ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ಮೇಲೆ ಮಧ್ಯರಾತ್ರಿ ದಾಳಿ ನಡೆಸಿದ ಭಾರತ: ಯುದ್ಧಕ್ಕೆ ಸಜ್ಜಾದ ಶತ್ರು ರಾಷ್ಟ್ರ
ಪಾಕ್ ಆಕ್ರಮಿತ ಕಾಶ್ಮೀರದ ಮೇಲೆ ಮಂಗಳವಾರ ಮಧ್ಯರಾತ್ರಿ ಭಾರತ ದಾಳಿ ನಡೆಸಿದೆ. ಪಿಒಕೆ ಭಾಗವಾಗಿರುವ ಮುಜಫರಾಬಾದ್ ನಗರದ ಸುತ್ತಲಿನ ಪ್ರದೇಶದಲ್ಲಿ ಹಲವಾರು ಸ್ಫೋಟಗಳು ಕೇಳಿಬಂದವೆ.
ರಾಯಿಟರ್ಸ್ ವರದಿಯ ಪ್ರಕಾರ, ಭಾರತದ ದಾಳಿಯ ನಂತರ ಪಾಕ್ ಆಕ್ರಮಿತ ಪ್ರದೇಶಗಳಲ್ಲಿ ವಿದ್ಯುತ್ ಕಡಿತಗೊಂಡಿದೆ. ಪಿಒಕೆಯ ಮೂರು ಸ್ಥಳಗಳ ಮೇಲೆ ಭಾರತ ಸೇನೆಯು ಕ್ಷಿಪಣಿ ದಾಳಿ ನಡೆಸಿದೆ ಎಂದು ಪಾಕಿಸ್ತಾನಿ ಮಿಲಿಟರಿ ವಕ್ತಾರರು ತಿಳಿಸಿದ್ದಾರೆ. ದಾಳಿ ನಡೆಸಿದ ಬೆನ್ನಲ್ಲೇ ಭಾರತೀಯ ಸೇನೆಯು 'ಆಪರೇಷನ್ ಸಿಂಧೂರ್' ಎಂದು ಬರೆದಿರುವ ಫೋಟೋವನ್ನು 'ಎಕ್ಸ್' ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದೆ.

ಭಾರತ ಸೇನೆಯು 'ಆಪರೇಷನ್ ಸಿಂದೂರ್'ಆರಂಭಿಸಿದೆ. ಪಾಕ್ ಆಕ್ರಮಿತ ಕಾಶ್ಮೀರದಲ್ಲಿನ ಭಯೋತ್ಪಾದಕ ಶಿಬಿರಗಳ ಮೇಲೆ ದಾಳಿ ನಡೆಸುತ್ತಿದೆ. ಈ ಮೂಲಕ ಭಾರತವು ಭಯೋತ್ಪಾದನೆ ವಿರುದ್ಧ ಯುದ್ಧ ಸಾರಿದೆ ಎಂದು ರಕ್ಷಣಾ ಸಚಿವಾಲಯ ತಿಳಿಸಿದೆ.
#PahalgamTerrorAttack
— ADG PI - INDIAN ARMY (@adgpi) May 6, 2025
Justice is Served.
Jai Hind! pic.twitter.com/Aruatj6OfA
ಪಾಕಿಸ್ತಾನ ಆಕ್ರಮಿತ ಜಮ್ಮು ಮತ್ತು ಕಾಶ್ಮೀರದಲ್ಲಿನ ಭಯೋತ್ಪಾದಕ ನೆಲೆಗಳನ್ನು ಗುರಿಯಾಗಿಸಿಕೊಂಡು ಕಾರ್ಯಾಚರಣೆ ನಡೆಸಲಾಗಿದೆ. ಒಟ್ಟು ಒಂಬತ್ತು ಸ್ಥಳಗಳ ಮೇಲೆ ಕ್ಷಿಪಣಿ ದಾಳಿಯನ್ನು ನಡೆಸಲಾಗಿದೆ ಎಂದು ರಕ್ಷಣಾ ಸಚಿವಾಲಯ ತಿಳಿಸಿದೆ.

