Exressways: 2025ರಲ್ಲಿ ಪೂರ್ಣಗೊಳ್ಳಲಿರುವ ದೇಶದ ಬಹುನಿರೀಕ್ಷಿತ ರಾಷ್ಟ್ರೀಯ ಹೆದ್ದಾರಿಗಳಿವು: NHAI ದೃಢ ನಿರ್ಧಾರವೇನು?
Exressways: ದೇಶದಲ್ಲಿ ಹಲವು ಹೆದ್ದಾರಿಗಳ ಕಾಮಗಾರಿಗಳು ನಡೆಯುತ್ತಿವೆ. ಕೆಲವು ಪೂರ್ಣಗೊಂಡಿದ್ದರೆ, ಇನ್ನೂ ಕೆಲವು ಇನ್ನೂ ಕಾಮಗಾರಿ ಆರಂಭದ ಹಂತದಲ್ಲಿವೆ. ಹಾಗಾದರೆ, 2025ರಲ್ಲಿ ನಿರ್ಮಾಣವಾಗುವ ದೇಶದ ಬಹುನಿರೀಕ್ಷಿತ ಹೆದ್ದಾರಿಗಳು ಯಾವುವು?, ಅವುಗಳಿಂದ ಏನೆಲ್ಲ ಪ್ರಯೋಜನೆಗಳಿವೆ?, ಅದರಲ್ಲೂ ಕರ್ನಾಟದ ಯಾವೆಲ್ಲಾ ಜಿಲ್ಲೆಗಳಿಗೆ ಉಪಯೋಗವಾಗಲಿದೆ ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ಗಮನಿಸಿ.
2025ರಲ್ಲಿ ರಾಷ್ಟ್ರೀಯ ಹೆದ್ಧಾರಿಗಳ ನಿರ್ಮಾಣದಲ್ಲಿ ಗುಣಮಟ್ಟ ಕಾಯ್ದುಕೊಳ್ಳುವ ಜೊತೆಗೆ ಉತ್ತಮ ನಿರ್ವಹಣೆಗೂ ಗಮನ ಹರಿಸಲಾಗುವುದು ಎಂದು ಕೇಂದ್ರ ಸರ್ಕಾರ ತಿಳಿಸಿದೆ. ದೇಶದಲ್ಲಿ ಕಳೆದ 10 ವರ್ಷಗಳಲ್ಲಿ 56,700 ಕಿಲೋ ಮೀಟರ್ ಉದ್ದದಷ್ಟು ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ಮಾಡಲಾಗಿದೆ. ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವಾಲಯವು ರಾಷ್ಟ್ರೀಯ ಹೆದ್ದಾರಿಗಳ ಅಭಿವೃದ್ಧಿ, ಕಾರ್ಯಾಚರಣೆ ಮತ್ತು ನಿರ್ವಹಣೆಯ ಪ್ರಾಥಮಿಕ ಜವಾಬ್ದಾರಿಯನ್ನು ವಹಿಸಿಕೊಂಡಿದೆ.

2013-14ರಲ್ಲಿ ದೇಶದಲ್ಲಿ ರಾಷ್ಟ್ರೀಯ ಹೆದ್ದಾರಿಗಳ ಉದ್ದ 0.91 ಲಕ್ಷ ಕಿಲೋ ಮೀಟರ್ ಇತ್ತು. ಈಗ 1.46 ಲಕ್ಷ ಕಿಲೋ ಮೀಟರ್‌ಗೆ ಹೆಚ್ಚಳ ಆಗಿದೆ.2025ರಲ್ಲಿ ನವದೆಹಲಿ-ಮುಂಬೈ ಎಕ್ಸ್‌ಪ್ರೆಸ್ ವೇ, ದೆಹಲಿ-ಡೆಹ್ರಾಡೂನ್ ಎಕ್ಸ್‌ಪ್ರೆಸ್ ವೇ ಮತ್ತು ಬೆಂಗಳೂರು-ಚೆನ್ನೈ ಎಕ್ಸ್‌ಪ್ರೆಸ್ ವೇ ನಿರ್ಮಾಣವು ಪೂರ್ಣಗೊಳ್ಳುವ ನಿರೀಕ್ಷೆಯಿದೆ.
