Bengaluru–Kochi Vande Bharat: ಬೆಂಗಳೂರು - ಕೊಚ್ಚಿ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ವೇಳಾಪಟ್ಟಿ ಬಿಡುಗಡೆ
Vande Bharath Express: ಇದೀಗ ದೇಶಾದ್ಯಂತ ಐಷಾರಾಮಿ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಸಂಚಾರ ಮಾಡುತ್ತಿವೆ. ಪ್ರಯಾಣಿಕರ ಬೇಡಿಕೆಗೆ ತಕ್ಕಂತೆ ಈ ರೈಲು ಸೇವೆಯನ್ನು ವಿಸ್ತರಣೆ ಮಾಡಲಾಗುತ್ತಿದೆ. ಇದೀಗ ಬೆಂಗಳೂರು - ಕೊಚ್ಚಿ ವಂದೇ ಭಾರತ್ ಎಕ್ಸ್‌ಪ್ರೆಸ್‌ನ ಅಧಿಕೃತ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. ಹಾಗಾದ್ರೆ, ಯಾವಾಗಿನಿಂದ ಈ ಮಾರ್ಗದಲ್ಲಿ ಸೇವೆ ಆರಂಭ ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ಕಣ್ಣಾಡಿಸಿ.
ಕರ್ನಾಟಕ ಮತ್ತು ಕೇರಳ ರಾಜ್ಯಗಳ ನಡುವಿನ ಹೈಸ್ಪೀಡ್ ರೈಲು ಸಂಪರ್ಕವನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಭಾರತೀಯ ರೈಲ್ವೆ ಬೆಂಗಳೂರು - ಕೊಚ್ಚಿ ವಂದೇ ಭಾರತ್ ಎಕ್ಸ್‌ಪ್ರೆಸ್‌ನ ಅಧಿಕೃತ ವೇಳಾಪಟ್ಟಿಯನ್ನ ಬಿಡುಗಡೆ ಮಾಡಿದೆ. ಶೀಘ್ರದಲ್ಲೇ ಸಾರ್ವಜನಿಕ ಸೇವೆ ಆರಂಭವಾಗಲಿದೆ. ಇದರಿಂದ ಕೇರಳ ಹಾಗೂ ಕರ್ನಾಟಕದ ಬೆಂಗಳೂರು ನಡುವಿನ ಪ್ರಯಾಣ ಸಮಯ ಗಣನೀಯವಾಗಿ ಇಳಿಕೆಯಾಗಲಿದೆ. ಇದರಿಂದ ಪ್ರಯಾಣಿಕರಿಗೆ ತುಂಬಾ ಅನುಕೂಲ ಆದಂತಾಗಲಿದೆ.

* ರೈಲು ಸಂಖ್ಯೆ 26651 ಕೆಎಸ್‌ಆರ್ ಬೆಂಗಳೂರು - ಎರ್ನಾಕುಲಂ ವಂದೇ ಭಾರತ್ ಎಕ್ಸ್‌ಪ್ರೆಸ್ ಪ್ರತಿ ದಿನ ಬೆಳಗ್ಗೆ 5:10ಕ್ಕೆ ಬೆಂಗಳೂರು ನಿಲ್ದಾಣದಿಂದ ಹೊರಡಲಿದ್ದು, ಮಧ್ಯಾಹ್ನ 1:50ಕ್ಕೆ ಎರ್ನಾಕುಲಂ ಜಂಕ್ಷನ್ ತಲುಪಲಿದೆ. ಅಲ್ಲಿಂದ ವಾಪಾಸ್ ರೈಲು ಸಂಖ್ಯೆ 26652 ಎರ್ನಾಕುಲಂನಿಂದ ಮಧ್ಯಾಹ್ನ 2:20ಕ್ಕೆ ಹೊರಡಲಿದ್ದು, ರಾತ್ರಿ 11 ಗಂಟೆಗೆ ಬೆಂಗಳೂರು ತಲುಪಲಿದೆ.