ಭಾರತದ ದಾಳಿಗೆ ಪ್ರತಿಕ್ರಿಯಿಸಿರುವ ಪಾಕಿಸ್ತಾನದ ಪ್ರಧಾನಿ ಶಹಬಾಜ್ ಶರೀಫ್, ಭಾರತದ ದಾಳಿಗೆ ಪ್ರತ್ಯುತ್ತರ ನೀಡುವ ನೈತಿಕ ಪಾಕಿಸ್ತಾನಕ್ಕಿದೆ. ಶತ್ರು ರಾಷ್ಟ್ರದ ದಾಳಿಯನ್ನು ನಾನು ಖಂಡಿಸುತ್ತೇನೆ. ಭಾರತದ ಈ ದಾಳಿ ಯುದ್ಧಕ್ಕೆ ಕಾರಣವಾಗಲಿದೆ ಎಂದು ಹೇಳಿದ್ದಾರೆ.
Visuals of the blast pic.twitter.com/qbfJQBuOo8
— Waleed (@weethelawyer) May 6, 2025
ಪಾಕಿಸ್ತಾನದಲ್ಲಿನ ಭಯೋತ್ಪಾದಕ ಶಿಬಿರಗಳ ಮೇಲೆ ಭಾರತ ನಡೆಸುತ್ತಿರುವ ದಾಳಿ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪ್ರತಿಕ್ರಿಯಿಸಿದ್ದಾರೆ. 'ಈ ದಾಳಿಯ ಕುರಿತು ನನಗೆ ಈ ಮೊದಲೇ ತಿಳಿದಿತ್ತು. ಭಾರತ ಮತ್ತು ಪಾಕಿಸ್ತಾನಗಳು ಈ ಸಂಘರ್ಷವನ್ನು ಆದಷ್ಟು ಬೇಗನೇ ಕೊನೆಗಳಿಸಲಿವೆ ಎಂಬ ಭರವಸೆ ನನಗಿದೆ' ಎಂದು ಟ್ವೀಟ್ ಮಾಡಿದ್ದಾರೆ.
ಭಾರತ ಮತ್ತು ಪಾಕ್ ಗಡಿಯಲ್ಲಿನ ಉದ್ವಿಗ್ನತೆಯಿಂದಾಗಿ ವಿಮಾನ ಕಾರ್ಯಾಚರಣೆಗಳ ಮೇಲೆ ಪರಿಣಾಮ ಬೀರಿದೆ. ಶ್ರೀನಗರ, ಜಮ್ಮು ಹಾಗೂ ಅಮೃತಸರದಲ್ಲಿ ವಿಮಾನ ಕಾರ್ಯಾಚರಣೆಗಳು ಸಂಪೂರ್ಣವಾಗಿ ಸ್ಥಗಿತಗೊಂಡಿವೆ. ಚಂಡೀಗಢ ಮತ್ತು ಧರ್ಮಶಾಲಾದಲ್ಲಿನ ವಿಮಾನ ಕಾರ್ಯಾಚರಣೆಗಳ ಮೇಲೆಯು ಪರಿಣಾಮ ಬೀರಿದೆ ಎಂದು ವಿಮಾನಯಾಣ ಸಚಿವಾಲಯ ತಿಳಿಸಿದೆ.
India has launched #OperationSindoor, a precise and restrained response to the barbaric #PahalgamTerrorAttack that claimed 26 lives, including one Nepali citizen. Focused strikes were carried out on nine #terrorist infrastructure sites in Pakistan and Pakistan-occupied Jammu and…
— Ministry of Defence, Government of India (@SpokespersonMoD) May 6, 2025
ಕಾಶ್ಮೀರದ ಪೆಹಲ್ಗಾವ್ನಲ್ಲಿ ನಡೆದ ಭಯೋತ್ಪಾದಕ ದಾಳಿಗೆ ಪ್ರತ್ಯುತ್ತರವಾಗಿ ಭಾರತ ದಾಳಿ ನಡೆಸಿದೆ. ಪೆಹಲ್ಗಾಮ್ ದಾಳಿಯಲ್ಲಿ 26 ಭಾರತೀಯ ನಾಗರಿಕರು ಮೃತಪಟ್ಟಿದ್ದರು. ಈ ದಾಳಿಗೆ ಕಾರಣರಾದವರ ಮೇಲೆ ನಾವು ದಾಳಿ ನಡೆಸುತ್ತಿದ್ದೇವೆ ಎಂದು ಭಾರತೀಯ ಸೇನೆ ಹೇಳಿಕೊಂಡಿದೆ.
ಏಪ್ರಿಲ್ 22 ರಂದು ನಡೆದ ಪೆಹಲ್ಗಾಮ್ ದಾಳಿ ಬಳಿಕ ಭಾರತ ಮತ್ತು ಪಾಕಿಸ್ತಾನದ ನಡುವಿನ ಉದ್ವಿಗ್ನತೆ ತೀವ್ರಗೊಂಡಿತ್ತು. ಭಯೋತ್ಪಾದಕ ದಾಳಿಗೆ ಪ್ರತ್ಯುತ್ತರವಾಗಿ ಸಿಂಧೂ ಜಲ ಒಪ್ಪಂದವನ್ನು ಭಾರತವು ಮೊಟಕುಗೊಳಿಸಿತ್ತು. ಪಾಕಿಸ್ತಾನಿ ನಾಗರಿಕರಿಗೆ ಎಲ್ಲಾ ವರ್ಗದ ವೀಸಾಗಳನ್ನು ಭಾರತವು ರದ್ದುಗೊಳಿಸಿತ್ತು.
ಭಾರತದ ಕ್ಷಿಪಣಿ ದಾಳಿಯು ಪಿಒಕೆಯ ಮೂರು ಸ್ಥಳಗಳ ಮೇಲೆ ನಡೆದಿದೆ ಎಂದು ಪಾಕಿಸ್ತಾನ ಸೇನೆ ಹೇಳಿಕೊಂಡಿದೆ. ಪಾಕಿಸ್ತಾನದ ಮಿಲಿಟರಿ ಸಾರ್ವಜನಿಕ ಸಂಪರ್ಕ ವಿಭಾಗದ ಮಹಾನಿರ್ದೇಶಕ ಅಹ್ಮದ್ ಷರೀಫ್ ಚೌಧರಿ ಪ್ರಕಾರ, ಭಾರತ ಸೇನೆಯು ಪಾಕ್ ಆಕ್ರಮಿತ ಪ್ರದೇಶದ ಮೂರು ಸ್ಥಳಗಳ ಮೇಲೆ ದಾಳಿ ನಡೆಸಿದೆ.












Click it and Unblock the Notifications