ತಿರುಪತಿ-ಮಚಲಿಪಟ್ಟಣಂ ರೈಲಿನಲ್ಲಿ ಕಾಣಿಸಿಕೊಂಡ ಬೆಂಕಿ, ಬೆಚ್ಚಿಬಿದ್ದ ಪ್ರಯಾಣಿಕರು- ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದ ಅಧಿಕಾರಿ

ತಿರುಪತಿ, ಜೂನ್‌ 05: ಮಚಲಿಪಟ್ಟಣದಿಂದ ತಿರುಪತಿಗೆ ಹೋಗುತ್ತಿದ್ದ ರೈಲಿನಲ್ಲಿ ಭಾನುವಾರ ಮಧ್ಯರಾತ್ರಿ ಬೆಂಕಿ ಕಾಣಿಸಿಕೊಂಡಿದೆ. ಆಂಧ್ರಪ್ರದೇಶದ ಪ್ರಕಾಶಂ ಜಿಲ್ಲೆಯ ಟಂಗುಟೂರು ನಿಲ್ದಾಣದಲ್ಲಿ ಬೆಂಕಿ ಹೊತ್ತಿಕೊಂಡಿದೆ. ನಿದ್ದೆಯಲ್ಲಿದ್ದ ಪ್ರಯಾಣಿಕರು ಜ್ವಾಲೆಯನ್ನು ಕಂಡು ಬೆಚ್ಚಿಬಿದ್ದು ಹೊರಗೆ ಧಾವಿಸಿದ್ದಾರೆ ಎಂದು ಟಿವಿ9 ತೆಲುಗು ವರದಿ ಮಾಡಿದೆ.

ಬೆಂಕಿ ಕಾಣಿಸಿಕೊಂಡ ತಕ್ಷಣ ರೈಲ್ವೆ ಸಿಬ್ಬಂದಿಗೆ ಮಾಹಿತಿ ನೀಡಲಾಯಿತು. ಕೂಡಲೇ ಎಚ್ಚೆತ್ತ ಅಧಿಕಾರಿಗಳು ರೈಲನ್ನು ನಿಲ್ಲಿಸಿ ಪರಿಸ್ಥಿತಿಯನ್ನು ಹತೋಟಿಗೆ ತಂದರು. ಲೂಬ್ರಿಕೇಶನ್ ಖಾಲಿಯಾದ ಕಾರಣ ಚಕ್ರಗಳ ನಡುವಿನ ಘರ್ಷಣೆಯಿಂದಾಗಿ ಬೆಂಕಿ ಹೊತ್ತಿಕೊಂಡಿದೆ ಎಂದು ವರದಿಯಾಗಿದೆ.

Tirupati-Machilipatnam train catches fire

ಜೂನ್ 2 ರಂದು ಒಡಿಶಾದಲ್ಲಿ ನಡೆದ ಭೀಕರ ರೈಲು ಅಪಘಾತದಲ್ಲಿ 288 ಜನರು ಸಾವನ್ನಪ್ಪಿದ್ದು, ಸಾವಿರಾರು ಮಂದಿ ಗಾಯಗೊಂಡ ಬಳಿಕ ಈ ಘಟನೆ ನಡೆದಿದೆ. ಯಶವಂತಪುರ-ಹೌರಾ ಸೂಪರ್‌ಫಾಸ್ಟ್ ರೈಲು, ಕೋರಮಂಡಲ್ ಎಕ್ಸ್‌ಪ್ರೆಸ್ ಹಾಗೂ ಗೂಡ್ಸ್ ರೈಲುಗಳ ನಡುವೆ ಅಪಘಾತ ಸಂಭವಿಸಿದೆ.

ರೈಲ್ವೆ ಇಲಾಖೆಯ ನೇತೃತ್ವದ ತನಿಖೆಗಳು ಈಗಾಗಲೇ ಪ್ರಾರಂಭವಾಗಿದ್ದು, ಸಿಗ್ನಲ್ ದೋಷವು ಅಪಘಾತಕ್ಕೆ ಕಾರಣವಾಗಿದೆ ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ.