ಎಲ್ಲೆಲ್ಲಿ ನಿಲುಗಡೆ: ಈ ರೈಲು ಕೃಷ್ಣರಾಜಪುರಂ, ಸೇಲಂ, ಈರೋಡ್, ತಿರುಪ್ಪೂರು, ಕೊಯಮತ್ತೂರು, ಪಾಲಕ್ಕಾಡ್ ಮತ್ತು ತ್ರಿಶೂರ್ ನಿಲ್ದಾಣಗಳಲ್ಲಿ ನಿಲುಗಡೆ ಇರಲಿದೆ. ಸಾರ್ವಜನಿಕ ಸೇವೆ ಆರಂಭಕ್ಕೂ ಮುನ್ನ ಪರೀಕ್ಷಾರ್ಥ ವಿಶೇಷ ರೈಲು ಸಂಚಾರ ಸಾಧ್ಯತೆಯಿದೆ. ದಕ್ಷಿಣ ಹಾಗೂ ನೈಋತ್ಯ ರೈಲ್ವೆ ವಲಯಗಳಿಗೆ ತ್ವರಿತ ಸಿದ್ಧತೆ ಮಾಡಲು ಸಚಿವಾಲಯ ನಿರ್ದೇಶಿಸಿದೆ.
ಅಕ್ಟೋಬರ್ ಆರಂಭದಲ್ಲೇ ಬೆಂಗಳೂರಿನಿಂದ ಕೇರಳದ ಪ್ರಮುಖ ನಗರಗಳಾದ ತ್ರಿಶೂರ್ ಮತ್ತು ಪಾಲಕ್ಕಾಡ್‌ಗಳೊಂದಿಗೆ ಸಂಪರ್ಕಿಸುವ ಈ ವಿಶೇಷ ರೈಲುಗಳ ಕುರಿತ ಘೋಷಣೆ ಮಾಡಲಾಗಿತ್ತು. ಇದು ವಿಶೇಷವಾಗಿ ಬೆಂಗಳೂರಿನ ತಂತ್ರಜ್ಞಾನ ಮತ್ತು ಸೇವಾ ವಲಯಗಳಲ್ಲಿ ಕೆಲಸ ಮಾಡುವ ಮಲಯಾಳಿ ಸಮುದಾಯದಲ್ಲಿ ಗಮನಾರ್ಹ ಉತ್ಸಾಹವನ್ನು ಹುಟ್ಟುಹಾಕಿತ್ತು.
ಆದರೆ, ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಎರ್ನಾಕುಲಂ ಮತ್ತು ಬೆಂಗಳೂರು ನಡುವಿನ ವಂದೇ ಭಾರತ್ ಎಕ್ಸ್‌ಪ್ರೆಸ್ ಇದೇ ತಿಂಗಳ ಮಧ್ಯದಲ್ಲಿ ಆರಂಭವಾಗಲಿದ ಎನ್ನುವ ಮಾಹಿತಿ ಇದೆ. ಹೀಗೆ ವಂದೇ ಭಾರತ್ ರೈಲು ಸೇವೆಯನ್ನು ಪ್ರಯಾಣಿಕರ ಬೇಡಿಕೆಗೆ ತಕ್ಕಂತೆ ಭಾರತೀಯ ರೈಲ್ವೆ ವಿಸ್ತರಣೆ ಮಾಡುತ್ತಾ ಬಂದಿದೆ. ಇನ್ನೂ ಇದೀಗ ಬೆಂಗಳೂರು-ಕೊಚ್ಚಿ ವಂದೇ ಭಾರತ್ ರೈಲು ಸೇವೆಯಿಂದ ಕರ್ನಾಟಕ ಹಾಗೂ ಕೇರಳ ಎರಡು ರಾಜ್ಯಗಳ ನಡುವಿನ ಹೈಸ್ಪೀಡ್ ರೈಲು ಸಂಪರ್ಕವನ್ನು ಬಲಪಡಿಸಿದಂತಾಗಲಿದೆ.
