• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಮೇ 11-15ರವರೆಗೆ ದಾಖಲೆ ಮೀರಲಿವೆ ಸಕ್ರಿಯ ಪ್ರಕರಣಗಳು; ತಜ್ಞರ ಮಾಹಿತಿ

|

ನವದೆಹಲಿ, ಏಪ್ರಿಲ್ 22: ಈಚೆಗೆ ಕೊರೊನಾ ಸೋಂಕಿನ ಕುರಿತ ತಜ್ಞರ ಎಲ್ಲಾ ಲೆಕ್ಕಾಚಾರಗಳನ್ನು ಕೊರೊನಾ ಎರಡನೇ ಅಲೆ ತಲೆ ಕೆಳಗು ಮಾಡಿದೆ. ನಿರೀಕ್ಷೆಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಕೊರೊನಾ ಪ್ರಕರಣಗಳು ದಾಖಲಾಗುತ್ತಿವೆ. ಇದೀಗ ಗಣಿತದ ಮಾದರಿಯನ್ನಿಟ್ಟುಕೊಂಡು ತಜ್ಞರು ಕೊರೊನಾ ಎರಡನೇ ಅಲೆ ಯಾವಾಗ ಗರಿಷ್ಠ ಮಟ್ಟವನ್ನು ತಲುಪುತ್ತದೆ ಎಂಬುದನ್ನು ಅಂದಾಜು ಮಾಡಿದ್ದಾರೆ.

ಮುಂದಿನ ತಿಂಗಳು, ಅಂದರೆ ಮೇ 11 ರಿಂದ 15ರ ನಡುವೆ ಭಾರತದಲ್ಲಿ ಕೊರೊನಾ ಪ್ರಕರಣಗಳು ಗರಿಷ್ಠ ಮಟ್ಟ ತಲುಪಲಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 33ರಿಂದ 35 ಲಕ್ಷ ತಲುಪಲಿದೆ ಎಂಬ ಸಾಧ್ಯತೆಯನ್ನು ಮುಂದಿಟ್ಟಿದ್ದಾರೆ. ಮುಂದೆ ಓದಿ...

ರಾಜ್ಯದಲ್ಲಿ ಐಸಿಯುನಲ್ಲಿ ಕೋವಿಡ್ ರೋಗಿಗಳ ಸಾವಿನ ಪ್ರಮಾಣ ಶೇ.8.72ಕ್ಕೆ ಏರಿಕೆ ರಾಜ್ಯದಲ್ಲಿ ಐಸಿಯುನಲ್ಲಿ ಕೋವಿಡ್ ರೋಗಿಗಳ ಸಾವಿನ ಪ್ರಮಾಣ ಶೇ.8.72ಕ್ಕೆ ಏರಿಕೆ

 ಮುಂದಿನ ಮೂರು ವಾರಗಳಲ್ಲಿಯೂ ಕೊರೊನಾ ಏರಿಕೆ

ಮುಂದಿನ ಮೂರು ವಾರಗಳಲ್ಲಿಯೂ ಕೊರೊನಾ ಏರಿಕೆ

ಮೇ 11ರಿಂದ 15ರವರೆಗಿನ ಅವಧಿಯಲ್ಲಿ ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ ಗರಿಷ್ಠ ಮಟವನ್ನು ತಲುಪಲಿದೆ ಎಂದು ಅಂದಾಜಿಸಲಾಗಿದೆ. ಅಂದರೆ ಇನ್ನೂ ಮುಂದಿನ ಮೂರು ವಾರಗಳ ಕಾಲ ಕೊರೊನಾ ಪ್ರಕರಣಗಳ ಸಂಖ್ಯೆ ಏರುತ್ತಲೇ ಸಾಗುತ್ತದೆ. ಅಂದಾಜಿನ ಪ್ರಕಾರ ಮೇ ಮಧ್ಯಭಾಗದಲ್ಲಿ ಕೊರೊನಾ ಮೊದಲನೇ ಅಲೆಗಿಂತ ಮೂರು ಪಟ್ಟು ಹೆಚ್ಚಿನ ಪ್ರಕರಣ ದಾಖಲಾಗುತ್ತದೆ ಎಂದು ತಿಳಿಸಿದ್ದಾರೆ. ಕಳೆದ ಸೆಪ್ಟೆಂಬರ್ 17ರಂದು ದೇಶದಲ್ಲಿ 10 ಲಕ್ಷ ಸಕ್ರಿಯ ಪ್ರಕರಣಗಳು ದಾಖಲಾಗಿತ್ತು.

