ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರೈಲ್ವೆ ಪ್ರಯಾಣಿಕರಿಗೆ ಸಿಹಿ ಸುದ್ದಿ: ಎಲ್ಲ ಪ್ರಯಾಣಿಕ ರೈಲು ಸೇವೆ ಆರಂಭ

|
Google Oneindia Kannada News

ನವದೆಹಲಿ, ಫೆಬ್ರವರಿ 13: ಕೋವಿಡ್ ಸೋಂಕಿನ ಕಾರಣದಿಂದ ಸಂಪೂರ್ಣ ಸ್ಥಗಿತಗೊಂಡಿದ್ದ ಪ್ರಯಾಣಿಕ ರೈಲು ಸಂಚಾರಗಳು ಹಂತ ಹಂತವಾಗಿ ಶುರುವಾಗುತ್ತಿದ್ದು, ಏಪ್ರಿಲ್ 1ರಿಂದ ಪೂರ್ಣ ಪ್ರಮಾಣದಲ್ಲಿ ಸೇವೆ ಆರಂಭವಾಗುವ ಸಾಧ್ಯತೆ ಇದೆ. ಸಾಲು ಸಾಲು ಹಬ್ಬಗಳು ಬರುವ ಹಿನ್ನೆಲೆಯಲ್ಲಿ ರೈಲು ಸೇವೆಗಳನ್ನು ಸಂಪೂರ್ಣವಾಗಿ ಆರಂಭಿಸಲು ಚಿಂತನೆ ನಡೆಸಲಾಗಿದೆ.

2020ರ ಮಾರ್ಚ್‌ ತಿಂಗಳಲ್ಲಿ ರಾಷ್ಟ್ರವ್ಯಾಪಿ ಲಾಕ್‌ಡೌನ್ ಘೋಷಣೆಯಾದ ಸಂದರ್ಭದಲ್ಲಿ ಎಲ್ಲ ಪ್ರಯಾಣಿಕ ರೈಲುಗಳ ಓಡಾಟವನ್ನು ಭಾರತೀಯ ರೈಲ್ವೆ ಸ್ಥಗಿತಗೊಳಿಸಿತ್ತು. ನಿರ್ಬಂಧಗಳು ಸಡಿಲಗೊಂಡ ಬಳಿಕ ಹಂತ ಹಂತವಾಗಿ ರೈಲು ಸಂಚಾರವನ್ನು ಪುನಃ ಆರಂಭಿಸಲಾಗುತ್ತಿದ್ದು, ದೇಶದಾದ್ಯಂತ ಶೇ 65ಕ್ಕೂ ಹೆಚ್ಚು ರೈಲುಗಳು ಪ್ರಸ್ತುತ ಕಾರ್ಯಾಚರಣೆ ನಡೆಸುತ್ತಿವೆ. 2021ರ ಜನವರಿಯಲ್ಲಿ 250ಕ್ಕೂ ಅಧಿಕ ರೈಲುಗಳನ್ನು ಸೇರ್ಪಡೆಗೊಳಿಸಲಾಗಿದೆ.

22 ತಿಂಗಳಲ್ಲಿ ರೈಲು ಅಪಘಾತದಿಂದ ಒಂದೇ ಒಂದು ಸಾವು ಸಂಭವಿಸಿಲ್ಲ: ಗೋಯಲ್22 ತಿಂಗಳಲ್ಲಿ ರೈಲು ಅಪಘಾತದಿಂದ ಒಂದೇ ಒಂದು ಸಾವು ಸಂಭವಿಸಿಲ್ಲ: ಗೋಯಲ್

ಕೋವಿಡ್ ಸನ್ನಿವೇಶವನ್ನು ಸೂಕ್ಷ್ಮವಾಗಿ ಗಮನಿಸಲಾಗುತ್ತಿದ್ದು, ಇತರೆ ಇಲಾಖೆಗಳ ಸಲಹೆಗಳ ಆಧಾರದಲ್ಲಿ ರೈಲು ಸೇವೆಗಳನ್ನು ಸಹಜಗೊಳಿಸುವ ಬಗ್ಗೆ ತೀರ್ಮಾನಿಸಲಾಗುವುದು ಎಂದು ರೈಲ್ವೆ ಸಚಿವ ಪಿಯೂಶ್ ಗೋಯಲ್ ತಿಂಗಳ ಆರಂಭದಲ್ಲಿ ತಿಳಿಸಿದ್ದರು. ಪ್ರಸ್ತುತ ಲಸಿಕೆ ಕಾರ್ಯಕ್ರಮ ನಡೆಯುತ್ತಿರುವುದರಿಂದ ಮುನ್ನಚ್ಚರಿಕೆ ಹಾಗೂ ತಡೆ ನಿಯಮಗಳಿಗೆ ಬದ್ಧರಾಗಿರಬೇಕಾಗುತ್ತದೆ ಎಂದು ಅವರು ಹೇಳಿದ್ದರು.

 Indian Railways Likely To Open Up All Passenger Services In April

'ಇನ್ನೂ ಸಮಯ ನಿಗದಿಗೊಳಿಸಿಲ್ಲ. ನಿರ್ಧಾರ ತೆಗೆದುಕೊಳ್ಳುವ ಮುನ್ನ ಎಲ್ಲ ಅಂಶಗಳನ್ನೂ ಪರಿಗಣಿಸಬೇಕಾಗುತ್ತದೆ ಮತ್ತು ಎಲ್ಲ ಇಲಾಖೆಗಳೂ ಮುಖ್ಯವಾಗುತ್ತವೆ' ಎಂದು ರೈಲ್ವೆ ವಕ್ತಾರರು ತಿಳಿಸಿದ್ದಾರೆ.

English summary
Indian Railways likely to open up all passenger services in April.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X