ಬೆಂಗಳೂರು-ಕೊಚ್ಚಿ ಹಾಗೂ ಕೊಚ್ಚಿ-ಬೆಂಗಳೂರು ಮಾರ್ಗದಲ್ಲಿ ಸಂಚಾರ ಮಾಡುವವರಿಗೆ ಈ ರೈಲಿನಿಂದ ತುಂಬಾ ಸಹಾಯ ಆದಂತಾಗಲಿದೆ. ಸಮಯ ಉಳಿತಾಯ ಆಗಲಿದ್ದು, ಪ್ರಯಾಣಿಕರು ತಮ್ಮ ಕೆಲಸಗಳನ್ನು ಮುಗಿಸಿಕೊಂಡು ಬೇಗ ಹಿಂತಿರುಗಬಹುದಾಗಿದೆ. ಈಗಾಗಲೇ ಭಾರತದಾದ್ಯಂತ ವಂದೇ ಭಾರತ್ ಎಕ್ಸ್‌ಪ್ರೆಸ್ ಹೈಸ್ಪೀಡ್ ರೈಲು ಸಂಚಾರ ಮಾಡುತ್ತಿದ್ದು, ಅತೀ ಬೇಗನೆ ಒಂದು ಕಡೆಯಿಂದ ಮತ್ತೊಂದು ಕಡೆಗೆ ಪ್ರಯಾಣ ಮಾಡಲು ಸಾಧ್ಯವಾಗುತ್ತಿದೆ. ಇನ್ನೂ ಕೂಡ ಬೇರೆಡೆಗೂ ಈ ರೈಲು ಸೇವೆ ವಿಸ್ತರಣೆ ಮಾಡುವಂತೆ ಮನವಿಗಳು ಬರುತ್ತಲಿವೆ. ಅಷ್ಟರ ಮಟ್ಟಿಗೆ ಆರಾಮದಾಯಕ ಪ್ರಯಾಣದ ಸೇವೆಯನ್ನು ವಂದೇ ಭಾರತ್ ಎಕ್ಸ್‌ಪ್ರೆಸ್ ನೀಡುತ್ತಿದೆ.
-
Ankita Jayaram: ನಟನೆಯ ನಡುವೆಯೂ ದ್ವಿತೀಯ ಪಿಯುಸಿಯಲ್ಲಿ ಕರ್ಣ ಧಾರಾವಾಹಿ ಖ್ಯಾತಿಯ ನಟಿ ಅಂಕಿತಾ ಜಯರಾಮ್ ಅಮೋಘ ಸಾಧನೆ -
Karnataka Weather: ಕರ್ನಾಟಕದ 4 ಜಿಲ್ಲೆಗಳಲ್ಲಿ ಮಳೆ - ವಿವಿಧ ಭಾಗಗಳಲ್ಲಿ ಭಾರೀ ಬಿಸಿಲು, ಕರ್ನಾಟಕದ ಹವಾಮಾನ ವರದಿ -
April 10 Horoscope: 12 ರಾಶಿಗಳಿಗೆ ಇಂದು ಆರೋಗ್ಯ, ಹಣಕಾಸು ಮತ್ತು ಪ್ರೇಮದಲ್ಲಿ ಮಿಶ್ರ ಫಲ -
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
Bengaluru: ಬೆಂಗಳೂರು ನಗರದಲ್ಲಿ ಸ್ವಿಗ್ಗಿ, ಜೊಮ್ಯಾಟೋ ಡೆಲಿವರಿ ಬಾಯ್ಸ್ಗೆ ಸಂಕಷ್ಟ, ಅಮಾನವೀಯ ಲಿಫ್ಟ್ ಸಂಸ್ಕೃತಿ -
ಚಿಕ್ಕಮಗಳೂರಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶ್ರಿನಂದಾ ಸಾವು: 2 ಸಾವಿರ ಅಡಿ ಪ್ರಪಾತದಲ್ಲಿ ಶವ ಪತ್ತೆ -
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್ -
Copra: ತಿಪಟೂರು ಎಪಿಎಂಸಿ ಮಾರುಕಟ್ಟೆಯಲ್ಲಿ ಮತ್ತೆ ದಾಖಲೆ ಬೆಲೆಗೆ ಮಾರಾಟವಾದ ಕೊಬ್ಬರಿ: ನಿರ್ಮಾಣವಾಯ್ತು ಹೊಸ ಇತಿಹಾಸ -
Mona Lisa: ಮಹಾಕುಂಭ ಮೇಳದ ಫೇಮಸ್ ಮೊನಾಲಿಸಾ ಪತಿಗೆ ಕಾನೂನು ಸಂಕಷ್ಟ: ಫರ್ಮಾನ್ ಖಾನ್ ಮೇಲೆ ಪೋಕ್ಸೋ ಪ್ರಕರಣ -
2nd PUC: ಬೆಂಗಳೂರು - ಪಿಯುಸಿಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ 260 ವಿದ್ಯಾರ್ಥಿಗಳಿಗೆ 35,000 ರೂ. -
RBI New Rule: ಇನ್ಮುಂದೆ ಆನ್ಲೈನ್ ವಹಿವಾಟಿನಲ್ಲಿ ದೊಡ್ಡ ಬದಲಾವಣೆ: 10,000 ರೂ. ಹಣ ವರ್ಗಾವಣೆಗೂ ಹೊಸ ನಿಯಮ











Click it and Unblock the Notifications