ಹೊಸ ಹೆದ್ದಾರಿಗಳ ಕಾರ್ಯದರ್ಶಿ ವಿ.ಉಮಾಶಂಕರ್ ರಾಷ್ಟ್ರೀಯ ಹೆದ್ದಾರಿಗಳ ನಿರ್ಮಾಣದ ಗುಣಮಟ್ಟ ಮತ್ತು ನಿರ್ವಹಣೆ ಹೆಚ್ಚಿಸಲು ಹಲವಾರು ಸಭೆಗಳನ್ನು ನಡೆಸಿದ್ದಾರೆ ಅಂತಾ ಪ್ರಜಾವಾಣಿ ವರದಿ ಮಾಡಿದೆ. ಇನ್ನೂ ಯಾವೆಲ್ಲ ಹೆದ್ದಾರಿಗಳು ಈ ವರ್ಷ ವಾಹನಸ ಸಂಚಾರಕ್ಕೆ ಮುಕ್ತವಾಗುವ ಹಂತದಲ್ಲಿವೆ ಹಾಗೂ ಇನ್ನೂ ಯೆವೆಲ್ಲಾ ನಿರ್ಮಾಣ ಹಂತದಲ್ಲಿವೆ ಎಂದು ಇಲ್ಲಿ ತಿಳಿಯಿರಿ.
* Bengaluru-Chennai Expressway: ದಕ್ಷಿಣ ಭಾರತದ ಎರಡು ಬೃಹತ್ ನಗರಗಳನ್ನು ಸಂಪರ್ಕಿಸಲು ಬೆಂಗಳೂರು-ಚೆನ್ನೈ ಎಕ್ಸ್‌ಪ್ರೆಸ್‌ವೇ ಸಿದ್ಧವಾಗಿದೆ. ಈ ಹೆದ್ದಾರಿಯಿಂದ ಪ್ರಯಾಣದ ಸಮಯ ಕಡಿಮೆ ಆಗಲಿದೆ. ಇದು ಕರ್ನಾಟಕ ಮತ್ತು ತಮಿಳುನಾಡು ನಡುವೆ ವ್ಯಾಪಾರ, ಪ್ರವಾಸೋದ್ಯಮದ ಕೇಂದ್ರಗಳ ಅಭಿವೃದ್ಧಿಗೆ ಸಹಾಯ ಆದಂತಾಗುತ್ತದೆ. ಅಲ್ಲದೆ, ಆರ್ಥಿಕ ಚಟುವಟಿಕೆಗಳನ್ನು ಉತ್ತೇಜಿಸುತ್ತದೆ.
ದೇಶಾದ್ಯಂತ ಹಲವು ಎಕ್ಸ್‌ಪ್ರೆಸ್ ವೇಗಳ ಕಾಮಗಾರಿ ನಡೆಯುತ್ತಿವೆ. ಇನ್ನು ಕೆಲವು ಈಗಾಗಲೇ ಸಂಚಾರಕ್ಕೆ ಮುಕ್ತವಾಗಿದ್ದು, ಈ ಸಾಲಿಗೆ ಇದೀಗ ಬಹುನಿರೀಕ್ಷಿತ 260 ಕಿಲೋ ಮೀಟರ್ ಬೆಂಗಳೂರು-ಚೆನ್ನೈ ಎಕ್ಸ್‌ಪ್ರೆಸ್ ವೇ ಕೂಡ ಸೇರಿದೆ. ದೇಶದ ಪ್ರಮುಖ ನಗರಗಳ ನಡುವೆ ಸಂಪರ್ಕ ಕಲ್ಪಿಸುವ ಬೆಂಗಳೂರು-ಚೆನ್ನೈ ಹೆದ್ದಾರಿ ಮಾರ್ಗದ ಕರ್ನಾಟಕ ಭಾಗದಲ್ಲಿ ಕಾಮಗಾರಿ ಪೂರ್ಣ ಆಗಿದ್ದು, ಸಂಚಾರಕ್ಕೆ ಮುಕ್ತವಾಗಿದೆ.
