• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

100 ಹೆಚ್ಚುವರಿ ರೈಲುಗಳ ಸಂಚಾರಕ್ಕೆ ಸಿದ್ಧತೆ ಆರಂಭ

|
Google Oneindia Kannada News

ನವದೆಹಲಿ, ಜೂನ್ 15; ವಿವಿಧ ರಾಜ್ಯಗಳಲ್ಲಿ ಲಾಕ್‌ಡೌನ್ ನಿಯಮಗಳನ್ನು ಸಡಿಲಿಕೆ ಮಾಡಲಾಗಿದೆ. ಇದರಿಂದಾಗಿ ಜನರ ಸಂಚಾರ ಹೆಚ್ಚಾಗಲಿದೆ. ಆದ್ದರಿಂದ ಭಾರತೀಯ ರೈಲ್ವೆ 100 ಹೆಚ್ಚುವರಿ ರೈಲುಗಳನ್ನು ಓಡಿಸಲು ಮುಂದಾಗಿದೆ.

ಕಳೆದ ಬಾರಿಯ ಲಾಕ್‌ಡೌನ್ ಘೋಷಣೆ ಬಳಿಕ ಭಾರತೀಯ ರೈಲ್ವೆ ಇನ್ನೂ ಪೂರ್ಣ ಪ್ರಮಾಣದಲ್ಲಿ ರೈಲು ಸಂಚಾರವನ್ನು ಆರಂಭಿಸಿಲ್ಲ. ಹಬ್ಬದ ವಿಶೇಷ, ವಿಶೇಷ ರೈಲುಗಳನ್ನು ಮಾತ್ರ ಓಡಿಸುತ್ತಿದೆ.

224 ಆಕ್ಸಿಜನ್ ಎಕ್ಸ್‌ಪ್ರೆಸ್‌ ರೈಲು ಒದಗಿಸಿದ ಪ್ರಾಣವಾಯು ಎಷ್ಟು? 224 ಆಕ್ಸಿಜನ್ ಎಕ್ಸ್‌ಪ್ರೆಸ್‌ ರೈಲು ಒದಗಿಸಿದ ಪ್ರಾಣವಾಯು ಎಷ್ಟು?

ಪ್ರಯಾಣಿಕರ ಬೇಡಿಕೆ ಹೆಚ್ಚಿರುವ ಮಾರ್ಗದಲ್ಲಿ ಈ ವಾರದಿಂದಲೇ ಹೆಚ್ಚುವರಿ ರೈಲು ಓಡಿಸಲು ಯೋಜನೆ ರೂಪಿಸಲಾಗಿದೆ. ಹೆಚ್ಚು ದೂರದ ಸ್ಥಳಗಳಿಗೆ ಎಕ್ಸ್‌ಪ್ರೆಸ್ ರೈಲುಗಳನ್ನು ಓಡಿಸಲಾಗುತ್ತದೆ.

ಹೌರಾ-ಮೈಸೂರು ವಿಶೇಷ ಬೇಸಿಗೆ ಎಕ್ಸ್‌ಪ್ರೆಸ್ ರೈಲು ಸೇವೆ ವಿಸ್ತರಣೆ ಹೌರಾ-ಮೈಸೂರು ವಿಶೇಷ ಬೇಸಿಗೆ ಎಕ್ಸ್‌ಪ್ರೆಸ್ ರೈಲು ಸೇವೆ ವಿಸ್ತರಣೆ

ಪ್ರತಿ ತಿಂಗಳು ಮುಂಗಡ ಟಿಕೆಟ್ ಬುಕ್ಕಿಂಗ್ ಮಾಡುವ ಪ್ರಮಾಣ ಹೆಚ್ಚಳವಾಗುತ್ತಿದೆ. ಕಳೆದ ತಿಂಗಳು ದಿನಕ್ಕೆ ಸುಮಾರು 5 ಲಕ್ಷ ಟಿಕೆಟ್ ಬುಕ್ ಆಗಿದೆ. ಈ ತಿಂಗಳು 14 ಲಕ್ಷಕ್ಕಿಂತ ಹೆಚ್ಚಿನ ಟಿಕೆಟ್ ಬುಕ್ ಆಗುತ್ತಿದೆ. ಆದ್ದರಿಂದ 100 ಹೆಚ್ಚುವರಿ ರೈಲು ಸಂಚಾರ ನಡೆಸಲಿದೆ.

