Breaking: ಹಿಜ್ಬುಲ್‌ನ ಶೌಕಾತ್ ಅಹ್ಮದ್ ಶೇಖ್ ಉಗ್ರ ಎಂದು ಘೋಷಿಸಿದ ಕೇಂದ್ರ ಸರ್ಕಾರ
ನವದೆಹಲಿ, ಅಕ್ಟೋಬರ್ 04: ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದಕ ಹಿಂಸಾಚಾರವನ್ನು ಸೃಷ್ಟಿಸಿದ ಆರೋಪದ ಹಿನ್ನೆಲೆ 1967ರ ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆಯ ಅಡಿಯಲ್ಲಿ ಹಿಜ್ಬುಲ್ ಮುಜಾಹಿದ್ದೀನ್‌ನ ಭಯೋತ್ಪಾದಕ ಸಂಘಟನೆಯ ಶೌಕಾತ್ ಅಹ್ಮದ್ ಶೇಖ್ ಅನ್ನು ಭಯೋತ್ಪಾದಕ ಎಂದು ಕೇಂದ್ರ ಸರ್ಕಾರ ಮಂಗಳವಾರ ಘೋಷಿಸಿದೆ.
ಕಳೆದ 1970ರಲ್ಲಿ ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾದ ಗನಿ ಹಮಾಮ್ ಪ್ರದೇಶದಲ್ಲಿ ಶೌಕಾತ್ ಅಹ್ಮದ್ ಶೇಖ್ ಜನಿಸಿದನು. ಗುಲಾಂ ನಬಿ ಶೇಖ್ ಪುತ್ರ ಶೌಕತ್ ಅಲಿಯಾಸ್ ಶೌಕತ್ ಮೋಚಿ ಪ್ರಸ್ತುತ ಪಾಕಿಸ್ತಾನದಲ್ಲಿ ನೆಲೆಸಿದ್ದಾರೆ. "ಉತ್ತರ ಕಾಶ್ಮೀರದಲ್ಲಿ ಸಹಚರರನ್ನು ಹೊಂದಿರುವ ಈತನು ಒಳನುಸುಳುವಿಕೆ ಮತ್ತು ಭಯೋತ್ಪಾದಕರ ನೇಮಕಾತಿ ಮತ್ತು ಭಯೋತ್ಪಾದಕ ದಾಳಿಗಳಲ್ಲಿ ಈತ ತೊಡಗಿಸಿಕೊಂಡಿದ್ದ," ಎಂದು ಆರೋಪಿಸಲಾಗಿದೆ.
ಕೇಂದ್ರ ಸರ್ಕಾರವು ಯುಎಪಿಎ ಸೆಕ್ಷನ್ 35ರ ಉಪ-ವಿಭಾಗ(1)ರ ಷರತ್ತು (ಎ) ಮೂಲಕ ನೀಡಲಾದ ಅಧಿಕಾರದ ಅಡಿಯಲ್ಲಿ ಕೇಂದ್ರ ಗೃಹ ವ್ಯವಹಾರಗಳ ಸಚಿವಾಲಯ ಹೊರಡಿಸಿದ ಅಧಿಸೂಚನೆಯಲ್ಲಿ ಶೌಕತ್ ಅಹ್ಮದ್ ಶೇಕ್ ಅನ್ನು ಭಯೋತ್ಪಾದಕ ಎಂದು ಘೋಷಿಸಿದೆ.

ಭಯೋತ್ಪಾದನೆಯಲ್ಲಿ ಶೌಕಾತ್ ಅಹ್ಮದ್:
ಶೌಕಾತ್ ಅಹ್ಮದ್ ಶೇಖ್ ಅಲಿಯಾಸ್ ಶೌಕಾತ್ ಮೋಚಿ ಭಯೋತ್ಪಾದನೆಯಲ್ಲಿ ತೊಡಗಿಸಿಕೊಂಡಿದ್ದಾನೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ. ಈ ಹಿನ್ನೆಲೆ ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯಿದೆ, 1967ರ ಅಡಿಯಲ್ಲಿ ಆತನನ್ನು ಭಯೋತ್ಪಾದಕ ಎಂದು ಸೂಚಿಸಲಾಗುವುದು ಎಂದಿದೆ.
ಈ ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯಿದೆ, 1967 ಅನ್ನು ಉಗ್ರರು ಮತ್ತು ಭಯೋತ್ಪಾದಕ ಸಂಘಟನೆಗಳು ಕೆಲವು ಕಾನೂನುಬಾಹಿರ ಚಟುವಟಿಕೆಗಳನ್ನು ಹೆಚ್ಚು ಪರಿಣಾಮಕಾರಿಯಾಗಿ ತಡೆಗಟ್ಟಲು ಮತ್ತು ಭಯೋತ್ಪಾದಕ ಚಟುವಟಿಕೆಗಳನ್ನು ಎದುರಿಸಲು ಜಾರಿಗೊಳಿಸಲಾಗಿದೆ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.












Click it and Unblock the Notifications