Indian Weather: ದೇಶದ ಈ ಭಾಗಗಳಲ್ಲಿ ಮುಂದಿನ ಮೂರು ದಿನ ಗುಡುಗು ಸಹಿತ ಭಾರೀ ಮಳೆ ಮುನ್ಸೂಚನೆ
Indian Weather: ಈಗಾಗಲೇ ದೇಶದ ಬಹುತೇಕ ರಾಜ್ಯಗಳಲ್ಲಿ ಮುಂಗಾರು ಚುರುಕು ಪಡೆದಿದ್ದು, ಗುಡುಗು, ಸಡಿಲು ಸಹಿತ ಮಳೆ ಸುರಿಯುತ್ತಿದೆ. ಅಲ್ಲದೇ ಈ ಭಾಗಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದರೆ ಎಲ್ಲೆಲ್ಲಿ ಭಾರೀ ಮಳೆ ಎನ್ನುವ ಮಾಹಿತಿಯನ್ನು ಇಲ್ಲಿ ಗಮನಿಸಿ.
ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ಪ್ರಕಾರ, ಪೂರ್ವ ಮತ್ತು ವಾಯುವ್ಯ ಭಾರತದಲ್ಲಿ ಮುಂದಿನ 3-4 ದಿನಗಳವರೆಗೆ ತಾಪಮಾನದಲ್ಲಿ ಏರಿಕೆಯಾಗುವ ಸಾಧ್ಯತೆಯಿದೆ. ಮತ್ತೊಂದೆಡೆ ಈಶಾನ್ಯ ಭಾರತ, ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂನಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.

ಈ ರಾಜ್ಯಗಳಿಗೆ ರೆಡ್ ಅಲರ್ಟ್: ಹವಾಮಾನ ಇಲಾಖೆ ಪ್ರಕಾರ, ಪೂರ್ವ ಉತ್ತರ ಪ್ರದೇಶಕ್ಕೆ ಜೂನ್ 13 ರಿಂದ ಜೂನ್ 16 ರವರೆಗೆ, ಬಿಹಾರಕ್ಕೆ ಜೂನ್ 13 ರಿಂದ ಮತ್ತು ಪಶ್ಚಿಮ ಉತ್ತರ ಪ್ರದೇಶಕ್ಕೆ ಜೂನ್ 13 ರಿಂದ ಜೂನ್ 16, ಉತ್ತರ ಪ್ರದೇಶಕ್ಕೆ ಜೂನ್ 13 ರಿಂದ ಜೂನ್ 16ರ ವರೆಗೆ ತಾಪಾಮನದಲ್ಲಿ ಏರಿಕೆಯಾಗಲಿರುವ ಹಿನ್ನೆಲೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಅಷ್ಟೇ ಅಲ್ಲದೆ, ಇದೇ ವೇಳೆ ಜಾರ್ಖಂಡ್‌ನಲ್ಲೂ ಜೂನ್ 13 ರಿಂದ ಜೂನ್ 14ರವರೆಗೆ ರೆಡ್ ಅಲರ್ಟ್ ಘೋಷಿಸಲಾಗಿದೆ.
ಕೆಲವು ದಿನಗಳ ಕಾಲ ನವದೆಹಲಿ, ಉತ್ತರಾಖಂಡ, ಪಂಜಾಬ್, ಚಂಡೀಗಢ ಮತ್ತು ಹರಿಯಾಣ, ಒಡಿಶಾ, ಹಿಮಾಚಲ ಪ್ರದೇಶ, ಜಮ್ಮು, ವಾಯವ್ಯ ರಾಜಸ್ಥಾನ, ಈಶಾನ್ಯ ರಾಜಸ್ಥಾನ ಮತ್ತು ಈಶಾನ್ಯ ಮಧ್ಯಪ್ರದೇಶದಲ್ಲಿ ಜೂನ್ 13 ಮತ್ತು ಜೂನ್ 14ರಂದು ತಾಪಮಾನದಲ್ಲಿ ಏರಿಕೆಯಾಗುವ ಸಾಧ್ಯತೆಯಿದೆ.
ಮುಂದಿನ ಮೂರು ದಿನಗಳ ಕಾಲ ಮಹಾರಾಷ್ಟ್ರದ ಹೆಚ್ಚಿನ ಪ್ರದೇಶಗಳು, ಛತ್ತೀಸ್‌ಗಢ ಮತ್ತು ತೆಲಂಗಾಣದ ಕೆಲವು ಸ್ಥಳಗಳಲ್ಲಿ, ಕರಾವಳಿ ಆಂಧ್ರಪ್ರದೇಶ, ಒಡಿಶಾದ ಕೆಲವು ಭಾಗಗಳು ಮತ್ತು ವಾಯುವ್ಯ ಬಂಗಾಳ ಕೊಲ್ಲಿಯಲ್ಲಿ ಮುಂಗಾರು ಚುರುಕು ಪಡೆಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಇನ್ನು ಚಂಡಮಾರುತದ ಪರಿಚಲನೆ ಇರಲಿದ್ದು, ಇದರ ಪ್ರಭಾವ ಈಶಾನ್ಯ ಅಸ್ಸಾಂ ಮತ್ತು ಪಕ್ಕದ ಪ್ರದೇಶಗಳಲ್ಲಿ ಬೀರಲಿದೆ. ಅಲ್ಲದೆ, ಬಾಂಗ್ಲಾದೇಶ ಮತ್ತು ಇಲ್ಲಿನ ಅಕ್ಕಪಕ್ಕದ ಪ್ರದೇಶಗಳ ಮೇಲೂ ಚಂಡಮಾರುತದ ಪ್ರಭಾವ ಬೀರಲಿದೆ.
ಹಾಗೆಯೇ ಇದೇ ವೇಳೆ ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ, ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂನಲ್ಲಿ ನಾಲ್ಕು ದಿನಗಳ ಕಾಲ ಭಾರೀ ಮಳೆಯಾಗಲಿದೆ. ಇಂದು (ಜೂನ್ 13) ಸಿಕ್ಕಿಂ ಮತ್ತು ಪಶ್ಚಿಮ ಬಂಗಾಳದಲ್ಲಿ ಭಾರೀ ಮಳೆಯಾಗಲಿದೆ. ಮೇಘಾಲಯ ಮತ್ತು ಅಸ್ಸಾಂನಲ್ಲಿ ಮುಂದಿನ ಎರಡು ದಿನಗಳ ಕಾಳ ಇದೇ ವೇತಾವರಣ ಇರಲಿದೆ. ಮಧ್ಯಪ್ರದೇಶ, ಛತ್ತೀಸ್‌ಗಢ, ಬಿಹಾರ, ಒಡಿಶಾದಲ್ಲಿ ಮಿಂಚು, ಗುಡುಗು ಸಹಿತ ಸಾಧಾರಣ ಮಳೆ ಸುರಿಯುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.












Click it and Unblock the Notifications