ಭಾರತದಲ್ಲಿ 15 ಲಕ್ಷ ಗಡಿ ದಾಟಿದ ಕೊರೊನಾವೈರಸ್ ಪ್ರಕರಣ

ನವದೆಹಲಿ, ಜುಲೈ.28: ಭಾರತದಲ್ಲಿ ಕೊರೊನಾವೈರಸ್ ಸೋಂಕು ಸಮುದಾಯಕ್ಕೆ ಹರಡುತ್ತಿರುವ ಅನುಮಾನ ದಟ್ಟವಾಗಿದೆ. ದೇಶದಲ್ಲಿ ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ ಐತಿಹಾಸಿಕ ಮಟ್ಟದಲ್ಲಿ ಏರಿಕೆಯಾಗಿದ್ದು, 15 ಲಕ್ಷದ ಗಡಿ ದಾಟಿದೆ.

Recommended Video

      DK Shivakumar ಇಂದು ಮಂಗಳಮುಖಿಯರ ಕಷ್ಟಕ್ಕೆ ಕಿವಿ ಕೊಟ್ಟರು | Oneindia Kannada

      ಮಂಗಳವಾರದ ಅಂಕಿ-ಅಂಶಗಳ ಪ್ರಕಾರ ಭಾರತದಲ್ಲಿ 24 ಗಂಟೆಗಳಲ್ಲೇ 47,861 ಮಂದಿಗೆ ಕೊರೊನಾವೈರಸ್ ಸೋಂಕು ತಗಲಿರುವುದು ವೈದ್ಯಕೀಯ ತಪಾಸಣೆ ವೇಳೆಯಲ್ಲಿ ದೃಢಪಟ್ಟಿದೆ. ಇದರಿಂದ ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆಯು 15,30,364ಕ್ಕೆ ಏರಿಕೆಯಾಗಿದೆ.

      ಒಂದೇ ದಿನ ದೇಶದಲ್ಲಿ 776 ಮಂದಿ ಕೊರೊನಾವೈರಸ್ ಸೋಂಕಿನಿಂದ ಪ್ರಾಣ ಬಿಟ್ಟಿದ್ದು, ಒಟ್ಟು ಸಾವಿನ ಸಂಖ್ಯೆಯು 34,224ಕ್ಕೆ ಏರಿಕೆಯಾಗಿದೆ. ಒಟ್ಟು 15,30,364 ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಪೈಕಿ 987,357 ಸೋಂಕಿತರ ಗುಣಮುಖರಾಗಿದ್ದಾರೆ. ಬಾಕಿ ಉಳಿದ 508,783 ಮಂದಿಗೆ ಸೋಂಕಿತರಿಗೆ ನಿಗದಿತ ಆಸ್ಪತ್ರೆ ಮತ್ತು ಕೊವಿಡ್ ಕೇರ್ ಗಳಲ್ಲಿ ಚಿಕಿತ್ಸೆ ನೀಡಲಾಗುತ್ತದೆ.

      Indias Coronavirus Cases Rises Crosses 15 Lakh-Mark


      ಮಹಾರಾಷ್ಟ್ರದಲ್ಲಿ ಅತಿಹೆಚ್ಚು ಪ್ರಕರಣ ದಾಖಲು:

      ರಾಜ್ಯದಲ್ಲಿ ಒಂದೇ ದಿನ 7,717 ಮಂದಿಗೆ ಕೊರೊನಾವೈರಸ್ ಸೋಂಕು ತಗಲಿರುವುದು ವೈದ್ಯಕೀಯ ತಪಾಸಣೆ ವೇಳೆ ದೃಢಪಟ್ಟಿದೆ. ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆಯು 3,91,440 ಏರಿಕೆಯಾಗಿದ್ದು, ಈ ಪೈಕಿ 2,32,277 ಸೋಂಕಿತರು ಗುಣಮುಖರಾಗಿದ್ದಾರೆ. 1,44,694 ಸಕ್ರಿಯ ಪ್ರಕರಣಗಳು ದಾಖಲಾಗಿದ್ದು, ರಾಜ್ಯದಲ್ಲಿ ಗುಣಮುಖರಾಗುತ್ತಿರುವವರ ಪ್ರಮಾಣ ಶೇ.59.34ರಷ್ಟಿದೆ. ಇನ್ನು, ಮಹಾಮಾರಿಗೆ ಇದುವರೆಗೂ 14165 ಜನರು ಉಸಿರು ಚೆಲ್ಲಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

      ನವದೆಹಲಿಯಲ್ಲಿ ಒಂದೇ ದಿನ 1056 ಮಂದಿಗೆ ಕೊರೊನಾವೈರಸ್ ಅಂಟಿಕೊಂಡಿದ್ದು, 28 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 1,32,275ಕ್ಕೆ ಏರಿಕೆಯಾಗಿದೆ. ಸಾವಿನ ಸಂಖ್ಯೆ 3881ಕ್ಕೆ ಏರಿಕೆಯಾಗಿದೆ. ತಮಿಳುನಾಡಿನಲ್ಲಿ ಕಳೆದ 24 ಗಂಟೆಗಳಲ್ಲೇ 6972 ಮಂದಿಗೆ ಕೊರೊನಾವೈರಸ್ ಸೋಂಕು ತಗಲಿರುವುದು ದೃಢಪಟ್ಟಿದೆ. ಇದರಿಂದ ಒಟ್ಟು ಸೋಂಕಿತರ ಸಂಖ್ಯೆ 2,27,688ಕ್ಕೆ ಏರಿಕೆಯಾಗಿದೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+