ಭಾರತದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ 54 ಲಕ್ಷಕ್ಕೆ ಏರಿಕೆ
ನವದೆಹಲಿ, ಸೆಪ್ಟೆಂಬರ್ 20: ಭಾರತದಲ್ಲಿ 24 ಗಂಟೆಯಲ್ಲಿ 92,605 ಹೊಸ ಕೋವಿಡ್ ಪ್ರಕರಣ ದಾಖಲಾಗಿದೆ. ಈ ಮೂಲಕ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 54,00,620ಕ್ಕೆ ಏರಿಕೆಯಾಗಿದೆ.
ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ಪ್ರಕಾರ ಭಾರತದಲ್ಲಿ 24 ಗಂಟೆಯಲ್ಲಿ 1,133 ಜನರ ಸಾವನ್ನಪ್ಪಿದ್ದಾರೆ. ಇದರಿಂದಾಗಿ ದೇಶದಲ್ಲಿ ಒಟ್ಟು ಮೃತಪಟ್ಟವರ ಸಂಖ್ಯೆ 86,752.
ಭಾರತದಲ್ಲಿನ ಸಕ್ರಿಯ ಪ್ರಕರಣಗಳ ಸಂಖ್ಯೆ 10,10,824. ಇದುವರೆಗೂ ಗುಣಮುಖರಾದವರ ಸಂಖ್ಯೆ 43,03,044. ದೇಶದಲ್ಲಿ ಅತಿ ಹೆಚ್ಚು ಸೋಂಕಿತರು ಇರುವ ರಾಜ್ಯ ಮಹಾರಾಷ್ಟ್ರ.

ಸೆಪ್ಟೆಂಬರ್ 19ರ ಶನಿವಾರದ ತನಕ ಭಾರತದಲ್ಲಿ 6,36,61,060 ಮಾದರಿಗಳ ಕೋವಿಡ್ ಪರೀಕ್ಷೆ ಮಾಡಲಾಗಿದೆ. ಶನಿವಾರ ಒಂದೇ ದಿನ 12,06,806 ಮಾದರಿಗಳ ಪರೀಕ್ಷೆ ಮಾಡಲಾಗಿದೆ.
ಭಾರತದಲ್ಲಿ ಕೋವಿಡ್ ಸೋಂಕಿತರು ಹೆಚ್ಚು ಇರುವ ರಾಷ್ಟ್ರ ಮಹಾರಾಷ್ಟ್ರ 11,88,015. ಸಕ್ರಿಯ ಪ್ರಕರಣಗಳು 2,97,480. ಆಂಧ್ರ ಪ್ರದೇಶದಲ್ಲಿ ಒಟ್ಟು ಸೋಂಕಿತರು 6,17,776. ಸಕ್ರಿಯ ಪ್ರಕರಣಗಳ ಸಂಖ್ಯೆ 81,763.
ತಮಿಳುನಾಡು ರಾಜ್ಯದಲ್ಲಿ ಒಟ್ಟು ಸೋಂಕಿತರು 5,36,477. ಸಕ್ರಿಯ ಪ್ರಕರಣಗಳ ಸಂಖ್ಯೆ 46,453. ರಾಜ್ಯ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆಲ್ಲಿ 3ನೇ ಸ್ಥಾನದಲ್ಲಿದೆ. ಕರ್ನಾಟಕದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 511346. ರಾಜ್ಯ ಒಟ್ಟು ಸೋಂಕಿತರ ಸಂಖ್ಯೆಯಲ್ಲಿ 4ನೇ ಸ್ಥಾನದಲ್ಲಿದೆ.












Click it and Unblock the Notifications