Petrol and Diesel: ಭಾರತದಲ್ಲಿ ಪೆಟ್ರೋಲ್ ಸಮಸ್ಯೆ ಆಗಲಿದೆಯೇ ಇಲ್ಲಿದೆ ಮಹತ್ವದ ಮಾಹಿತಿ!
ಭಾರತ ಹಾಗೂ ಪಾಕಿಸ್ತಾನದ ನಡುವೆ ಯುದ್ಧ ಪರಿಸ್ಥಿತಿ ನಿರ್ಮಾಣವಾಗುತ್ತಿರುವ ಸಂದರ್ಭದಲ್ಲಿಯೇ ಪೆಟ್ರೋಲ್ ಹಾಗೂ ಅಗತ್ಯ ವಸ್ತುಗಳಿಗೆ ಸಂಬಂಧಿಸಿದಂತೆ ಕೆಲವರು ಆತಂಕಗೊಂಡಿದ್ದು. ಇದೀಗ ಇಂಡಿಯನ್ ಆಯಿಲ್ ಈ ಸಂಬಂಧ ಮಹತ್ವದ ಮಾಹಿತಿಯನ್ನು ಸೋಷಿಯಲ್ ಮೀಡಿಯಾ ಎಕ್ಸ್‌ನಲ್ಲಿ ಹಂಚಿಕೊಂಡಿದೆ. ಭಾರತ ಹಾಗೂ ಪಾಕಿಸ್ತಾನದ ನಡುವೆ ಕಳೆದ ಮೂರು ದಿನಗಳಿಂದಲೂ ಉದ್ವಿಗ್ನತೆ ತೀವ್ರ ಪ್ರಮಾಣದಲ್ಲಿ ಹೆಚ್ಚಳವಾಗಿದೆ. ಕಳೆದ ರಾತ್ರಿ ದೇಶದ ವಿವಿಧ ಪ್ರಮುಖ ನಗರಗಳನ್ನು ಗುರಿಯಾಗಿಸಿಕೊಂಡೇ ಪಾಕಿಸ್ತಾನವು ಕ್ಷಿಪಣಿ ಹಾಗೂ ಡ್ರೋನ್ ದಾಳಿ ಮಾಡಿದೆ. ಪಂಜಾಬ್ ಸೇರಿ ವಿವಿಧೆಡೆ ಬ್ಲ್ಯಾಕ್‌ಔಟ್ (ಸಂಪೂರ್ಣ ವಿದ್ಯುತ್ ಬಂದ್) ವ್ಯವಸ್ಥೆ ಇತ್ತು. ಇದರ ಬೆನ್ನಲ್ಲೇ ದೇಶದಾದ್ಯಂತ ಜನ ಪೆಟ್ರೋಲ್ ಹಾಗೂ ಡೀಸೆಲ್ ಖರೀದಿ ಹಾಗೂ ಸಂಗ್ರಹಕ್ಕೆ ಮುಂದಾಗಿದ್ದಾರೆ. ಮುಂದಿನ ದಿನಗಳಲ್ಲಿ ಎರಡೂ ದೇಶಗಳ ನಡುವೆ ಉದ್ವಿಗ್ನತೆ ಹೆಚ್ಚಾದರೆ ಸಮಸ್ಯೆ ಆಗಲಿದೆ ಎನ್ನುವ ಆತಂಕ ಜನರಲ್ಲಿ ಇದೆ.
