ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಇನ್ನು ನಾಲ್ಕೇ ದಿನಗಳಲ್ಲಿ 2 ಲಕ್ಷದ ಗಡಿ ಮುಟ್ಟಲಿದೆ ಕೊರೊನಾ ಪ್ರಕರಣ; ತಜ್ಞರ ಎಚ್ಚರಿಕೆ

|
Google Oneindia Kannada News

ನವದೆಹಲಿ, ಏಪ್ರಿಲ್ 12: ದೇಶದಲ್ಲಿ ಕೊರೊನಾ ಎರಡನೇ ಅಲೆ ಆತಂಕ ಮೂಡಿಸಿದ್ದು, ಕಳೆದ ಕೆಲವು ದಿನಗಳಿಂದ ದಿನನಿತ್ಯದ ಕೊರೊನಾ ಪ್ರಕರಣಗಳಲ್ಲಿ ಭಾರೀ ಏರಿಕೆ ಕಾಣುತ್ತಿದೆ. ದೇಶದ ಹತ್ತು ರಾಜ್ಯಗಳಿಂದ ಅತಿ ಹೆಚ್ಚು ಕೊರೊನಾ ಪ್ರಕರಣಗಳು ದಾಖಲಾಗುತ್ತಿದೆ. ಈ ನಡುವೆ, ಇನ್ನು ನಾಲ್ಕು ದಿನಗಳ ನಂತರ ದೇಶದ ಕೊರೊನಾ ದೈನಂದಿನ ಪ್ರಕರಣ ಎರಡು ಲಕ್ಷವನ್ನು ದಾಟಲಿದೆ ಎಂದು ತಜ್ಞರು ಎಚ್ಚರಿಕೆ ನೀಡಿದ್ದಾರೆ.

ಕಳೆದ ಐದು ದಿನಗಳಿಂದಲೂ ದೇಶದ ಕೊರೊನಾ ಪ್ರಕರಣಗಳ ಸಂಖ್ಯೆ ಒಂದು ಲಕ್ಷವನ್ನು ದಾಟಿತ್ತು. ಪರಿಸ್ಥಿತಿ ಹೀಗೇ ಮುಂದುವರೆದರೆ ಇನ್ನು ನಾಲ್ಕೇ ದಿನಗಳಲ್ಲಿ ಈ ಸಂಖ್ಯೆ ದುಪ್ಪಟ್ಟುಗೊಳ್ಳುತ್ತದೆ. ಎಂಟು ದಿನಗಳಲ್ಲಿ ಎರಡೂವರೆ ಲಕ್ಷ ಮೀರಲಿದೆ ಎಂದು ಕೊರೊನಾ ಮಾಹಿತಿ ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ. ಮುಂದೆ ಓದಿ...

 10 ರಾಜ್ಯಗಳಲ್ಲಿ ಅತಿ ಹೆಚ್ಚಿನ ಕೊರೊನಾ ಪ್ರಕರಣಗಳು ದಾಖಲು

10 ರಾಜ್ಯಗಳಲ್ಲಿ ಅತಿ ಹೆಚ್ಚಿನ ಕೊರೊನಾ ಪ್ರಕರಣಗಳು ದಾಖಲು

ಕೊರೊನಾ ಎರಡನೇ ಅಲೆ ದೇಶದಲ್ಲಿ ಹೆಚ್ಚಿನ ಆತಂಕ ಮೂಡಿಸಿದ್ದು, ಕೆಲವು ರಾಜ್ಯಗಳು ಹೆಚ್ಚಿನ ಸಂಖ್ಯೆಯಲ್ಲಿ ದಿನನಿತ್ಯದ ಪ್ರಕರಣಗಳು ದಾಖಲಾಗುತ್ತಿವೆ. ಮಹಾರಾಷ್ಟ್ರ, ಉತ್ತರ ಪ್ರದೇಶ, ದೆಹಲಿ, ಛತ್ತೀಸ್‌ಗಡ, ಕರ್ನಾಟಕ, ಕೇರಳ, ತಮಿಳುನಾಡು, ಮಧ್ಯಪ್ರದೇಶ, ಗುಜರಾತ್, ರಾಜಸ್ಥಾನ ರಾಜ್ಯಗಳು ಅತಿ ಹೆಚ್ಚಿನ ಸಂಖ್ಯೆಯಲ್ಲಿ ಪ್ರಕರಣ ದಾಖಲಿಸುತ್ತಿವೆ.

ಭಾರತದಲ್ಲಿ 12 ಲಕ್ಷಕ್ಕೂ ಹೆಚ್ಚು ಕೊರೊನಾವೈರಸ್ ಸಕ್ರಿಯ ಪ್ರಕರಣ!ಭಾರತದಲ್ಲಿ 12 ಲಕ್ಷಕ್ಕೂ ಹೆಚ್ಚು ಕೊರೊನಾವೈರಸ್ ಸಕ್ರಿಯ ಪ್ರಕರಣ!

