ದೇಶಾದ್ಯಂತ 500ಕ್ಕೂ ಅಧಿಕ ಇಂಡಿಗೋ ವಿಮಾನಗಳ ಹಾರಾಟ ರದ್ದು: ರೊಚ್ಚಿಗೆದ್ದ ಪ್ರಯಾಣಿಕರು ಮಾಡಿದ್ದೇನು ಗೊತ್ತಾ?
IndiGo Flights Cancellation: ದೇಶಾದ್ಯಂತ ಇಂದು ಒಂದೇ ದಿನ 500ಕ್ಕೂ ಅಧಿಕ ಇಂಡಿಗೋ ವಿಮಾನಗಳ ಹಾರಾಟವನ್ನು ರದ್ದುಪಡಿಸಲಾಗಿದೆ. ಬೆಂಗಳೂರು, ದೆಹಲಿ, ಹೈದರಾಬಾದ್, ಮುಂಬೈ ಸೇರಿದಂತೆ ಹಲವಾರು ಭಾಗಳಲ್ಲಿ ವಿಮಾನ ಸಂಚಾರವನ್ನು ರದ್ದುಪಡಿಸಲಾಗಿದೆ. ಇದರಿಂದ ರೊಚ್ಚಿಗೆದ್ದ ಪ್ರಯಾಣಿಕರು ಹೇಳೋದೇನು ಹಾಗೂ ಇದಕ್ಕೆ ಸಂಸ್ಥೆಯ ಸ್ಪಷ್ಟನೆ ಏನು ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಇಂಡಿಗೋ ವಿಮಾನ ರದ್ದುಪಡಿಸಿದ ಕಾರಣ ಪ್ರಯಾಣಿಕರು ಪರದಾಡಿದ್ದು, ವಿಮಾನಯಾನ ಸಂಸ್ಥೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಂಗಳೂರು, ಮುಂಬೈ, ಹೈದರಾಬಾದ್ ಸೇರಿದಂತೆ ಹಲವಾರು ಪ್ರಮುಖ ನಗರಗಳಲ್ಲಿ ಇಂಡಿಗೋ ವಿಮಾನ ಬುಕ್ ಮಾಡಿದ ಪ್ರಯಾಣಿಕರು ಏರ್‌ಪೋರ್ಟ್‌ನಲ್ಲೇ ಊಟ, ನೀರು ಇಲ್ಲದೆ ಪರದಾಡಿದ ಘಟನೆಗಳು ನಡೆದಿವೆ.

ಇನ್ನೂ ರಾಷ್ಟ್ರ ರಾಜಧಾನು ನವದೆಹಲಿ ಏರ್‌ಪೋರ್ಟ್‌ನ ಟರ್ಮಿನಲ್‌ಗಳಲ್ಲಿ ಜನದಟ್ಟಣೆ ನಿಯಂತ್ರಿಸಲು ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ವಿಮಾನ ನಿಲ್ದಾಣದ ಅಧಿಕಾರಿಗಳು ತಿಳಿಸಿದ್ದಾರೆ. ಇಂದು ಮಧ್ಯರಾತ್ರಿ 11:59ರ ವರೆಗೆ ಎಲ್ಲಾ ಇಂಡಿಗೋ ದೇಶಿಯ ವಿಮಾನಗಳ ಹಾರಾಟ ರದ್ದುಪಡಿಸಲಾಗಿದೆ. ಅದಕ್ಕೆ ಮುಂಚಿತವಾಗಿ ಇಲ್ಲಿಂದ ನಿರ್ಗಮನಕ್ಕೆ ಆಯೋಜಿಸಿರುವ ಪ್ರಯಾಣಿಕರು ಏರ್‌ಪೋರ್ಟ್‌ಗೆ ಬಾರದಂತೆ ಮನವಿ ಮಾಡಿದ್ದಾರೆ.
ಎಲ್ಲೆಲ್ಲಿ ಎಷ್ಟು ವಿಮಾನಗಳ ರದ್ದು?
* ಮುಂಬೈ ವಿಮಾನ ನಿಲ್ದಾಣ: 53 ನಿರ್ಗಮನ ಮತ್ತು 51 ಆಗಮನ ವಿಮಾನಗಳು ಸೇರಿದಂತೆ ಒಟ್ಟು 104 ವಿಮಾನಗಳ ಹಾರಾಟ ರದ್ದು
* ಬೆಂಗಳೂರು ವಿಮಾನ ನಿಲ್ದಾಣ: 52 ಆಗಮನ ಮತ್ತು 50 ನಿರ್ಗಮನ ವಿಮಾನಗಳ ಹಾರಾಟ ರದ್ದು
* ಹೈದರಾಬಾದ್ ವಿಮಾನ ನಿಲ್ದಾಣ: ಒಟ್ಟು 43 ಆಗಮನ ಮತ್ತು 49 ನಿರ್ಗಮನ ವಿಮಾನಗಳನ್ನ ರದ್ದು
* ಮಧ್ಯರಾತ್ರಿ 12ರಿಂದ ಬೆಳಗ್ಗೆ 8 ಗಂಟೆವರೆಗೆ ಪುಣೆ ವಿಮಾನ ನಿಲ್ದಾಣದಲ್ಲಿ ಒಟ್ಟು 16 ಆಗಮನ ಮತ್ತು 16 ನಿರ್ಗಮನ ವಿಮಾನಗಳ ರದ್ದು
* ತಿರುವನಂತಪುರಂ ವಿಮಾನ ನಿಲ್ದಾಣದಲ್ಲಿ 3 ಆಗಮನ ಮತ್ತು 3 ನಿರ್ಗಮನ ಇಂಡಿಗೋ ವಿಮಾನಗಳ ಹಾರಾಟದಲ್ಲಿ ವಿಳಂಬ, 2 ಆಗಮನ ಮತ್ತು 2 ನಿರ್ಗಮನ ವಿಮಾನಗಳ ಹಾರಾಟವನ್ನ ರದ್ದು.