ಶುಕ್ರವಾರ ರಾತ್ರಿ ನಡೆದ ಮೂರು ರೈಲುಗಳ ಡಿಕ್ಕಿಯನ್ನು ಈ ಶತಮಾನದ ಭಾರತದ ಅತ್ಯಂತ ಭೀಕರ ರೈಲು ಅಪಘಾತ ಎಂದು ಹೇಳಲಾಗುತ್ತಿದೆ.

1,000ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಕೆಲವು ಕುಟುಂಬಗಳು ಇನ್ನೂ ತಮ್ಮವರಿಗಾಗಿ ಹುಟುಕಾಟ ನಡೆಸುತ್ತಿದ್ದಾರೆ.

ರೈಲ್ವೆ ಮಂಡಳಿ, ಸಚಿವಾಲಯದ ಉನ್ನತ ನಿರ್ಧಾರ ತೆಗೆದುಕೊಳ್ಳುವ ಸಂಸ್ಥೆ, ಕೇಂದ್ರೀಯ ತನಿಖಾ ದಳದಿಂದ (ಸಿಬಿಐ) ಪ್ರತ್ಯೇಕ ತನಿಖೆಗೆ ಶಿಫಾರಸು ಮಾಡಲಾಗಿದೆ.

Tirupati-Machilipatnam train catches fire

ಅಪಘಾತದ ಮೂಲ ಕಾರಣ ಮತ್ತು ಕ್ರಿಮಿನಲ್ ಪ್ರಕರಣಕ್ಕೆ ಕಾರಣವಾದ ಜನರನ್ನು ಗುರುತಿಸಲಾಗಿದೆ ಎಂದು ಸಚಿವ ಅಶ್ವಿನಿ ವೈಷ್ಣವ್ ಭಾನುವಾರ ಹೇಳಿದ್ದಾರೆ.

ಎಲೆಕ್ಟ್ರಾನಿಕ್ ಇಂಟರ್‌ಲಾಕಿಂಗ್‌ನಲ್ಲಿನ ಬದಲಾವಣೆ ಅಪಘಾತಕ್ಕೆ ಕಾರಣ ಎಂದು ಅವರು ಹೇಳಿದ್ದಾರೆ. ಅಂತಿಮ ವರದಿಗಾಗಿ ಜನರು ಕಾಯಬೇಕು ಎಂದು ಸಚಿವರು ಒತ್ತಾಯಿಸಿದ್ದಾರೆ.

ರೈಲ್ವೆ ಸುರಕ್ಷತಾ ಆಯುಕ್ತರ ವರದಿಯನ್ನು ಶೀಘ್ರದಲ್ಲೇ ಸಾರ್ವಜನಿಕಗೊಳಿಸಲಾಗುವುದು ಎಂದೂ ತಿಳಿದುಬಂದಿದೆ.

ಏತನ್ಮಧ್ಯೆ, ಸಿಗ್ನಲ್ ದೋಷ ಮತ್ತು ಎಲೆಕ್ಟ್ರಾನಿಕ್ ಇಂಟರ್‌ಲಾಕಿಂಗ್‌ನಲ್ಲಿನ ಬದಲಾವಣೆಯಿಂದಾಗಿ ಕೋರಮಂಡಲ್ ಎಕ್ಸ್‌ಪ್ರೆಸ್‌ನ ಎಂಜಿನ್ ಮತ್ತು ಕೋಚ್‌ಗಳು ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದವು ಎಂದು ರೈಲ್ವೆ ಭಾನುವಾರ ತಿಳಿಸಿದೆ.

ರೈಲ್ವೆ ಸಿಗ್ನಲಿಂಗ್‌ನಲ್ಲಿ ಎಲೆಕ್ಟ್ರಾನಿಕ್ ಇಂಟರ್‌ಲಾಕಿಂಗ್ ವ್ಯವಸ್ಥೆಯು ಪ್ರತಿ ರೈಲಿಗೆ ನಿಗದಿತ ಪ್ರದೇಶದಲ್ಲಿ ಮಾರ್ಗಗಳನ್ನು ಹೊಂದಿಸುತ್ತದೆ, ಟ್ರ್ಯಾಕ್‌ನ ಉದ್ದಕ್ಕೂ ರೈಲುಗಳ ಸುರಕ್ಷಿತ ಚಲನೆಯನ್ನು ಖಚಿತಪಡಿಸುತ್ತದೆ.