"ಮುಂದಿನ 12 ದಿನಗಳಲ್ಲಿ 3 ಲಕ್ಷ ತಲುಪಲಿದೆ ದೈನಂದಿನ ಪ್ರಕರಣ"

ದೇಶದಲ್ಲಿ ಸತತ 33ನೇ ದಿನ ಕೊರೊನಾ ಪ್ರಕರಣಗಳಲ್ಲಿ ಏರಿಕೆ ಕಂಡಿದ್ದು, ಸದ್ಯಕ್ಕೆ 12,01,009 ಸಕ್ರಿಯ ಪ್ರಕರಣಗಳಿವೆ. ಇದೇ ಸಂದರ್ಭ ಗುಣಮುಖರಾಗುತ್ತಿರುವವರ ಪ್ರಮಾಣ 89.86% ಕುಸಿದಿದೆ. ಈ ಎಲ್ಲ ಅಂಶಗಳ ಹಿನ್ನೆಲೆಯಲ್ಲಿ ಕೊರೊನಾ ಮಾಹಿತಿ ವಿಶ್ಲೇಷಕ ವಿಜಯಾನಂದ, ಇನ್ನು 4 ದಿನಗಳಲ್ಲಿ ಕೊರೊನಾ ದಿನನಿತ್ಯದ ಕೊರೊನಾ ಪ್ರಕರಣಗಳು 2 ಲಕ್ಷವನ್ನು ಮುಟ್ಟಲಿದ್ದು, ಎಂಟು ದಿನಗಳಲ್ಲಿ 2.5 ಲಕ್ಷ ಮೀರಲಿದೆ. 12 ದಿನಗಳಲ್ಲಿ 3 ಲಕ್ಷ ತಲುಪುತ್ತದೆ ಎಂದು ಹೇಳಿದ್ದಾರೆ.

 ಒಂದೇ ದಿನ 168912 ಕೊರೊನಾ ಪ್ರಕರಣಗಳು ದಾಖಲು

ಒಂದೇ ದಿನ 168912 ಕೊರೊನಾ ಪ್ರಕರಣಗಳು ದಾಖಲು

ದೇಶದಲ್ಲಿ ಸೋಮವಾರ ಒಂದೇ ದಿನ 168912 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಕಳೆದ 24 ಗಂಟೆಗಳಲ್ಲಿ ಸೋಂಕಿಗೆ 904 ಮಂದಿ ಪ್ರಾಣ ಬಿಟ್ಟಿದ್ದು, ಸಾವಿನ ಸಂಖ್ಯೆ 1,70,179ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಮಹಾರಾಷ್ಟ್ರದಲ್ಲಿ ಇದೆಂಥಾ ದುಸ್ಥಿತಿ; ಕೊರೊನಾ ರೋಗಿಗಳಿಗೆ ಕುರ್ಚಿಯಲ್ಲೇ ಚಿಕಿತ್ಸೆ!ಮಹಾರಾಷ್ಟ್ರದಲ್ಲಿ ಇದೆಂಥಾ ದುಸ್ಥಿತಿ; ಕೊರೊನಾ ರೋಗಿಗಳಿಗೆ ಕುರ್ಚಿಯಲ್ಲೇ ಚಿಕಿತ್ಸೆ!

 12,01,009 ಗಡಿ ದಾಟಿದ ಸಕ್ರಿಯ ಪ್ರಕರಣಗಳು

12,01,009 ಗಡಿ ದಾಟಿದ ಸಕ್ರಿಯ ಪ್ರಕರಣಗಳು

ಸೋಮವಾರದ ಅಂಕಿ-ಅಂಶಗಳ ಪ್ರಕಾರ, ಭಾರತದಲ್ಲಿ ಒಟ್ಟು 1,35,27,717 ಕೊರೊನಾ ಸೋಂಕಿತ ಪ್ರಕರಣ ವರದಿಯಾಗಿವೆ. ಒಂದು ದಿನದಲ್ಲಿ 75,086 ಸೋಂಕಿತರು ಗುಣಮುಖರಾಗಿದ್ದು, ಒಟ್ಟು ಗುಣಮುಖರ ಸಂಖ್ಯೆ 1,21,56,529ಕ್ಕೆ ಏರಿಕೆಯಾಗಿದೆ. ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 12,01,009 ಗಡಿಯನ್ನೂ ದಾಟಿ ಹೋಗಿದೆ.

English summary
If the current rate of growth continues, India's daily new coronavirus cases likely to cross above 2 lakhs in 4 days says experts
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X