 ಕೇಂದ್ರ ರಾಜ್ಯ ಸರ್ಕಾರಗಳು ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು

ಕೇಂದ್ರ ರಾಜ್ಯ ಸರ್ಕಾರಗಳು ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು

ಮುಂದಿನ ಮೂರು ವಾರಗಳ ಕಾಲ ಕೊರೊನಾ ಪ್ರಕರಣಗಳ ಸಂಖ್ಯೆ ಕೈಮೀರುವ ಎಲ್ಲಾ ಲಕ್ಷಣಗಳಿದ್ದು, ಈ ಹಿಂದಿನ ಎಲ್ಲಾ ದಾಖಲೆಗಳನ್ನು ಮೀರಲಿದೆ. ಹೀಗಾಗಿ ಈಗಲೇ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸಿದ್ಧತೆ ಮಾಡಿಕೊಳ್ಳಲೇಬೇಕಿದೆ. ಔಷಧಗಳು, ಆರೋಗ್ಯ ಸಲಕರಣೆಗಳು, ಆಸ್ಪತ್ರೆಗಳು ಈ ಎಲ್ಲಾ ವ್ಯವಸ್ಥೆಗಳನ್ನು ಗರಿಷ್ಠ ಮಟ್ಟದಲ್ಲಿ ರೂಪಿಸಬೇಕಿದೆ ಎಂದು ಹೇಳಿದ್ದಾರೆ.

ಕೊರೊನಾವೈರಸ್ ಕಟ್ಟಿ ಹಾಕಲು ಕೊರೊನಾವೈರಸ್ ಕಟ್ಟಿ ಹಾಕಲು "ಡಬಲ್ ಮಾಸ್ಕ್" ಸೂತ್ರ!?

 ಯಾವ ರಾಜ್ಯದಲ್ಲಿ ಯಾವಾಗ ಹೆಚ್ಚಲಿದೆ ಕೊರೊನಾ?

ಯಾವ ರಾಜ್ಯದಲ್ಲಿ ಯಾವಾಗ ಹೆಚ್ಚಲಿದೆ ಕೊರೊನಾ?

ದೆಹಲಿ, ಹರಿಯಾಣ, ರಾಜಸ್ಥಾನ, ತೆಲಂಗಾಣದಲ್ಲಿ ಏಪ್ರಿಲ್ 25ರಿಂದ 30ರವರೆಗೆ ಕೊರೊನಾ ಸಕ್ರಿಯ ಪ್ರಕರಣಗಳು ಹೆಚ್ಚೆಚ್ಚು ದಾಖಲಾಗಲಿದ್ದು, ಮೇ 1ರಿಂದ 5ರವರೆಗೆ ಕರ್ನಾಟಕ, ಪಶ್ಚಿಮ ಬಂಗಾಳ, ಒಡಿಶಾದಲ್ಲಿ ಹೊಸ ಪ್ರಕರಣಗಳು ಹೆಚ್ಚಾಗಲಿವೆ. ಮೇ 6-10ರವರೆಗೆ ತಮಿಳುನಾಡು, ಆಂಧ್ರಪ್ರದೇಶದಲ್ಲಿ ಏರಿಕೆಯಾಗಲಿವೆ. ಮಹಾರಾಷ್ಟ್ರ ಹಾಗೂ ಛತ್ತೀಸ್‌ಗಡದಲ್ಲಿ ಈಗಾಗಲೇ ಗರಿಷ್ಠ ಮಟ್ಟದಲ್ಲಿ ಕೊರೊನಾ ಪ್ರಕರಣಗಳು ದಾಖಲಾಗಿದ್ದು, ಬಿಹಾರದಲ್ಲಿ ಏಪ್ರಿಲ್ 25ರಂದು ಹೆಚ್ಚು ಪ್ರಕರಣಗಳು ದಾಖಲಾಗುತ್ತವೆ ಎಂದು ಅಂದಾಜಿಸಲಾಗಿದೆ.

 ದೇಶದಲ್ಲಿ 3,14,835 ಮಂದಿಗೆ ಕೊರೊನಾ ಸೋಂಕು

ದೇಶದಲ್ಲಿ 3,14,835 ಮಂದಿಗೆ ಕೊರೊನಾ ಸೋಂಕು

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 3,14,835 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದ್ದು, 2,104 ಮಂದಿ ಮಹಾಮಾರಿಯಿಂದ ಪ್ರಾಣ ಬಿಟ್ಟಿದ್ದಾರೆ. ಒಂದು ದಿನದಲ್ಲಿ 1,78,841 ಕೊವಿಡ್-19 ಸೋಂಕಿತರು ಗುಣಮುಖರಾಗಿದ್ದಾರೆ. ಗುರುವಾರದ ಅಂಕಿ-ಅಂಶಗಳ ಪ್ರಕಾರ, ದೇಶದಲ್ಲಿ ಒಟ್ಟು 1,59,30,965 ಕೊರೊನಾವೈರಸ್ ಸೋಂಕಿತ ಪ್ರಕರಣಗಳು ವರದಿಯಾಗಿವೆ. ಈವರೆಗೂ 1,34,54,880 ಸೋಂಕಿತರು ಗುಣಮುಖರಾಗಿದ್ದು, ಒಟ್ಟು 1,84,657 ಸಾವಿನ ಪ್ರಕರಣಗಳು ಪತ್ತೆಯಾಗಿವೆ. ಭಾರತದಲ್ಲಿ 22,91,428 ಕೊವಿಡ್-19 ಸಕ್ರಿಯ ಪ್ರಕರಣಗಳಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

English summary
India's Covid-19 peak likely between May 11-15 with 33-35 lakh active cases says experts,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X