ಗುಜರಾತ್ ಸರಣಿ ಸ್ಫೋಟದ ರೂವಾರಿ, ಮೋಸ್ಟ್ ವಾಂಟೆಡ್ ಭಯೋತ್ಪಾದಕ ಬಂಧನ
ನವದೆಹಲಿ, ಜನವರಿ 22: ಗುಜರಾತ್ ಸರಣಿ ಸ್ಫೋಟದ ರೂವಾರಿ, ಇಂಡಿಯನ್ ಮುಜಾಹಿದ್ದೀನ್ ಭಯೋತ್ಪಾದಕ ಸಂಘಟನೆಯ ಅಬ್ದುಲ್ ಸುಭಾನ್ ಖುರೇಶಿ ಅಲಿಯಾಸ್ ತಾಖೀರ್ ನನ್ನು ಸೆರೆಹಿಡಿಯುವಲ್ಲಿ ದೆಹಲಿ ಪೊಲೀಸರು ಯಶಸ್ವಿಯಾಗಿದೆ.
ಬಾಂಬ್ ತಯಾರಿಕೆಯಲ್ಲಿ ನಿಪುಣನಾಗಿದ್ದ ಖುರೇಶಿಯನ್ನು ಭಾರತದ ಒಸಾಮಾ ಬಿನ್ ಲಾಡೆನ್ ಎಂದೇ ಕರೆಯಲಾಗುತ್ತಿತ್ತು. 2008 ರ ಗುಜರಾತ್ ಸರಣಿ ಸ್ಫೋಟ ಮತ್ತು 2006 ರಲ್ಲಿ ಮುಂಬೈನ ರೈಲಿನಲ್ಲಿ ಬಾಂಬ್ ಸ್ಫೋಟದ ಹಿಂದಿನ ರೂವಾರಿ ಈತನೇ ಎಂಬುದು ದೃಢವಾಗಿದ್ದರೂ, ತಲೆಮರೆಸಿಕೊಂಡಿದ್ದ ಆತನನ್ನು ಹಿಡಿಯಲು ಭಾರತಕ್ಕೆ ಸಾಧ್ಯವಾಗಿರಲಿಲ್ಲ. ಕೊನೆಗೂ ದಶಕದ ನಂತರ ಆತನನ್ನು ಸೆರೆ ಹಿಡಿಯುವಲ್ಲಿ ಪೊಲೀಸರು ಯಶಸ್ವಿಯಾಗಿದೆ.
ಜುಲೈ 26, 2008 ರಂದು ಗುಜರಾತಿನ ಅಹ್ಮದಾಬಾದಿನಲ್ಲಿ 21 ಕಡೆಗಳಲ್ಲಿ ಬಾಂಬ್ ಸ್ಫೋಟಿಸಲಾಗಿತ್ತು. 70 ನಿಮಿಷಗಳ ಕಾಲ ನಡೆದ ಈ ಸ್ಫೋಟದಲ್ಲಿ 56 ಮಂದಿ ಸಾವಿಗೀಡಾಗಿದ್ದರೆ, 200 ಮಂದಿ ಗಾಯಗೊಂದಿದ್ದರು.

ಜುಲೈ 11 2006 ರಂದು ಮುಂಬೈಯ ಸಬ್ ಅರ್ಬನ್ ರೈಲ್ವೆಯಲ್ಲಿ 7 ಕಡೆಗಳಲ್ಲಿ 11 ನಿಮಿಷಗಳ ಕಾಲ ನಡೆಸಿದ ಬಾಂಬ್ ದಾಳಿಯಲ್ಲಿ 200 ಜನ ಮೃತರಾಗಿದ್ದರೆ, 700 ಗಾಯಗೊಂಡಿದ್ದರು.
ಈ ಕಹಿ ಘಟನೆಗಳು ನಡೆದು ದಶಕಕ್ಕೂ ಹೆಚ್ಚು ವರ್ಷಗಳಾದ ಮೇಲೆ ಕೊನೆಗೂ ಕುಖ್ಯಾತ ಭಯೋತ್ಪಾದಕನನ್ನು ಸೆರೆಹಿಡಿಯಲಾಗಿದೆ. ಸಿಮಿ(Students Islamic Movement of India) ಮತ್ತು ಇಂದಿಯನ್ ಮುಜಾಹಿದ್ದಿನ್ ಸಂಘಟನೆಯ ಸದಸ್ಯನಾಗಿದ್ದ ಖುರೇಶಿ, ಭಾರತದ ಮೋಸ್ಟ್ ವಾಂಟೆಡ್ ಉಗ್ರರ ಪಟ್ಟಿಯಲ್ಲೂ ಇದ್ದ.
-
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ












Click it and Unblock the Notifications