ಕೊರೊನಾ ವೈರಸ್: ದೇಶದಲ್ಲಿ 72 ಬಲಿ, 2 ಸಾವಿರ ಗಡಿ ದಾಟಿದ ಸೋಂಕಿತರು

ನವದೆಹಲಿ, ಏಪ್ರಿಲ್ 3: ದೇಶದಲ್ಲಿ ಇದುವರೆಗೆ ಕೊರೊನಾ ವೈರಸ್‌ನಿಂದಾಗಿ 72 ಮಂದಿ ಮೃತಪಟ್ಟಿದ್ದು, ಸೋಂಕಿತರ ಸಂಖ್ಯೆ 2 ಸಾವಿರದ ಗಡಿ ದಾಟಿದೆ.

ಕಳೆದ 24 ಗಂಟೆಗಳಲ್ಲಿ 235 ಹೊಸ ಪ್ರಕರಣಗಳು ದಾಖಲಾಗಿವೆ. ಭಾರತದಲ್ಲಿ ಒಟ್ಟು 2543 ಪ್ರಕರಣಗಳು ದೃಢಪಟ್ಟಿವೆ.ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ದೆಹಲಿ ಜಮಾತ್‌ಗೆ ತೆರಳಿದವರನ್ನು ಹುಡುಕುವುದೇ ಸರ್ಕಾರಕ್ಕೆ ದೊಡ್ಡ ಸವಾಲಾಗಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ತಿಳಿಸಿದ್ದರು.

ಕರ್ನಾಟಕದಲ್ಲಿ ಒಟ್ಟು 124 ಕೋವಿಡ್ -19 ಪ್ರಕರಣಗಳು ಬೆಳಕಿಗೆ ಬಂದಿದೆ. 11 ಮಂದಿ ಗುಣಮುಖರಾಗಿದ್ದು, 3 ಸಾವು ದಾಖಲಾಗಿದೆ. ಸದ್ಯ 110 ಪ್ರಕರಣಗಳು ಚಾಲ್ತಿಯಲ್ಲಿದೆ.

53 Have Died Cross 2,000 Coronavirus Infected In India

ಚೀನಾದ ವುಹಾನ್ ನಲ್ಲಿ ಮೊದಲು ಪತ್ತೆಯಾಗಿದ್ದ ಕೊರೊನಾ ವೈರಸ್ ವಿಶ್ವಾದ್ಯಂತ 50,000ಕ್ಕೂ ಹೆಚ್ಚು ಮಂದಿಯನ್ನು ಬಲಿ ಪಡೆದಿದೆ. ಭಾರತ ಸೇರಿ ಒಟ್ಟು 195ರಾಷ್ಟ್ರಗಳಿಗೂ ಹೆಚ್ಚು ಕಡೆ ವೈರಸ್ ಹರಡಿದೆ. ಭಾರತದಲ್ಲಿ 2500ಕ್ಕೂ ಹೆಚ್ಚು ಮಂದಿಗೆ ಕೊರೊನಾ ಇರುವುದು ದೃಢಪಟ್ಟಿದೆ. ಕರ್ನಾಟಕದಲ್ಲಿ 120ಕ್ಕೂ ಹೆಚ್ಚು ಪ್ರಕರಣ ಬೆಳಕಿಗೆ ಬಂದಿದೆ.

ಎರಡನೇ ಸ್ಥಾನದಲ್ಲಿ ಸ್ಪೇನ್ ಇದ್ದು 1 ಲಕ್ಷದ 12 ಸಾವಿರಕ್ಕೂ ಹೆಚ್ಚು ಮಂದಿಗೆ ಕೊರೊನಾ ಪಾಸಿಟಿವ್ ಎಂದು ವರದಿ ಬಂದಿದೆ. 10,300ಕ್ಕೂ ಹೆಚ್ಚು ಮಂದಿ ಕೊರೊನಾಗೆ ಇಲ್ಲಿ ಸಾವನ್ನಪ್ಪಿದ್ದಾರೆ. ಇಟಲಿಯಲ್ಲಿ ಅತೀ ಹೆಚ್ಚು ಮಂದಿ ಈ ಮಾರಕ ವೈರಸ್ ಗೆ ಸಾವನ್ನಪ್ಪಿದ್ದು, ಮೃತಪಟ್ಟವರ ಚಾರ್ಟ್ ನಲ್ಲಿ ಮೊದಲ ಸ್ಥಾನದಲ್ಲಿದೆ.

ಇಲ್ಲಿ 1 ಲಕ್ಷದ 15 ಸಾವಿರಕ್ಕೂ ಹೆಚ್ಚು ಮಂದಿಗೆ ಕೊರೊನಾ ಇರುವುದು ದೃಢಪಟ್ಟಿದೆ. 13,900ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿರುವ ಬಗ್ಗೆ ವರದಿ ತಿಳಿಸಿದೆ. ವಿಶ್ವದಾದ್ಯಂತ ಕೊರೊನಾ ವೈರಸ್ 53 ಸಾವಿರಕ್ಕೂ ಹೆಚ್ಚು ಜನರನ್ನು ಬಲಿ ಪಡೆದಿದೆ. 10 ಲಕ್ಷದ 15 ಸಾವಿರಕ್ಕೂ ಹೆಚ್ಚು ಜನರಲ್ಲಿ ಕೊರೊನಾ ಇರುವುದು ದೃಢಪಟ್ಟಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+