Rain Alert: ವಾಯುಭಾರ ಕುಸಿತ: 03 ದಿನ ಈ ಭಾಗದಲ್ಲಿ ಭಾರೀ ಮಳೆ, ರೆಡ್ ಅಲರ್ಟ್..IMD

India Weather Forecast: ಹವಾಮಾನದಲ್ಲಿ ಆಗುತ್ತಿರುವ ನಿರಂತರ ಬದಲಾವಣೆ ಹಾಗೂ ವಾಯುಭಾರ ಕುಸಿತ ಪರಿಣಾಮವಾಗಿ ದೇಶದ ಉತ್ತರದ ರಾಜ್ಯಗಳಲ್ಲಿ ಅತೀವವಾಗಿ ಮುಂಗಾರು ಮಳೆ ಸುರಿಯುತ್ತಿದೆ. ಬಂಗಾಳಕೊಲ್ಲಿ ಸಮುದ್ರ ಭಾಗದಲ್ಲಿ ಮಾತ್ರವಲ್ಲದೇ ಭೂಮಿ ಮೇಲ್ಮೈನಲ್ಲಿ ಉಂಟಾಗಿರುವ ಬದಲಾವಣೆ ಕಾರಣದಿಂದ ವಿವಿಧ ಭಾಗಗಳಲ್ಲಿ 20 ಸೆಂಟಿ ಮೀಟರ್‌ಗೂ ಹೆಚ್ಚು ಮಳೆ ಆಗುವ ನಿರೀಕ್ಷೆ ಇದೆ. ಮುಂದಿನ 03 ದಿನ ಭಾರೀಯಿಂದ ಅತ್ಯಧಿಕ ಮಳೆ ಆಗಲಿದೆ ಎಂದು ಮುನ್ಸೂಚನೆ ನೀಡಿರುವ ಭಾರತೀಯ ಹವಾಮಾನ ಇಲಾಖೆಯು (IMD) 'ರೆಡ್ ಅಲರ್ಟ್' ಘೊಷಿಸಿದೆ.

ಝಾರ್ಖಂಡ್ ಮತ್ತು ಪಶ್ಚಿಮ ಬಂಗಾಳ ಪ್ರದೇಶ ವ್ಯಾಪ್ತಿಯಲ್ಲಿ ಭೂಮಿಯಿಂದ 7.5 ಕಿಲೋ ಮೀಟರ್ ಎತ್ತರದಲ್ಲಿ ಹಾಗೂ ರಾಜಸ್ಥಾನದ ದಕ್ಷಿಣ ಭಾಗದಲ್ಲಿ ಭೂಮಿ ಮೇಲ್ಮೈನಲ್ಲಿ 1.5 ಕಿಲೋ ಮೀಟರ್ ಎತ್ತರದಲ್ಲಿ ವಾಯುಭಾರ ಕುಸಿತ ಉಂಟಾಗಿದೆ. ಇದರ ಪ್ರಭಾವದಿಂದ ಉತ್ತರ ಭಾರತದ ಹಲವು ರಾಜ್ಯಗಳಲ್ಲಿ ಧಾರಾಕಾರ ಮಳೆ ಸುರಿಯಲಾರಂಭಿಸಿದೆ. ಮುಂದಿನ ಮೂರು ದಿನವು ವ್ಯಾಪಕ ಮಳೆ ಆಗಲಿದೆ.

Indian Meteorological Dept Issued Heavy Rain for These States Include Delhi Jharkhand

ಎಷ್ಟು ರಾಜ್ಯಗಳಿಗೆ ಭಾರೀ ಮಳೆ ಆಗಲಿದೆ?