ಇದನ್ನು ಲಾಂಗ್ ಡ್ರೈವ್ ಮತ್ತು ಜಾಲಿ ರೈಡ್‌ಗಳಿಗೆ ಬಳಕೆ ಮಾಡಲಾಗುತ್ತದೆ ಎಂದು ತಿಳಿದುಬಂದಿದೆ. ಈಗಾಗಲೇ ಇಲ್ಲಿನ ಸ್ಥಳೀಯರು ಇದನ್ನು ಬಳಕೆ ಮಾಡುತ್ತಿದ್ಧಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಆದರೆ ಆಂಧ್ರಪ್ರದೇಶ ಮತ್ತು ತಮಿಳುನಾಡಿನಲ್ಲಿ ಹೆದ್ದಾರಿ ಕಾಮಗಾರಿ ಇನ್ನೂ ಪೂರ್ಣವಾಗಿಲ್ಲ. 60 ಕಿಲೋ ಮೀಟರ್ ಎಕ್ಸ್‌ಪ್ರೆಸ್ ವೇ ಕಾಮಗಾರಿ ಆಗಸ್ಟ್ 2025ರ ವೇಳೆಗೆ ಸಂಪೂರ್ಣ ಕಾರ್ಯನಿರ್ವಹಿಸಲಿದೆ ಎಂದು ಇತ್ತೀಚೆಗಷ್ಟೇ ಹೆದ್ದಾರಿ ಪ್ರಧಿಕಾರದ ಮೂಲಗಳಿಂದ ಮಾಹಿತಿ ಹೊರಬಿದ್ದಿತ್ತು.
* Mumbai-Delhi Expressway: ಮುಂಬೈ-ದೆಹಲಿ ಎಕ್ಸ್‌ಪ್ರೆಸ್‌ವೇ, ಬಹು ನಿರೀಕ್ಷಿತ ಯೋಜನೆಗಳಲ್ಲಿ ಒಂದಾಗಿದ್ದು, ಇದರಿಂದ ಎರಡು ಪ್ರಮುಖ ಮಹಾನಗರಗಳ ನಡುವಿನ ಪ್ರಯಾಣವನ್ನು ಸುಗಮಗೊಳಿಸಲು ಅನುಕೂಲ ಆದಂತಾಗಲಿದೆ. 1,200 ಕಿಲೋ ಮೀಟರ್‌ಗಳಷ್ಟು ವಿಸ್ತರಿಸಿರುವ ಈ ಎಕ್ಸ್‌ಪ್ರೆಸ್‌ವೇ ಮುಂಬೈ ಮತ್ತು ದೆಹಲಿ ನಡುವಿನ ಪ್ರಯಾಣದ ಸಮಯವನ್ನು ಕಡಿಮೆ ಮಾಡಲಿದೆ. ಈ ಹೆದ್ದಾರಿ ನಿರ್ಮಾಣದಿಂದ ಪ್ರಯಾಣಿಕರಿಗೆ ಅತ್ಯಾಧುನಿಕ ಸೌಲಭ್ಯಗಳಗಳು ಒದಗಿಸಿದಂತಾಗಿತ್ತದೆ. ಇನ್ನು ಇಲ್ಲಿ ಪ್ರಯಾಣಿಕರಿಗೆ ಉತ್ತಮ ಸೇವೆಗಳು, ವಿಶ್ರಾಂತಿ ವಲಯಗಳನ್ನು ನಿರ್ಮಾಣ ಮಾಡಲಾಗಿದೆ.
