• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಭಾರತೀಯ ರೈಲ್ವೆಯಿಂದ ಬಾಂಗ್ಲಾದೇಶಕ್ಕೆ ಆಮ್ಲಜನಕ ಪೂರೈಕೆ

|
Google Oneindia Kannada News

ನವದೆಹಲಿ, ಜುಲೈ 25: ಇದೇ ಮೊದಲ ಬಾರಿಗೆ, ಭಾರತೀಯ ರೈಲ್ವೆಯ ಆಕ್ಸಿಜನ್ ಎಕ್ಸ್‌ಪ್ರೆಸ್ ರೈಲಿನಿಂದ ಅತಿಶೀಘ್ರವೇ ಬಾಂಗ್ಲಾದೇಶಕ್ಕೆ 10 ಕಂಟೈನರ್‌ಗಳಲ್ಲಿ 200 ಮೆಟ್ರಿಕ್ ಟನ್ ದ್ರವೀಕೃತ ವೈದ್ಯಕೀಯ ಆಮ್ಲಜನಕ ಸಾಗಣೆಯಾಗಲಿದೆ.

ಭಾರತೀಯ ರೈಲ್ವೆಯ ಆಕ್ಸಿಜನ್ ಎಕ್ಸ್‌ಪ್ರೆಸ್ ರೈಲು ಅತಿ ಶೀಘ್ರವೇ ಬಾಂಗ್ಲಾದೇಶಕ್ಕೆ ತನ್ನ ಪ್ರಯಾಣ ಬೆಳೆಸಲಿದೆ. ಇದೇ ಮೊದಲ ಬಾರಿಗೆ ಆಕ್ಸಿಜನ್ ಎಕ್ಸ್‌ಪ್ರೆಸ್ ರೈಲು ನೆರೆ ರಾಷ್ಟ್ರಕ್ಕೆ ತನ್ನ ಪ್ರಯಾಣ ಮತ್ತು ಸೇವಾ ಕಾರ್ಯಾಚರಣೆ ಆರಂಭಿಸುತ್ತಿದೆ. ಬಾಂಗ್ಲಾದೇಶದ ಬೆನಪೋಲ್‌ಗೆ 200 ಮೆಟ್ರಿಕ್ ಟನ್ ತೂಕದ ದ್ರವೀಕೃತ ವೈದ್ಯಕೀಯ ಆಮ್ಲಜನಕ ಸಾಗಿಸಲು ಆಗ್ನೇಯ ರೈಲ್ವೆ ಇಲಾಖೆಯು ಇಂದು ಚಕ್ರಧಾರ್‌ಪುರ್ ವಿಭಾಗದ ಟಾಟಾದಲ್ಲಿ ಬೇಡಿಕೆ ಪತ್ರ (ಇಂಡೆಂಟ್) ಸಲ್ಲಿಸಿದೆ.

200 ಮೆಟ್ರಿಕ್ ಟನ್ ದ್ರವೀಕೃತ ವೈದ್ಯಕೀಯ ಆಮ್ಲಜನಕವನ್ನು 10 ಕಂಟೈನರ್‌ಗಳಿಗೆ ಭರ್ತಿ ಮಾಡಿ, ಬೋಗಿಗಳಿಗೆ ತುಂಬಿ, ಆಕ್ಸಿಜನ್ ಎಕ್ಸ್‌ಪ್ರೆಸ್ ರೈಲು ಪ್ರಯಾಣಕ್ಕೆ ಸಜ್ಜುಗೊಳಿಸಲಾಗಿದೆ.

ಕೊರೊನಾ 2ನೇ ಅಲೆ ದೇಶದಲ್ಲಿ ವ್ಯಾಪಕವಾದಾಗ, ದೇಶದೆಲ್ಲೆಡೆ ಎದುರಾದ ವೈದ್ಯಕೀಯ ಆಮ್ಲಜನಕದ ಕೊರತೆ ನೀಗಿಸಲು ಆಕ್ಸಿಜನ್ ಎಕ್ಸ್‌ಪ್ರೆಸ್ ರೈಲುಗಳು, 2021 ಏಪ್ರಿಲ್ 24ರಂದು ಕಾರ್ಯಾಚರಣೆ ಆರಂಭಿಸಿದವು. ದೇಶದ 15 ರಾಜ್ಯಗಳಿಗೆ 35,000 ಮೆಟ್ರಿಕ್ ಟನ್ ಗಿಂತ ಹೆಚ್ಚಿನ ದ್ರವೀಕೃತ ವೈದ್ಯಕೀಯ ಆಮ್ಲಜನಕ ಸಾಗಿಸಲು 480ಕ್ಕಿಂತ ಹೆಚ್ಚಿನ ಆಕ್ಸಿಜನ್ ಎಕ್ಸ್‌ಪ್ರೆಸ್ ರೈಲುಗಳು ಕಾರ್ಯಾಚರಣೆ ನಡೆಸಿದವು.

ಮೂರು ದಿನಗಳಲ್ಲಿ ರಾಜ್ಯಗಳಿಗೆ 96,490 ಡೋಸ್ ಕೊರೊನಾ ಲಸಿಕೆ ಪೂರೈಕೆಮೂರು ದಿನಗಳಲ್ಲಿ ರಾಜ್ಯಗಳಿಗೆ 96,490 ಡೋಸ್ ಕೊರೊನಾ ಲಸಿಕೆ ಪೂರೈಕೆ

ಭಾರತೀಯ ರೈಲ್ವೆಯು ಸಾಧ್ಯವಾದಷ್ಟು ಕಡಿಮೆ ಸಮಯದಲ್ಲಿ ಸಾಧ್ಯವಾದಷ್ಟು ಹೆಚ್ಚಿನ ದ್ರವೀಕೃತ ವೈದ್ಯಕೀಯ ಆಮ್ಲಜನಕವನ್ನು ತಲುಪಿಸಲು ಪ್ರಯತ್ನಿಸುತ್ತಿದೆ.

English summary
First time ever, Indian Railways' Oxygen Express to transport 200 MT Liquid Medical Oxygen (LMO) to Bangladesh in 10 containers.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X