ಝಾರ್ಖಂಡ್‌ನಲ್ಲಿ ವಿಪರೀತ ಮಳೆ ಪ್ರಯುಕ್ತ ಇಂದು ಜೂನ್ 19ರಂದು ರೆಡ್ ಅಲರ್ಟ್ ಘೋಷಿಸಲಾಗಿದೆ. ಇನ್ನುಳಿದಂತೆ ಮುಂಗಾರು ಮಳೆಯು ಅಸ್ಸಾಂ, ಅರುಣಾಚಲ ಪ್ರದೇಶ, ಗೋವಾ, ಮಧ್ಯ ಪ್ರದೇಶ, ಪಶ್ಚಿಮ ಬಂಗಾಳ, ಉತ್ತರ ಪ್ರದೇಶದ ಪೂರ್ವ ಭಾಗದ, ರಾಜಸ್ಥಾನದ ಪೂರ್ವ ಭಾಗ, ದೆಹಲಿ, ಬಿಹಾರ ಮತ್ತು ಛತ್ತೀಸ್‌ಗಢ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಭಾರೀ ಮಳೆ ಆಗಲಿದ್ದು, 'ಆರೆಂರ್ಜ್ ಅಲರ್ಟ್' ನೀಡಲಾಗಿದೆ. ಈ ಭಾಗದಲ್ಲಿ ಗಾಳಿ ಬೀಸುವಿಕೆ ಪ್ರಮಾಣ ಪ್ರತಿ ಗಂಟೆಗೆ 50-60 ಕಿ.ಮೀ. ವೇಗದಲ್ಲಿರಲಿದೆ ಎಂದು ಐಎಂಡಿ ಹವಾಮಾನ ತಜ್ಞರು ತಿಳಿಸಿದ್ದಾರೆ.

ಇದರೊಂದಿಗೆ ಉತ್ತರಾಖಂಡ, ಉತ್ತರ ಪ್ರದೇಶ, ಗುಜರಾತ್, ಪಂಜಾಬ್, ಮಹಾರಾಷ್ಟ್ರ ಮಧ್ಯಭಾಗ, ನಾಗಾಲ್ಯಾಂಡ್, ಮಣಿಪುರ, ಸಿಕ್ಕಿಂ, ತೆಲಂಗಾಣ ಇತರ ಜಿಲ್ಲೆಗಳಲ್ಲಿ ಸಾಧಾರಣದಿಂದ ಭಾರೀ ಮಳೆ ಆಗಲಿದೆ. ಮೂರು ದಿನ 'ಯೆಲ್ಲೋ ಅಲರ್ಟ್' ಕೊಡಲಾಗಿದೆ ಎಂದು ಹವಾಮಾನ ಇಲಾಖೆಯ ಗುರುವಾರದ ಮುನ್ಸೂಚನಾ ವರದಿ ಮಾಹಿತಿ ನೀಡಿದೆ.

ಕರ್ನಾಟಕದಲ್ಲಿ ಮುಂಗಾರು ದುರ್ಬಲ

ಇನ್ನೂ ಕರ್ನಾಟಕದಲ್ಲಿ ಇಂದಿನಿಂದ ಮಳೆ ಪ್ರಯಾಣ ಕಡಿಮೆ ಆಗಿದೆ. ಮುಂಗಾರು ದಕ್ಷಿಣ ಭಾರತದಲ್ಲಿ ದುರ್ಬಲವಾಗಿದೆ. ಉತ್ತರ ಭಾರತದಲ್ಲಿ ಹೆಚ್ಚು ಸಕ್ರಿಯವಾಗಿದೆ. ತಿಂಗಳ ಹಿಂದಷ್ಟೇ ತೀವ್ರ ಬಿಸಿಲು, ಶಾಖದ ಅಲೆಗೆ ತುತ್ತಾಗಿದ್ದ ಉತ್ತರ ರಾಜ್ಯಗಳಲ್ಲಿ ಮಳೆಯಿಂದಾಗಿ ಕೆಲವೆಡೆ ಪ್ರವಾಹ ಉಂಟಾಗಿದೆ. ತೀವ್ರ ಹಾನಿ ಆಗಿದೆ. ಇನ್ನೂ ಕೆಲವು ದಿನಗಳ ಕಾಲ ಇದೇ ರೀತಿಯ ವಾತಾವರಣ ಅಲ್ಲಿ ಮುಂದುವರಿಯುವ ಲಕ್ಷಣಗಳು ಇವೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+