ಜೋ ಬೈಡನ್, ಕಮಲಾಗೆ ಶುಭಹಾರೈಸಿದ ಪ್ರಧಾನಿ ಮೋದಿ
ನವದೆಹಲಿ, ನ.8: ಅಮೆರಿಕದ 46ನೇ ಅಧ್ಯಕ್ಷರಾಗಲು ಅರ್ಹತೆ ಪಡೆದುಕೊಂಡಿರುವ ಡೆಮಾಕ್ರಾಟಿಕ್ ಪಕ್ಷದ ಜೋಸೆಫ್ ಬೈಡನ್ ಹಾಗೂ ಉಪಾಧ್ಯಕ್ಷರಾಗಿರುವ ಕಮಲಾ ಹ್ಯಾರೀಸ್ ಅವರಿಗೆ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಶುಭಹಾರೈಸಿದ್ದಾರೆ.
ಭಾರತದ ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಸೇರಿದಂತೆ ವಿಶ್ವದೆಲ್ಲೆಡೆಯಿಂದ ಅನೇಕ ಮುಖಂಡರು ಶುಭ ಹಾರೈಕೆ ಸಂದೇಶಗಳನ್ನು ಕಳುಹಿಸುತ್ತಿದ್ದಾರೆ.
ಜನವರಿಯಲ್ಲಿ ಡೊನಾಲ್ಡ್ ಟ್ರಂಪ್ ಅವರ ಅಧಿಕಾರಾವಧಿ ಮುಗಿಯಲಿದೆ. ಬಳಿಕ ಬೈಡನ್ ಅಧಿಕಾರ ಸ್ವೀಕರಿಸಲಿದ್ದಾರೆ. ಈ ತಿಂಗಳ ಅಂತ್ಯಕ್ಕೆ 78ನೇ ವರ್ಷಕ್ಕೆ ಕಾಲಿಡಲಿರುವ ಬೈಡನ್, ಅಮೆರಿಕದ ಅತ್ಯಂತ ಹಿರಿಯ ಅಧ್ಯಕ್ಷ ಎನಿಸಿಕೊಳ್ಳಲಿದ್ದಾರೆ. ಪೆನ್ಸಿಲ್ವೇಲಿಯಾದ ಫಲಿತಾಂಶ ಹೊರಬಂದಿದ್ದು, ಅಧ್ಯಕ್ಷರಾಗಲು ಅಗತ್ಯವಿದ್ದ ಎಲೆಕ್ಟೊರಲ್ ಮತಗಳ ಗಡಿ ದಾಟುವಲ್ಲಿ ಬೈಡೆನ್ ಅವರಿಗೆ ನೆರವಾಗಿದೆ. ಪೆನ್ಸಿಲ್ವೇನಿಯಾದ 20 ಮತಗಳೊಂದಿಗೆ ಬೈಡೆನ್ 273 ಎಲೆಕ್ಟೊರಲ್ ಮತಗಳನ್ನು ಪಡೆದಿದ್ದಾರೆ.

ಜೋ ಬೈಡನ್ ಅವರಿಗೆ ಶುಭಹಾರೈಕೆ
ಅಧ್ಯಕ್ಷರಾಗಿ ಆಯ್ಕೆಯಾಗಿರುವ ಜೋ ಬೈಡನ್ ಅವರೇ ಉಪಾಧ್ಯಕ್ಷರಾಗಿ ನೀವು ಭಾರತ ಹಾಗೂ ಅಮೆರಿಕದ ಬಾಂಧವ್ಯ ವೃದ್ಧಿಗೆ ಶ್ರಮಿಸಿದ್ದನ್ನು ಹತ್ತಿರದಿಂದ ನೊಡಿದ್ದೇನೆ. ನಿಮ್ಮ ಅಭೂತಪೂರ್ವ ಜಯಕ್ಕೆ ನನ್ನ ಅಭಿನಂದನೆಗಳು. ಭಾರತ ಹಾಗೂ ಅಮೆರಿಕ ನಡುವಿನ ಬಾಂಧವ್ಯ ಇನ್ನಷ್ಟು ಎತ್ತರಕ್ಕೆ ಕೊಂಡೊಯ್ಯಲು ಪ್ರಯತ್ನ ಮುಂದುವರೆಯಲಿ ಎಂದು ಮೋದಿ ಶುಭ ಹಾರೈಸಿದ್ದಾರೆ
Congratulations @JoeBiden on your spectacular victory! As the VP, your contribution to strengthening Indo-US relations was critical and invaluable. I look forward to working closely together once again to take India-US relations to greater heights. pic.twitter.com/yAOCEcs9bN
— Narendra Modi (@narendramodi) November 7, 2020
ಕಮಲಾ ಅವರಿಗೆ ಶುಭಹಾರೈಕೆ
ನಿಮ್ಮ ಚಿಕ್ಕಮ್ಮ(ಚಿಟ್ಟಿ) ಅವರಿಗೆ ನಿಜಕ್ಕೂ ಅತ್ಯಂತ ಸಂತಸದ ದಿನ ಇದಾಗಿದೆ. ನೀವು ಹೆಮ್ಮೆಯ ಮಹಿಳಾ ರಾಜಕಾರಣಿಯಾಗಿ ಹೊಸ ಮಾರ್ಗವನ್ನು ರೂಪಿಸಿದ್ದೀರಿ ನಿಮಗೆ ಅಭಿನಂದನೆಗಳು, ಭಾರತ ಹಾಗೂ ಯುಎಸ್ ನಡುವಿನ ಸಂಬಂಧ ಇನ್ನಷ್ಟು ಗಟ್ಟಿಗೊಳಿಸುತ್ತೀರಿ ಎಂಬ ಭರವಸೆಯಿದೆ ಹಾಗೂ ಇಂಡೋ ಅಮೆರಿಕನ್ ಬೆಂಬಲಕ್ಕೆ ನೀವು ನಿಲ್ಲುತ್ತೀರಿ ಎಂದು ಆಶಿಸುತ್ತೇನೆ ಎಂದಿದ್ದಾರೆ.
Heartiest congratulations @KamalaHarris! Your success is pathbreaking, and a matter of immense pride not just for your chittis, but also for all Indian-Americans. I am confident that the vibrant India-US ties will get even stronger with your support and leadership.
— Narendra Modi (@narendramodi) November 7, 2020











Click it and Unblock the Notifications