Tirupati-Machilipatnam train catches fire

ಅಪಘಾತದ ಪರಿಣಾಮ ಕೋರಮಂಡಲ್ ಎಕ್ಸ್‌ಪ್ರೆಸ್‌ನ ಬೋಗಿಗಳು ಮೂರನೇ ಟ್ರ್ಯಾಕ್‌ಗೆ ಎಸೆಯಲ್ಪಟ್ಟವು ಮತ್ತು ಅವುಗಳು ಅತಿವೇಗದಲ್ಲಿ ಬರುತ್ತಿದ್ದ ಬೆಂಗಳೂರು-ಹೌರಾ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್‌ನ ಹಿಂಭಾಗದ ಬೋಗಿಗಳಿಗೆ ಡಿಕ್ಕಿ ಹೊಡೆದವು ಎಂದು ಮಾಹಿತಿ ನೀಡಲಾಗಿದೆ.

ಎರಡು ಪ್ಯಾಸೆಂಜರ್ ರೈಲುಗಳಲ್ಲಿ 3,000 ಕ್ಕೂ ಹೆಚ್ಚು ಪ್ರಯಾಣಿಕರು ಇದ್ದರು ಎಂದು ಅಂದಾಜಿಸಲಾಗಿದೆ.

ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ (ಎನ್‌ಡಿಆರ್‌ಎಫ್) ಮುಖ್ಯಸ್ಥ ಅತುಲ್ ಕರ್ವಾಲ್, ಡಿಕ್ಕಿಯ ಬಲದಿಂದ ಹಲವಾರು ಕೋಚ್‌ಗಳು ನಜ್ಜುಗುಜ್ಜಾಗಿವೆ ಎಂದಿದ್ದಾರೆ.

ನೂರಾರು ಆಂಬ್ಯುಲೆನ್ಸ್‌ಗಳು, ವೈದ್ಯರು, ದಾದಿಯರು ಮತ್ತು ರಕ್ಷಣಾ ಸಿಬ್ಬಂದಿಯನ್ನು ಘಟನಾ ಸ್ಥಳಕ್ಕೆ ಕಳುಹಿಸಲಾಗಿದೆ. ಪ್ರಯಾಣಿಕರನ್ನು ರಕ್ಷಿಸಲು ಮತ್ತು ದೇಹಗಳನ್ನು ಹೊರತೆಗೆಯಲು 18 ಗಂಟೆಗಳ ಕಾಲ ಶ್ರಮಿಸಲಾಗಿದೆ.

ಅಪಘಾತ ಸಂಭವಿಸಿದ ರೈಲ್ವೆ ಹಳಿಗಳಲ್ಲಿ ರೈಲು ಸಂಚಾರವನ್ನು ಮರುಸ್ಥಾಪಿಸಲಾಗಿದೆ ಎಂದು ಅಶ್ವಿನಿ ವೈಷ್ಣವ್ ಹೇಳಿದ್ದಾರೆ. ಇನ್ನೂ ಹಲವಾರು ಪ್ರಯಾಣಿಕರು ನಾಪತ್ತೆಯಾಗಿದ್ದಾರೆ ಎಂದು ವರದಿಗಳು ತಿಳಿಸಿವೆ.

ದುರಂತದ ನೈತಿಕ ಹೊಣೆ ಹೊತ್ತು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌ ರಾಜೀನಾಮೆ ನೀಡಬೇಕೆಂದು ವಿರೋಧ ಪಕ್ಷಗಳ ನಾಯಕರು ಒತ್ತಾಯಿಸಿದ್ದಾರೆ. ಅಪಘಾತವನ್ನು ರಾಜಕೀಯಗೊಳಿಸಬೇಡಿ ಎಂದು ಆಡಳಿತಾರೂಢ ಭಾರತೀಯ ಜನತಾ ಪಕ್ಷ ಹೇಳಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+