ಬೆಂಗಳೂರು-ಧಾರವಾಡ ವಿಶೇಷ ಎಕ್ಸ್‌ಪ್ರೆಸ್ ರೈಲು ಸಂಚಾರ ಸ್ಥಗಿತ ಬೆಂಗಳೂರು-ಧಾರವಾಡ ವಿಶೇಷ ಎಕ್ಸ್‌ಪ್ರೆಸ್ ರೈಲು ಸಂಚಾರ ಸ್ಥಗಿತ

ಉತ್ತರ ಪ್ರದೇಶ, ಬಿಹಾರ, ಜಾರ್ಖಂಡ್, ಪಶ್ಚಿಮ ಬಂಗಾಳ, ಅಸ್ಸಾಂ ಮುಂತಾದ ರಾಜ್ಯಗಳಿಂದ ಬೆಂಗಳೂರು, ದೆಹಲಿ, ಮುಂಬೈ, ಹೈದರಾಬಾದ್‌ಗೆ ಹೆಚ್ಚು ವಲಸೆ ಕಾರ್ಮಿಕರು ಸಂಚಾರ ನಡೆಸಲಿದ್ದಾರೆ. ಆದ್ದರಿಂದ ಉತ್ತರ ಭಾರತದ ರಾಜ್ಯಗಳಿಂದ ಹೆಚ್ಚು ರೈಲು ಓಡಿಸಲು ಇಲಾಖೆ ಚಿಂತಿಸಿದೆ.

ಪ್ರಸ್ತುತ ದಿನಕ್ಕೆ 900 ವಿಶೇಷ ರೈಲುಗಳು ಸಂಚಾರ ನಡೆಸುತ್ತಿವೆ. ಕೋವಿಡ್ 2ನೇ ಅಲೆ ಆರಂಭಕ್ಕೂ ಮುನ್ನ 1,500 ರೈಲು ಸಂಚಾರ ನಡೆಸುತ್ತಿತ್ತು. ವಿವಿಧ ರಾಜ್ಯಗಳಲ್ಲಿ ಲಾಕ್‌ಡೌನ್ ಘೋಷಣೆ ಮಾಡಿದರೂ ರೈಲು ಸಂಚಾರ ನಡೆಸುತ್ತಲೇ ಇತ್ತು.

ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದ ರಾಜ್ಯಗಳಲ್ಲಿ ಲಾಕ್‌ಡೌನ್ ನಿಯಮಗಳನ್ನು ಸಡಿಲಿಕೆ ಮಾಡಲಾಗಿದೆ. ಇದರಿಂದಾಗಿ ಉದ್ಯೋಗ ಅರಸಿ ವಲಸೆ ಕಾರ್ಮಿಕರು ಹೆಚ್ಚಾಗಿ ಬರಲಿದ್ದು, ಇದಕ್ಕಾಗಿ ವಿಶೇಷ ರೈಲುಗಳನ್ನು ಓಡಿಸಲಾಗುತ್ತದೆ.

ಕಳೆದ ವರ್ಷ ಕೋವಿಡ್ ಲಾಕ್‌ಡೌನ್ ಘೋಷಣೆ ಮಾಡಿದ ಬಳಿಕ ಭಾರತೀಯ ರೈಲ್ವೆ ಹಲವಾರು ಬದಲಾವಣೆಗಳನ್ನು ಮಾಡಿದೆ. ದೂರದ ರೈಲುಗಳಿಗೆ ಆದ್ಯತೆ ನೀಡುತ್ತಿದೆ. ಕಡಿಮೆ ಆದಾಯವಿರುವ ನಿಲ್ದಾಣಗಳಲ್ಲಿ ರೈಲುಗಳ ನಿಲುಗಡೆ ಸ್ಥಗಿತಗೊಳಿಸಿದೆ.

ಹಬ್ಬದ ಸಂದರ್ಭದಲ್ಲಿ ಹೆಚ್ಚುವರಿ ರೈಲುಗಳನ್ನು ಓಡಿಸುವ ಮೂಲಕ ಜನರಿಗೆ ಅನುಕೂಲ ಮಾಡಿಕೊಡುತ್ತಿದೆ. ಪೂರ್ಣ ಪ್ರಮಾಣದಲ್ಲಿ ರೈಲು ಸೇವೆ ಎಂದು ಆರಂಭವಾಗಲಿದೆ? ಎಂದು ಜನರು ಸಹ ಕಾಯುತ್ತಿದ್ದಾರೆ.

English summary
Indian railways plan to run 100 additional train from this week in the route of high demand. Now railways running 900 special trains
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X