ಭಾರತ; 24 ಗಂಟೆಯಲ್ಲಿ 50,129 ಹೊಸ ಕೋವಿಡ್ ಪ್ರಕರಣ ದಾಖಲು
ನವದೆಹಲಿ, ಅಕ್ಟೋಬರ್ 25 : ಭಾರತದಲ್ಲಿ 24 ಗಂಟೆಯಲ್ಲಿ 50,129 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿದೆ. ದೇಶದಲ್ಲಿನ ಒಟ್ಟು ಸೋಂಕಿತರ ಸಂಖ್ಯೆ 78,64,811ಕ್ಕೆ ಏರಿಕೆಯಾಗಿದೆ.
ಆರೋಗ್ಯ ಸಚಿವಾಲಯ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದೆ. ದೇಶದಲ್ಲಿ 24 ಗಂಟೆಯಲ್ಲಿ 578 ಜನರು ಸಾವನ್ನಪ್ಪಿದ್ದಾರೆ. ಒಟ್ಟು ಮೃತಪಟ್ಟವರ ಸಂಖ್ಯೆ 1,18,567.

ಅಕ್ಟೋಬರ್ 24ರ ತನಕ 10,25,23,469 ಮಾದರಿಗಳ ಕೋವಿಡ್ ಪರೀಕ್ಷೆ ಮಾಡಲಾಗಿದೆ. ಶನಿವಾರ 11,40,905 ಮಾದರಿಗಳ ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಐಸಿಎಂಆರ್ ಹೇಳಿದ್ದಾರೆ.
ಭಾರತದಲ್ಲಿ ಒಟ್ಟು ಮೃತಪಟ್ಟವರ ಸಂಖ್ಯೆ 1,18,534. ಸಕ್ರಿಯ ಪ್ರಕರಣಗಳ ಸಂಖ್ಯೆ 6,68,154. ಕಳೆದ 24 ಗಂಟೆಗಳಿಗೆ ಹೋಲಿಕೆ ಮಾಡಿದರೆ 12,526 ಪ್ರಕರಣ ಕಡಿಮೆಯಾಗಿದೆ. ಇದುವರೆಗೂ ದೇಶದಲ್ಲಿ 70,78,123 ಜನರು ಗುಣಮುಖರಾಗಿದ್ದಾರೆ. 62,077 ಜನರು 24 ಗಂಟೆಯಲ್ಲಿ ಗುಣಮುಖರಾಗಿದ್ದಾರೆ.
ದೇಶದಲ್ಲಿಯೇ ಅತಿ ಹೆಚ್ಚು ಸೋಂಕಿತರು ಇರುವ ರಾಜ್ಯ ಮಹಾರಾಷ್ಟ್ರ. ರಾಜ್ಯದಲ್ಲಿನ ಒಟ್ಟು ಸೋಂಕಿತರ ಸಂಖ್ಯೆ 16,38,961. ಶನಿವಾರ ರಾಜ್ಯದಲ್ಲಿ 6,417 ಪ್ರಕರಣಗಳು ದಾಖಲಾಗಿದೆ.
ಆಂಧ್ರ ಪ್ರದೇಶ ಒಟ್ಟು ಸೋಂಕಿತರ ಸಂಖ್ಯೆಯಲ್ಲಿ 2ನೇ ಸ್ಥಾನದಲ್ಲಿದೆ. ಶನಿವಾರ 3,342 ಹೊಸ ಪ್ರಕರಣಗಳು ದಾಖಲಾಗಿವೆ. ಒಟ್ಟು ಸೋಂಕಿತರ ಸಂಖ್ಯೆ 8,04,026.
ಕರ್ನಾಟಕ ರಾಜ್ಯ 3ನೇ ಸ್ಥಾನದಲ್ಲಿದೆ. ಶನಿವಾರ ರಾಜ್ಯದಲ್ಲಿ 4,471 ಹೊಸ ಪ್ರಕರಣ ದಾಖಲಾಗಿದೆ. ರಾಜ್ಯದಲ್ಲಿನ ಒಟ್ಟು ಸೋಂಕಿತರ ಸಂಖ್ಯೆ 7,98,378.












Click it and Unblock the Notifications