* Pune-Bengaluru Expressway: ಪುಣೆ-ಬೆಂಗಳೂರು ಎಕ್ಸ್‌ಪ್ರೆಸ್‌ವೇ 699 ಕಿಲೋ ಮೀಟರ್‌ಗಳಷ್ಟು ವಿಸ್ತರಿಸಲಿದ್ದು, ನಿರ್ಮಾಣಕ್ಕೆ ಸುಮಾರು ₹50,000 ಕೋಟಿ ವೆಚ್ಚ ಆಗಲಿದೆ ಎಂದ ಎಂದು ಅಂದಾಜಿಸಲಾಗಿದೆ. ಡಿಪಿಆರ್ ಸಿದ್ಧಪಡಿಸಲಾಗುತ್ತಿದ್ದು, ಅಧಿಕಾರಿಗಳು ಶೀಘ್ರದಲ್ಲೇ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಎಕ್ಸ್‌ಪ್ರೆಸ್‌ವೇ ನಿರ್ಮಿಸುವ ಅಂತಿಮ ಪ್ರಸ್ತಾವನೆಯನ್ನು ಸಲ್ಲಿಸುವ ನಿರೀಕ್ಷೆಯಿದೆ.
ಪ್ರಸ್ತಾವನೆ ಸಲ್ಲಿಕೆ ಬಳಿಕ ಭೂಸ್ವಾಧೀನ ಮತ್ತು ನಿರ್ಮಾಣ ಕಾರ್ಯ ಪ್ರಾರಂಭ ಆಗಲಿದೆ. ಇವೆಲ್ಲ ಪೂರ್ಣಗೊಂಡರೆ, ಎಕ್ಸ್‌ಪ್ರೆಸ್‌ವೇ 2028ರಲ್ಲಿ ಸಾರ್ವಜನಿಕರಿಗೆ ವಾಹನ ಸಂಚಾರಕ್ಕೆ ತೆರೆಯುವ ನಿರೀಕ್ಷೆಯಿದೆ. ಈ ಎಕ್ಸ್‌ಪ್ರೆಸ್‌ವೇ ಒಟ್ಟು 12 ಜಿಲ್ಲೆಗಳ ಮೂಲಕ ಹಾದುಹೋಗಲಿದೆ. ಈ ಪೈಕಿ 9 ಕರ್ನಾಟಕದಲ್ಲಿ ಮತ್ತು ಮೂರು ಮಹಾರಾಷ್ಟ್ರದಲ್ಲಿವೆ. ಮಧ್ಯ, ಕಲ್ಯಾಣ ಹಾಗೂ ಉತ್ತರ ಕರ್ನಾಟಕದ 9, ಮಹಾರಾಷ್ಟ್ರದ ಮೂರು ಜಿಲ್ಲೆಗಳು ಸೇರಿದಂತೆ ಒಟ್ಟು 12 ಜಿಲ್ಲೆಗಳ ಮೂಲಕ ಈ ಹೆದ್ದಾರಿ ಹಾದು ಹೋಗಲಿದೆ.
ಕರ್ನಾಟಕದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ, ನೆಲಮಂಗಲ, ತುಮಕೂರು ಜಿಲ್ಲೆಯ ಕೊರಟಗೆರೆ, ಮಧುಗಿರಿ, ಚಿತ್ರದುರ್ಗ, ದಾವಣಗೆರೆಯ ಜಗಳೂರು, ವಿಜಯನಗರದ ಕೂಡ್ಲಿಗಿ, ಕೊಪ್ಪಳದ ಯಲಬುರ್ಗಾ, ಗದಗ ಜಿಲ್ಲೆಯ ರೋಣ, ನರಗುಂದ, ಬಾಗಲಕೋಟೆಯ ಬಾದಾಮಿ, ಮುಧೋಳ, ಜಮಖಂಡಿ, ಬೆಳಗಾವಿ ಜಿಲ್ಲೆಯ ಅಥಣಿ ಮೂಲಕ ಹಾಯ್ದು ಮಹಾರಾಷ್ಟ್ರದ ಸತಾರಾ, ಸಾಂಗ್ಲಿ ಮಾರ್ಗವಾಗಿ ಪುಣೆಗೆ ತಲುಪಲಿದೆ.
