ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಭಾರತದ ರಾಷ್ಟ್ರೀಯ ಹೆದ್ದಾರಿಯಿಂದ 34000 ಕೋಟಿ ಆದಾಯ: ಗಡ್ಕರಿ

|
Google Oneindia Kannada News

ನವದೆಹಲಿ, ಮಾರ್ಚ್ 24: ಭಾರತದ ರಾಷ್ಟ್ರೀಯ ಹೆದ್ದಾರಿ ಟೋಲ್‌ನಿಂದ ತಿಂಗಳಾಂತ್ಯದ ವೇಳೆಗೆ 34,000 ಕೋಟಿ ರೂಪಾಯಿ ತೆರಿಗೆ ಸಂಗ್ರಹಿಸಲಾಗುವುದು ಎಂದು ಕೇಂದ್ರ ಸಾರಿಗೆ ಮತ್ತು ರಾಷ್ಟ್ರೀಯ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ತಿಳಿಸಿದ್ದಾರೆ.

ನವದೆಹಲಿ ಮೂಲದ ಕೈಗಾರಿಕಾ ಸಂಸ್ಥೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದ್ದಾರೆ. "ನಾವು ರಸ್ತೆಗಳಿಂದ ಹಣ ಗಳಿಸುತ್ತಿದ್ದೇವೆ. ಸಾರ್ವಜನಿಕರಿಂದಲೂ ಈ ಬಗ್ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. 2021ನೇ ಆರ್ಥಿಕ ಸಾಲಿನ ಅಂತ್ಯದ ವೇಳೆಗೆ ಅಂದರೆ ಮಾರ್ಚ್ 31ರ ವೇಳೆಗೆ 34000 ಕೋಟಿ ರೂಪಾಯಿ ಹಣ ಸಂಗ್ರಹಿಸಲಾಗುತ್ತದೆ ಎಂದು ಹೇಳಿದರು.

ಫಾಸ್ಟ್ಯಾಗ್ ಇಲ್ಲ ಅಂದ್ರೆ ದಂಡ ಹಾಕಲಿಕ್ಕೆ ಕಾನೂನಿನಲ್ಲಿ ಅವಕಾಶವೇ ಇಲ್ಲ!ಫಾಸ್ಟ್ಯಾಗ್ ಇಲ್ಲ ಅಂದ್ರೆ ದಂಡ ಹಾಕಲಿಕ್ಕೆ ಕಾನೂನಿನಲ್ಲಿ ಅವಕಾಶವೇ ಇಲ್ಲ!

ಮುಂದಿನ ಮೂರ್ನಾಲ್ಕು ವರ್ಷಗಳಲ್ಲಿ ರಾಷ್ಟ್ರೀಯ ಹೆದ್ದಾರಿ ಟೋಲ್‌ಗಳಿಂದಲೇ 1,34,000 ಕೋಟಿ ರೂಪಾಯಿ ಆದಾಯ ಗಳಿಸುವ ಗುರಿಯನ್ನು ಹೊಂದಲಾಗಿದೆ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ತಿಳಿಸಿದ್ದಾರೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಂಕಿ-ಅಂಶಗಳ ಪ್ರಕಾರ, 2019-20ನೇ ಸಾಲಿನಲ್ಲಿ ರಾಷ್ಟ್ರೀಯ ಹೆದ್ದಾರಿ ಟೋಲ್‌ನಿಂದ 26,851 ಕೋಟಿ ರೂಪಾಯಿ ಆದಾಯ ಸಂಗ್ರಹಿಸಲಾಗಿದೆ.

 Indian Highway Toll Collection To Reach Rs 34,000 Crore During FY21: Minister Nitin Gadkari

2021-22ನೇ ಸಾಲಿನಲ್ಲಿ ಆದಾಯ ಹೆಚ್ಚಳ:

ಭಾರತದ ರಾಷ್ಟ್ರೀಯ ಹೆದ್ದಾರಿ ಟೋಲ್‌ನಿಂದ ಸಂಗ್ರಹಿಸಿದ ಹಣದ ಪ್ರಮಾಣದ ಬಗ್ಗೆ ಐಸಿಆರ್ಎ ವರದಿ ನೀಡಿದೆ. 2021-22ನೇ ಸಾಲಿನಲ್ಲಿ ಈವರೆಗೂ ಸಂಗ್ರಹಿಸಲಾದ ಟೋಲ್ ದತ್ತಾಂಶವು ಕಳೆದ ವರ್ಷಕ್ಕಿಂತ ಶೇ.14-15ರಷ್ಟು ಹೆಚ್ಚಳವಾಗಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ. ಪ್ರಯಾಣಿಕರ ಮತ್ತು ವಾಣಿಜ್ಯ ವಾಹನಗಳ ಪ್ರಯಾಣ ಹೆಚ್ಚಾದ ಹಿನ್ನಲೆಯಲ್ಲಿ ಟೋಲ್ ಸಂಗ್ರಹದಲ್ಲಿ ಗಮನಾರ್ಹ ಸುಧಾರಣೆ ಕಂಡು ಬಂದಿದೆ. ಕಳೆದ ಮೂರು ತಿಂಗಳುಗಳಲ್ಲಿ ಗಮನಾರ್ಹವಾಗಿ ಏರಿಕೆಯಾಗಿದ್ದು, ಕೋವಿಡ್ -19 ಪೂರ್ವದಲ್ಲಿನ ಮಟ್ಟವನ್ನು ಮೀರಿಸಿದೆ ಎಂದು ವರದಿ ತಿಳಿಸಿದೆ.

ಟೋಲ್ ಅಡೆತಡೆಗಳನ್ನು ತೊಡೆದು ಹಾಕಲು ಕ್ರಮ:

2022ನೇ ಸಾಲಿನಲ್ಲಿ ವಾಹನ ದಟ್ಟಣೆ ಪ್ರಮಾಣವು ಶೇ.3-4ರಷ್ಟು ಹೆಚ್ಚಾಗುವ ಸಾಧ್ಯತೆಯಿದೆ. ಈ ಹಿನ್ನೆಲೆ ಕಳೆದ 2021ನೇ ಸಾಲಿಗೆ ಹೋಲಿಕೆ ಮಾಡಿದ್ದಲ್ಲಿ ಟೋಲ್ ತೆರಿಗೆ ಸಂಗ್ರಹದಲ್ಲಿ ಶೇ14-15ರಷ್ಟು ಹೆಚ್ಚಳವಾಗಲಿದೆ. ಟೋಲ್ ಬಳಿ ಗೇಟ್ ಅನ್ನು ಸಂಪೂರ್ಣವಾಗಿ ತೆಗೆದು ಹಾಕುವ ಉದ್ದೇಶದಿಂದ ಜಾಗತಿಕ ಸ್ಥಾನೀಕರಣ ವ್ಯವಸ್ಥೆ ಜಾರಿಗೊಳಿಸುವುದಕ್ಕೆ ಚಿಂತಿಸಲಾಗುತ್ತಿದೆ ಎಂದು ಸಚಿವ ನಿತಿನ್ ಗಡ್ಕರಿ ತಿಳಿಸಿದ್ದಾರೆ.

English summary
Indian Highway Toll Collection To Reach Rs 34,000 Crore During FY21: Minister Nitin Gadkari.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X