ಭಾರತದಲ್ಲಿ 16 ಲಕ್ಷ ದಾಟಿತು ಕೊವಿಡ್-19 ಪ್ರಕರಣಗಳ ಸಂಖ್ಯೆ!
ನವದೆಹಲಿ, ಜುಲೈ.30: ಭಾರತದಲ್ಲಿ ಕೊರೊನಾವೈರಸ್ ಸೋಂಕಿತ ಅಟ್ಟಹಾಸ ದಿನದಿಂದ ದಿನಕ್ಕೆ ಜನರಲ್ಲಿ ಭಯವನ್ನು ಹೆಚ್ಚಿಸುತ್ತಿದೆ. ದೇಶದಲ್ಲಿ ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ ಐತಿಹಾಸಿಕ ಮಟ್ಟದಲ್ಲಿ ಏರಿಕೆಯಾಗಿದ್ದು, 16 ಲಕ್ಷದ ಗಡಿ ದಾಟಿದೆ.
ಗುರುವಾರದ ಅಂಕಿ-ಅಂಶಗಳ ಪ್ರಕಾರ ಭಾರತದಲ್ಲಿ 24 ಗಂಟೆಗಳಲ್ಲೇ 54,708 ಮಂದಿಗೆ ಕೊರೊನಾವೈರಸ್ ಸೋಂಕು ತಗಲಿರುವುದು ವೈದ್ಯಕೀಯ ತಪಾಸಣೆ ವೇಳೆಯಲ್ಲಿ ದೃಢಪಟ್ಟಿದೆ. ಇದರಿಂದ ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆಯು 16,39,092ಕ್ಕೆ ಏರಿಕೆಯಾಗಿದೆ.
ಒಂದೇ ದಿನ ದೇಶದಲ್ಲಿ 780 ಮಂದಿ ಕೊರೊನಾವೈರಸ್ ಸೋಂಕಿನಿಂದ ಪ್ರಾಣ ಬಿಟ್ಟಿದ್ದು, ಒಟ್ಟು ಸಾವಿನ ಸಂಖ್ಯೆಯು 35,783ಕ್ಕೆ ಏರಿಕೆಯಾಗಿದೆ. ಒಟ್ಟು 16,39,092 ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಪೈಕಿ 1,057,395 ಸೋಂಕಿತರ ಗುಣಮುಖರಾಗಿದ್ದಾರೆ. ಬಾಕಿ ಉಳಿದ 545,914 ಮಂದಿಗೆ ಸೋಂಕಿತರಿಗೆ ನಿಗದಿತ ಆಸ್ಪತ್ರೆ ಮತ್ತು ಕೊವಿಡ್ ಕೇರ್ ಗಳಲ್ಲಿ ಚಿಕಿತ್ಸೆ ನೀಡಲಾಗುತ್ತದೆ.

ಮಹಾರಾಷ್ಟ್ರದಲ್ಲಿ ಅತಿಹೆಚ್ಚು ಪ್ರಕರಣ ದಾಖಲು:
ಕಳೆದ 24 ಗಂಟೆಗಳಲ್ಲೇ ಪತ್ತೆಯಾದ ಒಟ್ಟು ಸೋಂಕಿತರ ಸಂಖ್ಯೆಯು ಹೊಸ ದಾಖಲೆಯನ್ನು ಬರೆದಿದ್ದು, ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆಯು 4 ಲಕ್ಷದ ಗಡಿಯನ್ನೂ ಮೀರಿ ಹೋಗಿದೆ. ಗುರುವಾರ ಮಹಾರಾಷ್ಟ್ರದಲ್ಲಿ ಒಂದೇ ದಿನ ಬರೋಬ್ಬರಿ 11147 ಮಂದಿಗೆ ಕೊರೊನಾವೈರಸ್ ಸೋಂಕು ತಗಲಿರುವುದು ವೈದ್ಯಕೀಯ ತಪಾಸಣೆ ಸಂದರ್ಭದಲ್ಲಿ ದೃಢಪಟ್ಟಿದೆ. ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆಯು 411798ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ 266 ಮಂದಿ ಕೊರೊನಾವೈರಸ್ ಸೋಂಕಿನಿಂದ ಪ್ರಾಣ ಬಿಟ್ಟಿದ್ದು, ಇದುವರೆಗೂ ರಾಜ್ಯದಲ್ಲಿ ಮಹಾಮಾರಿಯಿಂದಾಗಿ 14,729 ಮಂದಿ ಉಸಿರು ಚೆಲ್ಲಿದ್ದಾರೆ.
ಕರ್ನಾಟಕದಲ್ಲಿ ಒಂದೇ ದಿನ 6128 ಮಂದಿಗೆ ಕೊರೊನಾ ವೈರಸ್ ದೃಢವಾಗಿದೆ. ಇಂದಿನ ವರದಿ ಬಳಿಕ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 118632ಕ್ಕೆ ಏರಿಕೆಯಾಗಿದೆ. - ಇಂದು ಒಂದೇ ದಿನ ರಾಜ್ಯದಲ್ಲಿ 83 ಜನರು ಕೊವಿಡ್‌ಗೆ ಬಲಿಯಾಗಿದ್ದಾರೆ. - ಇದುವರೆಗೂ ರಾಜ್ಯದಲ್ಲಿ ಒಟ್ಟು ಮೃತಪಟ್ಟವರ ಸಂಖ್ಯೆ 2230ಕ್ಕೆ ಜಿಗಿದಿದೆ.












Click it and Unblock the Notifications