ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 7,830 ಹೊಸ ಪ್ರಕರಣಗಳು ದಾಖಲು, ನಿನ್ನೆಗಿಂತ ತೀವ್ರ ಏರಿಕೆ

ನವದೆಹಲಿ, ಏಪ್ರಿಲ್ 11: ಭಾರತದಲ್ಲಿ ಬುಧವಾರ ಒಂದೇ ದಿನ 7,830 ಹೊಸ ಕೊರೊನಾವೈರಸ್ ಪ್ರಲರಣಗಳು ವರದಿಯಾಗಿದ್ದು, ಇದು 223 ದಿನಗಳಲ್ಲಿ ಅತ್ಯಧಿಕವಾಗಿದೆ. ಇದರಿಂದಾಗಿ ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 40,215 ಕ್ಕೆ ಏರಿದೆ ಎಂದು ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿದ ಮಾಹಿತಿ ಬಹಿರಂಗಪಡಿಸಿದೆ.

ದೆಹಲಿ, ಪಂಜಾಬ್ ಮತ್ತು ಹಿಮಾಚಲ ಪ್ರದೇಶದಲ್ಲಿ ತಲಾ ಇಬ್ಬರು ಮತ್ತು ಗುಜರಾತ್, ಮಹಾರಾಷ್ಟ್ರ, ತಮಿಳುನಾಡು, ಹರಿಯಾಣ ಮತ್ತು ಉತ್ತರ ಪ್ರದೇಶದಲ್ಲಿ ತಲಾ ಒಬ್ಬರು ಕೊರೊನಾ ವೈರಸ್‌ಗೆ ಬಲಿಯಾಗಿದ್ದಾರೆ. ಈ 16 ಹೊಸ ಸಾವುಗಳ ವರದದಿಯೊಂದಿಗೆ ಸಾಂಕ್ರಾಮಿಕ ರೋಗದ ಸಾವಿನ ಸಂಖ್ಯೆ 5,31,016 ಕ್ಕೆ ಏರಿಕೆಯಾಗಿದೆ. ಕೇರಳ ಒಂದರಲ್ಲೇ ಐದು ವೈರಸ್ ಸಂಬಂಧಿತ ಸಾವುಗಳು ದಾಖಲಾಗಿವೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.

Indias Active Caseload Jumps to 40,215 with 7,830 New Cases in the last 24 hours

ಇಂದು ವರದಿಯಾದ ಹೊಸ ಕೊರೊನಾ ಪ್ರಕರಣಗಲ ಸಂಖ್ಯೆಯಲ್ಲಿ ನಿನ್ನೆಯಿಂದ ತೀವ್ರ ಏರಿಕೆಯಾಗಿದೆ. ಭಾರತದಲ್ಲಿ ನಿನ್ನೆ 5,676 ಪ್ರಕರಣಗಳು ವರದಿಯಾಗಿದ್ದವು. ಇದುವರೆಗೆ ದೇಶದಲ್ಲಿ ವರದಿಯಾದ ಒಟ್ಟು ಕೋವಿಡ್ ಪ್ರಕರಣಗಳ ಸಂಖ್ಯೆಯನ್ನು 4,47,76,002 ಕ್ಕೆ ಏರಿಕೆಯಾಗಿದೆ. ಕಳೆದ ವರ್ಷ ಸೆಪ್ಟೆಂಬರ್ 1 ರಂದು ದೇಶದಲ್ಲಿ 7,946 ಪ್ರಕರಣಗಳು ವರದಿಯಾಗಿದ್ದವು. ಇದಾದ ಬಳಿಕ ಇಂದು ಮತ್ತೆ ಸೋಂಕುಗಳು 7000ದ ಗಡಿ ದಾಟಿವೆ.

ಆರೋಗ್ಯ ಸಚಿವಾಲಯದ ವೆಬ್‌ಸೈಟ್ ಪ್ರಕಾರ, ಸಕ್ರಿಯ ಪ್ರಕರಣಗಳು ಈಗ ಒಟ್ಟು ಸೋಂಕುಗಳ ಶೇಕಡಾ 0.09 ರಷ್ಟಿದ್ದರೆ, ರಾಷ್ಟ್ರೀಯ ಕೊರೊನಾ ಚೇತರಿಕೆ ದರವು ಶೇಕಡಾ 98.72 ರಷ್ಟಿದೆ. ರೋಗದಿಂದ ಚೇತರಿಸಿಕೊಂಡವರ ಸಂಖ್ಯೆ 4,42,04,771 ಕ್ಕೆ ಏರಿದೆ, ಆದರೆ ಪ್ರಕರಣದ ಸಾವಿನ ಪ್ರಮಾಣವು ಶೇಕಡಾ 1.19 ರಷ್ಟಿದೆ ಎಂದು ಅಂಕಿ ಅಂಶಗಳು ತೋರಿಸಿವೆ.

Indias Active Caseload Jumps to 40,215 with 7,830 New Cases in the last 24 hours

ಇದರ ಜೊತೆಗೆ ಸಚಿವಾಲಯದ ವೆಬ್‌ಸೈಟ್ ಪ್ರಕಾರ, ರಾಷ್ಟ್ರವ್ಯಾಪಿ ಕೋವಿಡ್-19 ಲಸಿಕೆ ಅಭಿಯಾನದಡಿಯಲ್ಲಿ ದೇಶದಲ್ಲಿ ಇದುವರೆಗೆ 220.66 ಕೋಟಿ ಡೋಸ್ ಲಸಿಕೆಗಳನ್ನು ನೀಡಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+