ದಾರೆ. ಮತ್ತೊಂದು ಕಡೆ ವಿರೋಧ ಪಕ್ಷಗಳು ಇಲ್ಲಿ ಗೆಲುವಿಗಾಗಿ ಒಗ್ಗಟ್ಟಿನ ಮಂತ್ರ ಜಪಿಸುತ್ತಾ ಒದ್ದಾಡುತ್ತಿವೆ.

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆ

ತೃಣಮೂಲ ಕಾಂಗ್ರೆಸ್ ಸತತವಾಗಿ ಆಡಳಿತ ನಡೆಸುತ್ತಿರುವ ಪಶ್ಚಿಮ ಬಂಗಾಳ ರಾಜ್ಯದಲ್ಲಿ ಕೂಡ ಇನ್ನು ಕೆಲವೇ ದಿನಗಳಲ್ಲಿ ಚುನಾವಣೆ ನಡೆಯಲಿದೆ. ಕಳೆದ 15 ವರ್ಷಗಳಿಂದ ಅಧಿಕಾರದಲ್ಲಿರುವ ಟಿಎಂಸಿಗೆ ಈ ಬಾರಿ ಸೋಲಿನ ರುಚಿ ತೋರಿಸಬೇಕು ಎಂಬುದು ಬಿಜೆಪಿ ಮಿತ್ರ ಪಕ್ಷಗಳ ಗುರಿ. ಮತ್ತೊಂದು ಕಡೆ ಪಶ್ಚಿಮ ಬಂಗಾಳ ರಾಜ್ಯದಲ್ಲಿ ನಡೆದ ಮತದಾರರ ಪಟ್ಟಿ ಪರಿಷ್ಕರಣೆ ದೊಡ್ಡ ತಿಕ್ಕಾಟಕ್ಕೆ ಕಾರಣವಾಗಿ ಗಮನ ಸೆಳೆದಿತ್ತು. ಅಕ್ರಮ ವಲಸೆ, ಕಾನೂನು ಮತ್ತು ಸುವ್ಯವಸ್ಥೆ ವಿಚಾರವನ್ನೇ ಅಸ್ತ್ರವಾಗಿ ಮುಂದೆ ಇಟ್ಟುಕೊಂಡು ಚುನಾವಣೆ ಎದುರಿಸಲು ಬಿಜೆಪಿ ಸಜ್ಜಾಗಿದೆ.

ತಮಿಳುನಾಡು ರಾಜ್ಯದ ವಿಧಾನಸಭಾ ಚುನಾವಣೆ

ದಕ್ಷಿಣ ಭಾರತದ ಪ್ರಮುಖ ರಾಜ್ಯಗಳಲ್ಲಿ ಒಂದಾಗಿರುವ ತಮಿಳುನಾಡಿಗೂ ವಿಧಾನಸಭಾ ಚುನಾವಣೆ ನಡೆಯಲಿದೆ. ಡಿಎಂಕೆ ನೇತೃತ್ವದ ಮೈತ್ರಿಕೂಟ 2.5 ಕೋಟಿ ಮತ ಪಡೆಯುವ ಗುರಿ ಹಾಕಿಕೊಂಡು ಈ ಬಾರಿ ತಂತ್ರ ಹೆಣೆಯುತ್ತಿದ್ದರೆ, ಡಿಎಂಕೆ ಓಟಕ್ಕೆ ಬ್ರೇಕ್ ಹಾಕಲು ಬಿಜೆಪಿ ಮಿತ್ರಪಕ್ಷಗಳು ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಂಡಿವೆ. 2021 ವಿಧಾನಸಭೆ ಚುನಾವಣೆಯಲ್ಲಿ 2.09 ಕೋಟಿ ಮತ ಪಡೆದಿದ್ದ ಡಿಎಂಕೆ ಈಗ ಹೊಸ ಪ್ರಯತ್ನಗಳ ಮೊರೆ ಹೋಗುತ್ತಿದೆ. ಎಂ.ಕೆ. ಸ್ಟಾಲಿನ್ ನೇತೃತ್ವದಲ್ಲಿ ಡಿಎಂಕೆ ಈ ಬಾರಿಯ ವಿಧಾನಸಭೆ ಚುನಾವಣೆ ಎದರಿಸಲಿದ್ದು, ಈ ವಿಚಾರದಲ್ಲಿ ಬಿಜೆಪಿ ಕೂಡ ದೊಡ್ಡ ನಾಯಕನ ನೇತೃತ್ವ ಇಟ್ಟುಕೊಂಡು ವಿಜಯ ಪತಾಕೆ ಹಾರಿಸಲು ಸಜ್ಜಾಗುತ್ತಿದೆ.

