ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಭಾರತದ ಕೊರೊನಾ ವೈರಸ್ ಪಾಸಿಟಿವಿಟಿ ದರ ಶೇಕಡಾ 18.17ಕ್ಕೆ ಇಳಿಕೆ

|
Google Oneindia Kannada News

ನವದೆಹಲಿ, ಮೇ 17: ಕೊರೊನಾ ವೈರಸ್‌ನ ಎರಡನೇ ಅಲೆ ದೇಶಾದ್ಯಂತ ಜನರನ್ನು ತೀವ್ರ ಸಂಕಷ್ಟಕ್ಕೆ ಸಿಲುಕಿಸಿದೆ. ಬಹುತೇಕ ರಾಜ್ಯಗಳಲ್ಲಿ ಈಗ ಲಾಕ್‌ಡೌನ್ ಘೋಷಿಸಲಾಗಿದೆ. ಈ ಮಧ್ಯೆ ಸಕಾರಾತ್ಮಕ ಸುದ್ದಿಯೊಂದು ಬಂದಿದೆ. ದೇಶದ ವಾರದ ಪಾಸಿಟಿವಿಟಿ ದರದ 18.17ಕ್ಕೆ ಇಳಿಕೆಯಾಗಿದೆ. ಸೋಮವಾರ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಈ ವಿವರಗಳನ್ನು ನೀಡಿದೆ.

ಕಳೆದ 26 ದಿನಗಳ ನಂತರ ಭಾರತದಲ್ಲಿ ದಿನವೊಂದರಲ್ಲಿ ಪತ್ತೆಯಾದ ಪ್ರಕರಣಗಳ ಸಂಖ್ಯೆ ಮೊದಲ ಬಾರಿಗೆ 3 ಲಕ್ಷಕ್ಕಿಂತ ಕಡಿಮೆಯಾಗಿದೆ ಎಂದು ಸಚಿವಾಲಯ ಮಾಹಿತಿಯನ್ನು ನೀಡಿದೆ. ಆರೋಗ್ಯ ಸಚಿವಾಲಯದ ಮಾಹಿತಿಯ ಪ್ರಕಾರ ಕಳೆದ 24 ಗಂಟೆಗಳಲ್ಲಿ 2,81,386 ಹೊರ ಕೊರೊನಾ ವೈರಸ್ ಪ್ರಕರಣಗಳು ಪತ್ತೆಯಾಗಿದೆ.

ಕೋವಿಡ್ ನಂತರದ ಸೋಂಕನ್ನು ಬ್ಲ್ಯಾಕ್‌ ಫಂಗಸ್ ಎಂದು ತಪ್ಪಾಗಿ ಕರೆಯಲಾಗುತ್ತಿದೆ: ತಜ್ಞರುಕೋವಿಡ್ ನಂತರದ ಸೋಂಕನ್ನು ಬ್ಲ್ಯಾಕ್‌ ಫಂಗಸ್ ಎಂದು ತಪ್ಪಾಗಿ ಕರೆಯಲಾಗುತ್ತಿದೆ: ತಜ್ಞರು

ಮಹಾರಾಷ್ಟ್ರದಲ್ಲಿ ಕಳೆದ 24 ಗಂಟೆಯಲ್ಲಿ ಅತಿ ಹೆಚ್ಚಿನ ಕೊರೊನಾ ವೈರಸ್ ಪ್ರಕರಣಗಳು ಪತ್ತೆಯಾಗಿದ್ದು 34389 ಪ್ರಕರಣಗಳು ಪತ್ತೆಯಾಗಿದೆ. ಎರಡನೇ ಸ್ಥಾನದಲ್ಲಿ ತಮಿಳುನಾಡು ಇದ್ದು 33181 ಹೊಸ ಪ್ರಕರಣಗಳು ಪತ್ತೆಯಾಗಿದೆ. ಮೇ 9ರ ನಂತರ ಕೊರೊನಾ ಪ್ರಕರಣಗಳ ಸರಾಸರಿ ಕುಸಿತ ಕಂಡುಬಂದಿದೆ ಎಂದು ಸಚಿವಾಲಯ ತಿಳಿಸಿದೆ.

Indias weekly coronavirus positivity rate decrease to 18.17 pc

ಇನ್ನು ಕರ್ನಾಟಕದಲ್ಲಿ ಶೇಕಡಾ 20ಕ್ಕಿಂತ ಹೆಚ್ಚು ಪಾಸಿಟಿವಿಟಿ ದರ ಹೊಂದಿರುವ 27 ಜಿಲ್ಲೆಗಳಿದ್ದು ಈ ಪಟ್ಟಿಯಲ್ಲಿ ಅಗ್ರ ಸ್ಥಾನವನ್ನು ಪಡೆದುಕೊಂಡಿದೆ. 10ಕ್ಕಿಂತ ಹೆಚ್ಚು ಪಾಸಿಟಿವಿಟಿ ದರ ಹೊಂದಿದ ಜಿಲ್ಲೆಗಳ ಪೈಕಿ ಮಧ್ಯ ಪ್ರದೇಶ ಅಗ್ರಸ್ಥಾನದಲ್ಲಿದ್ದು 38 ಜಿಲ್ಲೆಗಳನ್ನು ಹೊಂದಿದೆ.

ಕೊರೊನಾ ವಿರುದ್ಧದ ಹೋರಾಟದಲ್ಲಿ ಯಾವ ಲಸಿಕೆ ಉತ್ತಮ: ಕೊವ್ಯಾಕ್ಸಿನ್, ಕೋವಿಶೀಲ್ಡ್?ಕೊರೊನಾ ವಿರುದ್ಧದ ಹೋರಾಟದಲ್ಲಿ ಯಾವ ಲಸಿಕೆ ಉತ್ತಮ: ಕೊವ್ಯಾಕ್ಸಿನ್, ಕೋವಿಶೀಲ್ಡ್?

ಇನ್ನು ಕಳೆದ 24 ಗಂಟೆಯಲ್ಲಿ 3,78,741 ಸೋಕಿತರು ಗುಣಮುಖರಾಗಿದ್ದು ಗುಣಮುಖರಾದವರ ಸಂಖ್ಯೆ 2,11,74,076ಕ್ಕೆ ಏರಿಕೆಯಾಗಿದೆ. ಈ ಮೂಲಕ ರಾಷ್ಟ್ರೀಯ ಕೊರೊನಾ ವೈರಸ್ ಗುಣಮುಖರಾದವರ ಪ್ರಮಾಣ 84.81ಕ್ಕೆ ಏರಿಕೆಯಾಗಿದೆ.

English summary
India's weekly coronavirus positivity rate decrease to 18.17 pc said the Ministry of Health and Family Welfare on Monday.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X