ದೇಶದಲ್ಲಿ ಜನ ಪೆಟ್ರೋಲ್, ಎಲ್ಪಿಜಿ ಸೇರಿದಂತೆ ಪ್ರಮುಖ ವಸ್ತುಗಳನ್ನು ಖರೀದಿಸಲು ಜನರು ಮುಗಿಬೀಳುತ್ತಿದ್ದಾರೆ. ಪಂಜಾಬ್ನ ಗಡಿಭಾಗದ ಪ್ರದೇಶಗಳಲ್ಲಿ ಪೆಟ್ರೋಲ್ ಖರೀದಿಗೆ ಒತ್ತಡ ಹೆಚ್ಚಳವಾಗುತ್ತಿರುವ ವಿಡಿಯೋ ಹಾಗೂ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ಹೆಚ್ಚಳವಾಗಿದೆ. ದೇಶದ ವಿವಿಧ ಭಾಗದಲ್ಲಿ ಇದೇ ಪರಿಸ್ಥಿತಿ ಮುಂದುವರಿಯುತ್ತಿದ್ದು ಇದೀಗ ಆಯಿಲ್ ಸಂಸ್ಥೆ ಪ್ರಮುಖ ಪೋಸ್ಟ್ ಮಾಡಿದೆ. ಸೋಷಿಯಲ್ ಮೀಡಿಯಾ ಎಕ್ಸ್‌ನಲ್ಲಿ ಇಂಡಿಯನ್ ಆಯಿಲ್ ಕಾರ್ಪೊರೇಶನ್ ಸಂಸ್ಥೆ ಭಾರತೀಯರಿಗೆ ಮಹತ್ವದ ಸಂದೇಶವನ್ನು ನೀಡಿದೆ.

ಭಾರತೀಯರು ಪೆಟ್ರೋಲ್ ಹಾಗೂ ಡೀಸೆಲ್ ಖರೀದಿ ಮಾಡುವುದು ಹೆಚ್ಚಳವಾಗಿದೆ. ಆದರೆ ಅವರು ಆತಂಕಪಡುವ ಅವಶ್ಯಕತೆ ಇಲ್ಲ. ಭಾರತದಲ್ಲಿ ಈಗ ಇಂಧನ ಕೊರತೆ ಎದುರಾಗಿಲ್ಲ. ಎಲ್ಲಾ ಕಡೆಯು ಪೆಟ್ರೋಲ್ ಸಿಗಲಿದೆ ಎಂದು ಹೇಳಲಾಗಿದೆ. ಇಂಡಿಯನ್ ಅಯಿಲ್ ದೇಶಾದ್ಯಂತ ಸಾಕಷ್ಟು ಇಂಧನ ಸಂಗ್ರಹಿಸಿ ಇರಿಸಿದೆ. ದೇಶದಾದ್ಯಂತ ನಮ್ಮ ಸಪ್ಲೈ ಲೈನ್ಗಳು ಸಮರ್ಪಕವಾಗಿ ಕೆಲಸ ಮಾಡುತ್ತಿವೆ. ಹೀಗಾಗಿ ಜನ ಯಾವುದೇ ಕಾರಣಕ್ಕೂ ಪೆಟ್ರೋಲ್ ಹಾಗೂ ಡೀಸೆಲ್ ಖರೀದಿ ಮಾಡುವುದಕ್ಕೆ ಮುಗಿಬೀಳುವ ಅವಶ್ಯಕತೆ ಇಲ್ಲ ಎಂದು ಹೇಳಲಾಗಿದೆ. ದೇಶದ ಎಲ್ಲಾ ಭಾಗಗಳಲ್ಲೂ ನಮ್ಮ ಎಲ್ಲಾ ಬಂಕ್ಗಳಲ್ಲಿ ಪೆಟ್ರೋಲ್, ಡೀಸೆಲ್ ಹಾಗೂ ಎಲ್ಪಿಜಿ ಸಿಗಲಿದೆ ಎಂದು ಪೋಸ್ಟ್‌ನಲ್ಲಿ ವಿವರಿಸಲಾಗಿದೆ.
ಖಾಲಿ ಆಗಲಿದೆ ಎನ್ನುವ ಕಾರಣ: ಭಾರತ ಹಾಗೂ ಪಾಕಿಸ್ತಾನದ ನಡುವೆ ಉದ್ವಿಗ್ನ ಪರಿಸ್ಥಿತಿ ಹೆಚ್ಚಳವಾಗಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಹೆಚ್ಚಳವಾಗಬಹುದು ಎನ್ನುವ ಆತಂಕ ದೇಶದ ಗಡಿಭಾಗದ ರಾಜ್ಯದಲ್ಲಿರುವ ಜನರಲ್ಲಿ ಆಗಿದೆ. ಹೀಗಾಗಿ, ಜನ ವಿವಿಧ ವಸ್ತುಗಳನ್ನು ಖರೀದಿ ಮಾಡುವುದಕ್ಕೆ ಜನ ಮುಂದಾಗಿದ್ದಾರೆ.