ಕೇರಳ ರಾಜ್ಯದ ವಿಧಾನಸಭೆ ಚುನಾವಣೆ

ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು ಜೊತೆಗೆ ಕೇರಳ ರಾಜ್ಯದಲ್ಲೂ ವಿಧಾನಸಭೆ ಚುನಾವಣೆ ನಡೆಯಲಿದೆ. 140 ಸ್ಥಾನ ಹೊಂದಿರುವ ಕೇರಳ ವಿಧಾನಸಭೆಯಲ್ಲಿ ಎಲ್‌ಡಿಎಫ್ ಬಹುಮತ ಪಡೆದು, ಸರ್ಕಾರ ನಡೆಸುತ್ತಿದೆ. ಸಿಎಂ ಪಿಣರಾಯಿ ವಿಜಯನ್ ಮತ್ತೊಂದು ಬಾರಿ ಪಕ್ಷವನ್ನು ಅಧಿಕಾರಕ್ಕೆ ತಂದು ಕೂರಿಸುವ ಪಣತೊಟ್ಟು ಚುನಾವಣೆಗೆ ಸಜ್ಜಾಗಿದ್ದಾರೆ. ಇನ್ನೊಂದು ಕಡೆ ಕಾಂಗ್ರೆಸ್ ತನ್ನ ಮಿತ್ರಪಕ್ಷಗಳ ಜೊತೆಗೆ ಕೇರಳದಲ್ಲಿ ಗೆಲುವಿಗೆ ಚಿಂತಿಸುತ್ತಿದೆ ಹಾಗೂ ಇದರ ನಡುವೆ ಬಿಜೆಪಿ ಕೂಡ ಗೆಲ್ಲುವ ಎಲ್ಲಾ ತಂತ್ರಗಳನ್ನು ಜಾರಿಗೆ ತರಲು ಸಜ್ಜಾಗಿದೆ.

ಪುದುಚೇರಿ ವಿಧಾನಸಭಾ ಚುನಾವಣೆ

ಒಟ್ಟು 4 ರಾಜ್ಯಗಳ ಜೊತೆಗೆ ಒಂದು ಕೇಂದ್ರಾಡಳಿತ ಪ್ರದೇಶಕ್ಕೂ ಇನ್ನೇನು ಕೆಲವೇ ದಿನಗಳಲ್ಲಿ ಎಲೆಕ್ಷನ್ ನಡೆಯಲಿದೆ. ಪುದುಚೇರಿ ಚುನಾವಣೆ ಈ ಬಾರಿ ಸಾಕಷ್ಟು ಗಮನ ಸೆಳೆದಿದ್ದು, 30 ಸದಸ್ಯರ ಸದನದ ಮೇಲೆ ಹಿಡಿತ ಸಾಧಿಸಲು ಎಐಎನ್‌ಆರ್‌ಸಿ ಹಾಗೂ ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳ ನಡುವೆ ಭರ್ಜರಿ ಪೈಪೋಟಿ ನಡೆಯುವ ನಿರೀಕ್ಷೆ ಇದೆ. ಒಟ್ಟಾರೆ ಈ ಎಲ್ಲಾ ಚುನಾವಣೆಗಳು ಇಡೀ ದೇಶದ ಗಮನವನ್ನ ಸೆಳೆದಿವೆ. ಅದರಲ್ಲೂ ಬಿಜೆಪಿ ಈ ಬಾರಿ ದಕ್ಷಿಣ ಭಾಗದಲ್ಲಿ ಗೆಲುವಿನ ನಗೆ ಬೀರಲು ಸಜ್ಜಾಗಿದ್ದು, ಈ ಗೆಲುವಿಗೆ ಬೇಕಾದ ಎಲ್ಲಾ ಸಿದ್ಧತೆಗಳನ್ನು ಆರಂಭಿಸಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+