* ಕೋಲ್ಕತ್ತಾ ವಿಮಾನ ನಿಲ್ದಾಣದಲ್ಲಿ 320 ವಿಮಾನಗಳ ಹಾರಾಟದಲ್ಲಿ ವಿಳಂಬ ಆಗಿದ್ದರೆ, 92 ವಿಮಾನಗಳ ಹಾರಾಟ ರದ್ದಾಗಿದೆ ಎಂದು ತಿಳಿದುಬಂದಿದೆ.
ಇಂಡಿಗೋ ಹೇಳಿದ್ದೇನು?: ವಿಮಾನಗಳ ಹಾರಾಟದಲ್ಲಿ ವ್ಯತ್ಯಯ ಉಂಟಾದ ಹಿನ್ನೆಲೆ ಇಂಡಿಗೋ ಸಂಸ್ಥೆ ಪ್ರಯಾಣಿಕರಲ್ಲಿ ಕ್ಷಮೆಯಾಚನೆ ಮಾಡಿದೆ. ಈ ಕುರಿತು ಇಂಡಿಗೋ ಡಿಜಿಸಿಎಗೆ ಮಾಹಿತಿ ನೀಡಿದ್ದು, ಫೆಬ್ರವರಿ 10ರ ವೇಳೆಗೆ ವಿಮಾನಗಳ ಹಾರಾಟವನ್ನು ಪುನರಾರಂಭ ಮಾಡಲಾಗುವುದು ಎಂದು ತಿಳಿಸಿದೆ.
ಕಳೆದ ಎರಡು ದಿನಗಳಿಂದ ವಿಮಾನಗಳು ರದ್ದಾಗಿದ್ದಕ್ಕೆ ಪ್ರಯಾಣಿಕರಿಗೆ ಇಂಡಿಗೋ ಸಂಸ್ಥೆ ಕ್ಷಮೆಯಾಚಿಸಿದೆ. ಸಿಬ್ಬಂದಿ ಸಮಸ್ಯೆಯಿಂದ ಅಂತಾರಾಷ್ಟ್ರೀಯ ಹಾಗೂ ದೇಶೀಯ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ ಉಂಟಾಗಿದೆ ಎನ್ನುವ ಮಾಹಿತಿ ತಿಳಿದುಬಂದಿದೆ. ಆದರೆ, ದೇಶಾದ್ಯಂತ ಈ ಸಮಸ್ಯೆ ಇದ್ದರೆ, ಯಾಕೆ ವಿಮಾನ ಬುಕಿಂಗ್ ಸೇವೆಯನ್ನು ತೆರೆಯಬೇಕು. ಬದಲಾಗಿ ಕ್ಲೋಸ್ ಮಾಡಬೇಕಿತ್ತು ಎಂದು ಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇಂದು ದೇಶಾದ್ಯಂತ ವಿಮಾನ ಹಾರಾಟ ರದ್ದಾಗಿದ್ದು, ಇಂಡಿಗೋ ವಿರುದ್ಧ ಪ್ರಯಾಣಿಕರು ಕೆಂಡಕಾರುತ್ತಿದ್ದಾರೆ. ಕೆಲ ಪ್ರಯಾಣಿಕರು ದಿಕ್ಕು ತೋಚದೆ ಸುಮ್ಮನೆ ಏರ್‌ಪೋರ್ಟ್‌ಗಳಲ್ಲಿ ಕುಳಿತುಕೊಂಡಿದ್ದರೆ, ಇನ್ನೂ ಬಹುತೇಕ ಮಂದಿ ವಿಮಾನಯಾನ ಸಂಸ್ಥೆ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಊಟ, ನೀರು ಇಲ್ಲ. ಪರ್ಯಾಯ ವ್ಯವಸ್ಥೆ ಇಲ್ಲ. ಬೇರೆ ಪರ್ಯಾಯ ವ್ಯವಸ್ಥೆ ಮಾಡಿಕೊಳ್ಳಲು ಹಣ ಕೂಡ ಇಲ್ಲ ಎಂದು ಆಕ್ರೋಶ ಹೊರಹಾಕಿದ್ದಾರೆ.
-
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video












Click it and Unblock the Notifications