#IndianOil has ample fuel stocks across the country and our supply lines are operating smoothly.
— Indian Oil Corp Ltd (@IndianOilcl) May 9, 2025
There is no need for panic buying—fuel and LPG is readily available at all our outlets.
Help us serve you better by staying calm and avoiding unnecessary rush. This will keep our…
ಸಾಮಾನ್ಯವಾಗಿ ಯುದ್ಧ ಅಥವಾ ಯುದ್ಧ ಭೀತಿಯ ಸಂದರ್ಭದಲ್ಲಿ ಪೆಟ್ರೋಲ್ ಸೇರಿದಂತೆ ವಿವಿಧ ವಸ್ತುಗಳಿಗೆ ಜನ ಮುಗಿ ಬೀಳುವುದು ಇದೆ. ಒಂದು ಖಾಲಿ ಆಗಬಹುದು ಎನ್ನುವುದಾದರೆ ಮತ್ತೊಂದು ಬೆಲೆ ಏರಿಕೆ ಆಗಬಹುದು ಎನ್ನುವುದೂ ಇದರಲ್ಲಿ ಸೇರಿದೆ. ಹೀಗಾಗಿ, ಈ ಬೆಳವಣಿಗೆ ನಡೆದಿದೆ.
ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸ್ಪಷ್ಟನೆ
ಇನ್ನು ಇದೇ ಸಂದರ್ಭದಲ್ಲಿ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ವಿತರಣೆ, ನವೀಕರಿಸಬಹುದಾದ ಇಂಧನ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಸಹ ಸ್ಪಷ್ಟನೆ ನೀಡಿದ್ದಾರೆ. ದೇಶದ ಕೆಲವು ಭಾಗಗಳಲ್ಲಿ ವದಂತಿಗಳು ಹರಡುತ್ತಿದ್ದು. ಜನರು ಅಗತ್ಯ ಆಹಾರ ಪದಾರ್ಥಗಳು ಮತ್ತು ಇತರ ದಿನನಿತ್ಯದ ಅಗತ್ಯ ವಸ್ತುಗಳನ್ನು ಸಂಗ್ರಹಿಸಲು ಧಾವಿಸುತ್ತಿದ್ದಾರೆ.
ದೇಶಾದ್ಯಂತ ಅಗತ್ಯವಿರುವ ಎಲ್ಲಾ ವಸ್ತುಗಳೂ ನಮ್ಮಲ್ಲಿ ಸಾಕಷ್ಟು ಸ್ಟಾಕ್ ಇದೆ ಎಂದು ನಾನು ಸ್ಪಷ್ಟವಾಗಿ ಹೇಳಲು ಬಯಸುತ್ತೇನೆ. ನಮ್ಮ ಸ್ಟಾಕ್ ಅಗತ್ಯಕ್ಕಿಂತ ಹಲವು ಪಟ್ಟು ದೊಡ್ಡದಾಗಿದೆ ಮತ್ತು ದೇಶದ ಯಾವುದೇ ಭಾಗದ ಮಾರುಕಟ್ಟೆಗಳಿಗೆ ಧಾವಿಸಲು ಯಾರಿಗೂ ಯಾವುದೇ ಕಾರಣವಿಲ್ಲ. ಯಾವುದೇ ಕೊರತೆಯಿಲ್ಲ ಮತ್ತು ಅಂತಹ ವದಂತಿಗಳಿಗೆ ಯಾರೂ ಕಿವಿಗೊಡಬೇಡಿ ಅಂತ ಅವರು ಮನವಿ ಮಾಡಿದ್ದಾರೆ.
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ..












Click it and Unblock the Notifications