• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಚೀನಾಗೆ ಸಂದೇಶ: ಪ್ಯಾಂಗಾಂಗ್ ಸರೋವರದ ಬಳಿ ಹಾರಾಡಿದ ತ್ರಿವರ್ಣ ಧ್ವಜ

|
Google Oneindia Kannada News

ನವದೆಹಲಿ, ಆಗಸ್ಟ್.16: ಭಾರತ ಚೀನಾ ಗಡಿಯ ಪ್ಯಾಂಗಾಂಗ್ ಲೇಕ್ ನಲ್ಲಿ 74ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ತ್ರಿವರ್ಣ ಧ್ವಜವನ್ನು ಹಾರಿಸುವ ಮೂಲಕ ಡ್ರ್ಯಾಗನ್ ರಾಷ್ಟ್ರಕ್ಕೆ ಭಾರತೀಯ ಯೋಧರು ಸ್ಪಷ್ಟ ಸಂದೇಶ ರವಾನಿಸಲಾಗಿದೆ.
ಚೀನಾದೊಂದಿಗಿನ ಉದ್ವಿಗ್ನತೆ ನಡುವೆ ವಾಸ್ತವಿಕ ನಿಯಂತ್ರಣ ರೇಖೆಯುದ್ದಕ್ಕೂ ಸ್ವಾತಂತ್ರ್ಯ ದಿನಾಚರಣೆ ಮಾಡಲಾಯಿತು. ಇಂಡೋ-ಟಿಬೆಟಿಯನ್ ಬಾರ್ಡರ್ ಫೋರ್ಸ್‌ ಸಿಬ್ಬಂದಿ ತ್ರಿವರ್ಣ ಧ್ವಜವನ್ನು ಹಾರಿಸಿ ಮೆರವಣಿಗೆ ನಡೆಸಿದರು. ಭಾರತ್ ಮಾತಾ ಕಿ ಜೈ ಎಂಬ ಘೋಷಣೆಗಳನ್ನು ಕೂಗಿದರು.

ಚೀನಾಗೆ ತಿರುಗೇಟು ನೀಡಲು ಭಾರತದ ಕೈಗೆ ಅಮೆರಿಕಾದ 'ಅಸ್ತ್ರ'!
ಇದರ ನಡುವೆ ರಾಯಭಾರಿ ವಿಕ್ರಮ್ ಮಿಸ್ತ್ರಿ ಹಾಗೂ ಕೇಂದ್ರ ಮಿಲಿಟರಿ ಆಯೋಗದ ಅಂತಾರಾಷ್ಟ್ರೀಯ ಮಿಲಿಟರಿ ಸಹಕಾರ ಕಚೇರಿ ನಿರ್ದೇಶಕ ಮೇಜರ್ ಜನರಲ್ ಸಿ ಗುವೆ ಅವರೊಂದಿಗೆ ಮಾತುಕತೆ ನಡೆಸಿದರು. ಪೂರ್ವ ಲಡಾಖ್ ಗಡಿ ವಿಚಾರದಲ್ಲಿ ಭಾರತದ ನಿಲುವಿನ ಬಗ್ಗೆ ಮಿಸ್ತ್ರಿ ಸ್ಪಷ್ಟಪಡಿಸಿದರು.

ವಿದೇಶಾಂಗ ಸಚಿವಾಲಯದ ವಕ್ತಾರ ಅನುರಾಗ್ ಶ್ರೀವಾಸ್ತವ ಮಾತನಾಡಿ, ಎರಡೂ ಗಡಿ ಪ್ರದೇಶಗಳಲ್ಲಿ ಸೇನೆ ಹಿಂದಕ್ಕೆ ತೆಗೆದುಕೊಳ್ಳುವ ನಿಟ್ಟಿನಲ್ಲಿ ಒಂದೇ ತತ್ವಗಳನ್ನು ಅನುಸರಿಸಲಾಗುತ್ತಿದೆ. ಒಂದು ಸಂಕೀರ್ಣ ಪ್ರಕ್ರಿಯೆಯಲ್ಲಿ ವಾಸ್ತವಿಕ ನಿಯಂತ್ರಣ ರೇಖೆಯ ಎರಡೂ ಬದಿಗಳಲ್ಲಿ ಸೇನೆಯನ್ನು ನಿಯೋಜಿಸುವ ಅಗತ್ಯವಿದೆ. ಪರಸ್ಪರ ಉಭಯ ರಾಷ್ಟ್ರಗಳ ಸಮ್ಮತಿ ನಂತರವಷ್ಟೇ ಇದು ಸಾಧ್ಯವಾಗುತ್ತದೆ ಎಂದರು.
ಉಭಯ ರಾಷ್ಟ್ರಗಳ ಗಡಿಯಲ್ಲಿ ಸೇನಾ ಚಟುವಟಿಕೆಗಳನ್ನು ನಿಷ್ಕ್ರಿಯಗೊಳಿಸುವ ಪ್ರಕ್ರಿಯೆಯನ್ನು ಶೀಘ್ರದಲ್ಲೇ ಪೂರ್ಣಗೊಳಿಸುವುದಕ್ಕೆ ನಾವು ಬಯಸುತ್ತೇವೆ. ವಾಸ್ತವ ಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಎರಡು ಕಡೆಯವರು ಅದಕ್ಕೆ ಸಮ್ಮತಿಸಬೇಕಿದೆ ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ಅನುರಾಗ್ ಶ್ರೀವಾಸ್ತವ್ ತಿಳಿಸಿದ್ದಾರೆ.

English summary
Indian Soldiers Hoist Tricolour At Pangong Lake For Send Clear Message To China, Know More.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X