ವೆಂಟಿಲೇಟರ್‌ನಲ್ಲಿರುವ ಕೊರೊನಾ ಸೋಂಕಿತರೊಬ್ಬರಿಗೆ ಗೋಮೂತ್ರ ಕುಡಿಸಿದ ರಾಜಕಾರಣಿ
ನವದೆಹಲಿ, ಮೇ 1: ವೆಂಟಿಲೇಟರ್‌ನಲ್ಲಿರುವ ಮಹಿಳಾ ಕೊರೊನಾ ಸೋಂಕಿತರೊಬ್ಬರಿಗೆ ರಾಜಕಾರಣಿಯೊಬ್ಬರು ಒತ್ತಾಯಪೂರ್ವಕವಾಗಿ ಗೋಮೂತ್ರ ಕುಡಿಸಿದ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ.
ಕೊರೊನಾ ಸೋಂಕಿನಿಂದ ಬಳಲುತ್ತಿದ್ದ ಮಹಿಳೆಯನ್ನು ವೆಂಟಿಲೇಟರ್‌ನಲ್ಲಿಡಲಾಗಿತ್ತು, ಆವರಿಗೆ ರಾಜಕಾರಣಿಯೊಬ್ಬರು ಗೋಮೂತ್ರ ಕುಡಿಸಿದ್ದರು. ಈ ಶಾಕಿಂಗ್ ವಿಡಿಯೋವನ್ನು ಸೂರತ್ ಬಿಜೆಪಿಯ ಜನರಲ್ ಸೆಕ್ರೆಟರಿ ಕಿಶೋರ್ ಬಿಂದಾಲ್ ಅವರು ಪೋಸ್ಟ್ ಮಾಡಿದ್ದರು.
80 ಸಾವಿರ ಮಂದಿ ಈ ವಿಡಿಯೋ ವೀಕ್ಷಿಸಿದ್ದರು, ಬಳಿಕ ಈ ವಿಡಿಯೋವನ್ನು ಡಿಲೀಟ್ ಮಾಡಲಾಗಿತ್ತು.

ಮಾರಕ ಕೊರೋನಾ ವೈರಸ್ ಗುಣಪಡಿಸಲು ಇಡೀ ಜಗತ್ತೇ ಪ್ರಯತ್ನಿಸುತ್ತಿದ್ದರೆ ಅಸ್ಸಾಂನ ಬಿಜೆಪಿ ಶಾಸಕಿಯೊಬ್ಬರು ಗೋಮೂತ್ರ ಮತ್ತು ಹಸುವಿನ ಸಗಣಿಯಿಂದ ಪರಿಹರಿಸಬಹುದು ಎಂದು ಹೇಳಿ ಸುದ್ದಿಯಾಗಿದ್ದರು.
ಅಸ್ಸಾಂ ವಿಧಾನಸಭೆಯಲ್ಲಿ ನಿನ್ನೆ ಬಾಂಗ್ಲಾದೇಶಕ್ಕೆ ಗೋವುಗಳನ್ನು ಕಳ್ಳಸಾಗಣೆ ಮಾಡಲಾಗುತ್ತಿದೆ ಎಂಬ ವಿಷಯದ ಬಗ್ಗೆ ಚರ್ಚೆ ನಡೆಯುತ್ತಿದ್ದ ವೇಳೆ ಬಿಜೆಪಿ ಶಾಸಕಿ ಸುಮನ್ ಹರಿಪ್ರಿಯಾ ಈ ಸಲಹೆ ಕೊಟ್ಟು ಇಡೀ ಸದನವನ್ನು ನಗೆಗಡಲಲ್ಲಿ ತೇಲಿಸಿದರು.
''ನಮಗೆಲ್ಲಾ ಗೊತ್ತು, ಸೆಗಣಿ ಅತ್ಯಂತ ಉಪಕಾರಿ. ಅದೇ ರೀತಿ ಗೋಮೂತ್ರವನ್ನು ಸಿಂಪಡಿಸಿದರೆ ಅದು ಸುತ್ತಮುತ್ತಲ ಪ್ರದೇಶವನ್ನು ಸ್ವಚ್ಛಗೊಳಿಸುತ್ತದೆ. ಇಷ್ಟು ಮಹತ್ವದ ಸೆಗಣಿ ಮತ್ತು ಗೋಮೂತ್ರವನ್ನು ಕೊರೊನಾ ವೈರಸ್ ಸೋಂಕನ್ನು ಗುಣಪಡಿಸಲು ಬಳಸಬಹುದು ಎಂಬುದು ನನ್ನ ಅಭಿಪ್ರಾಯ ಎಂದು ಹೇಳಿದ್ದರು.
ಗೋವು ನಮಗೆ ಒಂದು ಸ್ವತ್ತಾಗಿದ್ದು ಇದರಿಂದ ಕ್ಯಾನ್ಸರ್ ನಂತಹ ಮಾರಕ ರೋಗವನ್ನು ಕೂಡ ಗುಣಪಡಿಸಬಹುದು. ಗುಜರಾತ್ ನ ಆಯುರ್ವೇದ ಆಸ್ಪತ್ರೆಯೊಂದರಲ್ಲಿ ಕ್ಯಾನ್ಸರ್ ರೋಗಿಗಳನ್ನು ಗೋವುಗಳ ಜೊತೆ ಇರಲು ಬಿಡುತ್ತಾರೆ. ಸೆಗಣಿಯನ್ನು ಕ್ಯಾನ್ಸರ್ ರೋಗಿಗಳ ದೇಹಕ್ಕೆ ಹಚ್ಚುತ್ತಾರೆ. ಗೋಮೂತ್ರದಿಂದ ತಯಾರಿಸಿದ ಪಂಚಾಮೃತವನ್ನು ಅವರಿಗೆ ಕುಡಿಯಲು ಕೊಡುತ್ತಾರೆ ಎಂದಿದ್ದರು.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications