ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Breaking: ನಕಲಿ,ದೇಶ ವಿರೋಧಿ ವಿಷಯ; 8 ಯೂಟ್ಯೂಬ್ ಚಾನೆಲ್ ಬ್ಲಾಕ್

|
Google Oneindia Kannada News

ನವದೆಹಲಿ, ಆಗಸ್ಟ್ 18: "ನಕಲಿ ಭಾರತ-ವಿರೋಧಿ ವಿಷಯ"ಗಳನ್ನು ಪ್ರಸಾರ ಮಾಡುತ್ತಿರುವ ಆರೋಪದ ಮೇಲೆ ಸರಕಾರ ಗುರುವಾರ ದೇಶದ ಏಳು ಯೂಟ್ಯೂಬ್ ಸುದ್ದಿ ಚಾನೆಲ್‌ಗಳಿಗೆ ನಿರ್ಬಂಧ ಹೇರಿದೆ. ಕಳೆದ ವರ್ಷ ಡಿಸೆಂಬರ್‌ನಿಂದ ಬ್ಲಾಕ್ ಮಾಡಲಾದ ಚಾನೆಲ್‌ಗಳ ಸಂಖ್ಯೆ 102 ಕ್ಕೆ ಏರಿಕೆಯಾಗಿದೆ.

ಇದರ ಜೊತೆಗೆ ಪಾಕಿಸ್ತಾನ ಮೂಲದ ಒಂದು ಯೂಟ್ಯೂಬ್ ಚಾನೆಲ್ ಅನ್ನು ನಿರ್ಬಂಧಿಸಿದೆ. 2021 ರ ಐಟಿ ನಿಯಮಗಳ ಅಡಿಯಲ್ಲಿ ಮಾಹಿತಿ ಮತ್ತು ಪ್ರಸಾರ ಸಚಿವಾಲಯ ಈ ಕ್ರಮ ಕೈಗೊಂಡಿದೆ.

ನಿರ್ಬಂಧಿಸಲಾಗಿರುವ ಈ ಎಂಟು ಚಾನಲ್‌ಗಳು ಒಟ್ಟು 85 ಲಕ್ಷ 73 ಸಾವಿರಕ್ಕೂ ಹೆಚ್ಚು ಚಂದಾದಾರರನ್ನು ಹೊಂದಿದ್ದವು ಎಂದು ಕೇಂದ್ರ ಸರಕಾರದ ಮಾಹಿತಿ ಮತ್ತು ಪ್ರಸಾರ ಸಚಿವಾಲಯ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

ಐಟಿ ನಿಯಮಗಳು 2021 ರ ಅಡಿಯಲ್ಲಿ ತುರ್ತು ಅಧಿಕಾರವನ್ನು ಬಳಸಿಕೊಂಡು ಒಂದು ಫೇಸ್‌ಬುಕ್ ಖಾತೆ ಮತ್ತು ಅದರಲ್ಲಿನ ಎರಡು ಪೋಸ್ಟ್‌ಗಳನ್ನು ಕೂಡ ನಿರ್ಬಂಧಿಸಲಾಗಿದೆ ಎಂದು ಸಚಿವಾಲಯ ತಿಳಿಸಿದೆ.

ನಿರ್ಬಂಧಿಸಲಾದ ಚಾನೆಲ್‌ಗಳೆಂದರೆ ಲೋಕತಂತ್ರ ಟಿವಿ, U&V TV, ಆಮ್ ರಜ್ವಿ (AM Razvi), ಗೌರವಶಾಲಿ ಪವನ್ ಮಿಥಿಲಾಂಚಲ್, SeeTop5TH, Sarkari Update, Sab Kuch Dekho ಮತ್ತು ಪಾಕಿಸ್ತಾನ ಮೂಲದ ನ್ಯೂಸ್ ಕಿ ದುನ್ಯಾ (News ki Dunya).

ಈ ಎಂಟು ಯೂಟ್ಯೂಬ್ ಚಾನೆಲ್‌ಗಳು ಸುಮಾರು 86 ಲಕ್ಷ ಚಂದಾದಾರರನ್ನು ಹೊಂದಿದ್ದವು. 114 ಕೋಟಿಗೂ ಹೆಚ್ಚು ವೀಕ್ಷಣೆಗಳನ್ನು ಹೊಂದಿತ್ತು. "ತಪ್ಪು ಮಾಹಿತಿಗಳಿಂದ ಭಾರತದ ಧಾರ್ಮಿಕ ಸಮುದಾಯಗಳ ನಡುವೆ ದ್ವೇಷವನ್ನು ಹರಡುತ್ತಿವೆ" ಎಂದು ಸಚಿವಾಲಯ ಹೇಳಿದೆ.

ಸರಕಾರವು "ಅಧಿಕೃತ, ವಿಶ್ವಾಸಾರ್ಹ ಮತ್ತು ಸುರಕ್ಷಿತ ಆನ್‌ಲೈನ್ ಸುದ್ದಿ ಮಾಧ್ಯಮದ ಪರಿಸರವಿರುವಂತೆ ನೋಡಿಕೊಳ್ಳಲು ಬದ್ಧವಾಗಿದೆ. ಭಾರತದ ಸಾರ್ವಭೌಮತೆ ಮತ್ತು ಸಮಗ್ರತೆ, ರಾಷ್ಟ್ರೀಯ ಭದ್ರತೆ, ವಿದೇಶಿ ಸಂಬಂಧಗಳು ಮತ್ತು ಸಾರ್ವಜನಿಕ ಸುವ್ಯವಸ್ಥೆಯನ್ನು ದುರ್ಬಲಗೊಳಿಸುವ ಯಾವುದೇ ಪ್ರಯತ್ನಗಳನ್ನು ವಿಫಲಗೊಳಿಸುವುದಕ್ಕಾಗಿ ಕೆಲವು ಸಾಮಾಜಿಕ ಮಾಧ್ಯಮ ಚಾನೆಲ್‌ಗಳ ವಿರುದ್ಧ ಕ್ರಮ ತೆಗೆದುಕೊಳ್ಳಲಾಗಿದೆ" ಎಂದು ಹೇಳಿದೆ.

Indian government Blocked 7 Indian, 1 Pak YouTube news channels

ಕಳೆದ ಏಪ್ರಿಲ್ 25 ರಂದು ಭಾರತದ ರಾಷ್ಟ್ರೀಯ ಭದ್ರತೆ, ವಿದೇಶಿ ಸಂಬಂಧಗಳು ಮತ್ತು ಸಾರ್ವಜನಿಕ ಸುವ್ಯವಸ್ಥೆಗೆ ಸಂಬಂಧಿಸಿದಂತೆ ತಪ್ಪು ಮಾಹಿತಿ ಹರಡಿದ್ದಕ್ಕಾಗಿ ಪಾಕಿಸ್ತಾನದಿಂದ ಕಾರ್ಯನಿರ್ವಹಿಸುತ್ತಿರುವ ಆರು ಯೂಟ್ಯೂಬ್ ಚಾನೆಲ್‌ಗಳು ಮತ್ತು ಫೇಸ್‌ಬುಕ್ ಖಾತೆ ಸೇರಿದಂತೆ 16 ಯೂಟ್ಯೂಬ್ ಚಾನೆಲ್‌ಗಳನ್ನು ಕೇಂದ್ರ ಸರಕಾರ ನಿರ್ಬಂಧಿಸಿತ್ತು.

English summary
7 Indian and 1 Pakistan based YouTube news channels blocked under Fake anti-India content said ministry of information and broadcasting. know more.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X