ಹೊಸ ಎಕ್ಸ್‌ಪ್ರೆಸ್‌ವೇಗಳ ಮಹತ್ವ: ಎಕ್ಸ್‌ಪ್ರೆಸ್ ವೇಗಳ ನಿರ್ಮಾಣದಿಂದ ಆರ್ಥಿಕ ಉತ್ತೇಜನ, ಸರಕು ಮತ್ತು ಸೇವೆಗಳ ಸುಗಮ ಚಲನೆಗೆ ಸಹಕಾರಿಯಾಗಲಿದೆ. ಇನ್ನು ಪ್ರಯಾಣ ಸಮಯವನ್ನು ಕಡಿಮೆ ಮಾಡಲಿದ್ದು, ಪ್ರಮುಖ ಆರ್ಥಿಕ ಕೇಂದ್ರಗಳ ನಡುವಿನ ಸಂಪರ್ಕವನ್ನು ಹೆಚ್ಚಿಸಲಿದೆ. ಹೀಗೆ ಆರ್ಥಿಕತೆ ಮತ್ತು ವ್ಯಾಪಾರದ ಬೆಳವಣಿಗೆಯನ್ನು ಉತ್ತೇಜಿಸಲು ಇದು ಸಿದ್ಧವಾಗಿವೆ.
ಪ್ರವಾಸೋದ್ಯಮ ಕ್ಷೇತ್ರದ ಅಭಿವೃದ್ಧಿ: ಪ್ರವಾಸೋದ್ಯಮ ಅಭಿವೃದ್ಧಿಯಾಗುವುದೇ ಉತ್ತಮ ರಸ್ತೆಗಳಿಂದ. ಇನ್ನು ಎಕ್ಸ್‌ಪ್ರೆಸ್‌ವೇಗಳು ನಿರ್ಮಾಣದಿಂದ ಪ್ರವಾಸಿ ತಾಣಗಳನ್ನು ಪ್ರವಾಸಿಗರು ಅತೀ ಬೇಗ ತಲುಪಲು ಸಹಕಾರಿಯಾಗಲಿವೆ. ಇದು ಈ ಕ್ಷೇತ್ರ ಆರ್ಥಿಕ ಬೆಳವಳಿಗೆಯಲ್ಲಿ ಅಭಿವೃದ್ಧಿ ಹೊಂದಲು ಸಹಾಯ ಆಗುತ್ತದೆ. ಪ್ರವಾಸಿಗರು ಈ ಎಕ್ಸ್‌ಪ್ರೆಸ್‌ವೇಗಳ ಉದ್ದಕ್ಕೂ ಹೊಸ ಸ್ಥಳಗಳನ್ನು ವೀಕ್ಷಣೆ ಮಾಡಲು ತುಂಬಾ ಅನುಕೂವಾಗುತ್ತದೆ.
-
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
NHAI ನಿಂದ ವಿದ್ಯಾರ್ಥಿಗಳಿಗೆ ಇಂಟರ್ನ್ಶಿಪ್ ಅವಕಾಶ: ತಿಂಗಳಿಗೆ ₹20,000 ಸ್ಟೈಪೆಂಡ್, ಅರ್ಜಿ ಸಲ್ಲಿಸಲು ಏಪ್ರಿಲ್ 15 ಕೊನೆಯ ದಿನ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ವೈಭವ್ ಸೂರ್ಯವಂಶಿ ಆಕ್ರಮಣಕಾರಿ ಆಟಕ್ಕೆ ಇಂಗ್ಲೆಂಡ್ ಮೈಕೆಲ್ ವಾಘನ್ ಫಿದಾ; ಬಿಸಿಸಿಐಗೆ ವಿಶೇಷ ಮನವಿ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ











Click it and Unblock the Notifications