ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

1975ರ ಬಳಿಕ ಮೊದಲ ಬಾರಿ ಚೀನಾ ಗಡಿಯಲ್ಲಿ ಭಾರತೀಯ ಸೈನಿಕರ ಹತ್ಯೆ

|
Google Oneindia Kannada News

ಲಡಾಖ್, ಜೂನ್ 16: 1975ರ ಬಳಿಕ ಇದೇ ಮೊದಲ ಬಾರಿಗೆ ಚೀನಾ ಗಡಿಯಲ್ಲಿ ಭಾರತೀಯ ಸೈನಿಕರನ್ನು ಹತ್ಯೆ ಮಾಡಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

Recommended Video

IPL might start from 26th September | IPL 2020 | Oneindia Kannada

ಭಾರತ ಹಾಗೂ ಚೀನಾ ನಡುವೆ ನಡೆದ ಸಂಘರ್ಷದಲ್ಲಿ ಭಾರತೀಯ ಸೇನೆಯ ಸೇನಾಧಿಕಾರಿ ಹಾಗೂ ಇಬ್ಬರು ಸೈನಿಕರು ಮೃತಪಟ್ಟಿದ್ದಾರೆ.

ಭಾರತ-ಚೀನಾ ಮುಖಾಮುಖಿ: ಸೇನಾಧಿಕಾರಿ, ಮೂವರು ಸೈನಿಕರು ಹುತಾತ್ಮಭಾರತ-ಚೀನಾ ಮುಖಾಮುಖಿ: ಸೇನಾಧಿಕಾರಿ, ಮೂವರು ಸೈನಿಕರು ಹುತಾತ್ಮ

ಗಲ್ವಾನ್ ಕಣಿವೆಯಲ್ಲಿ ಸೋಮವಾರ ರಾತ್ರಿ ಉಭಯ ಸೇನೆಗಳ ನಡುವೆ ಮುಖಾಮುಖಿ ನಡೆದಿತ್ತು. 1975ರಲ್ಲಿ ಅರುಣಾಚಲಪ್ರದೇಶದ ನಾಲ್ವರು ಭಾರತೀಯ ಸೈನಿಕರನ್ನು ಚೀನಾ ಸೇನೆಯು ಹತ್ಯೆ ಮಾಡಿತ್ತು.

Indian Soldiers Killed On China Border First Time Since 1975

1975ರ ಅಕ್ಟೋಬರ್ 20 ರಂದು ಅರುಣಾಚಲ ಪ್ರದೇಶದಲ್ಲಿ ನಡೆದ ದಾಳಿಯಲ್ಲಿ ಅಸ್ಸಾಂನ ಸೈನಿಕರು ಸಾವನ್ನಪ್ಪಿದ್ದರು.ಗಲ್ವಾನ್ ಕಣಿವೆಯಲ್ಲಿ ಪರಿಸ್ಥಿತಿ ಉಲ್ಬಣಗೊಂಡಿದೆ.

ಸೋಮವಾರ ನಡೆದ ಘರ್ಷಣೆಯಲ್ಲಿ ಮೂವರು ಭಾರತೀಯ ಯೋಧರು ಹುತಾತ್ಮರಾಗಿದ್ದಾರೆ. ಪರಿಸ್ಥಿತಿಯನ್ನು ನಿಯಂತ್ರಿಸಲು ಹಿರಿಯ ಮಿಟಲಿರಿ ಅಧಿಕಾರಿಗಳು ಸಭೆ ಸೇರುತ್ತಿದ್ದಾರೆ. ಆದರೆ ಪಠಾಣ್‌ಕೋಟ್ ಮಿಲಿಟರಿ ಕೇಂದ್ರಕ್ಕೆ ಭೇಟಿಯನ್ನು ಸೇನಾ ಮುಖ್ಯಸ್ಥ ಎಂಎಂ ನರವಾಣೆ ರದ್ದುಗೊಳಿಸಿದ್ದಾರೆ.

ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಸೇನಾ ಸಿಬ್ಬಂದಿ ಮುಖ್ಯಸ್ಥ ಬಿಪಿನ್ ರಾವತ್ ಜೊತೆಗೆ ಸಭೆ ನಡೆಸಿದ್ದಾರೆ.ಗಡಿ ಸುರಕ್ಷತೆ ಹೆಚ್ಚಿಸುವ ಜೊತೆಗೆ ಉದ್ವಿಗ್ನತೆ ಕಡಿಮೆ ಮಾಡುವ ಕ್ರಮಗಳನ್ನು ಕೈಗೊಳ್ಳುವಂತೆ ರಾಜನಾಥ್ ಸಿಂಗ್, ಶಾಂತಿ ಕಾಪಾಡಲು ಹೆಚ್ಚಿನ ಒತ್ತು ನೀಡಬೇಕು ಎಂದು ಸೂಚನೆ ನೀಡಿದ್ದಾರೆ ಎನ್ನಲಾಗಿದೆ.

ರಾಜನಾಥ್ ಸಿಂಗ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಸೇನಾ ಸಿಬ್ಬಂದಿ ಮುಖ್ಯಸ್ಥ ಬಿಪಿನ್ ರಾವತ್, ಮೂರೂ ರಕ್ಷಣಾಪಡೆಗಳ ಮುಖ್ಯಸ್ಥರು ಹಾಗೂ ವಿದೇಶಾಂಗ ಸಚಿವ ಎಸ್. ಜೈಶಂಕರ್ ಉಪಸ್ಥಿತರಿದ್ದರು.

English summary
It's the first incident in more than four decades resulting in fatalities. In 1975, four Indian soldiers had died in a Chinese ambush in Arunachal Pradesh.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X