IndiGo: ಇಂಡಿಗೋ ವಿಮಾನ ಪ್ರಯಾಣಿಕರಿಗೆ ರಿಲೀಫ್: ₹610 ಕೋಟಿ ಟಿಕೆಟ್ ಹಣ ವಾಪಸ್
ಇಂಡಿಗೋ ಭಾನುವಾರ 650ಕ್ಕೂ ಹೆಚ್ಚು ವಿಮಾನಗಳನ್ನು ರದ್ದುಗೊಳಿಸಿದ್ದು, ತೊಂದರೆಗೊಳಗಾದ ಪ್ರಯಾಣಿಕರಿಗೆ ₹610 ಕೋಟಿಗೂ ಹೆಚ್ಚು ಟಿಕೆಟ್ ಹಣ ಮರುಪಾವತಿ ಪ್ರಕ್ರಿಯೆ ನಡೆದಿದೆ ಎಂದು ವರದಿಯಾಗಿದೆ.
ಇಂಡಿಗೋ ವಿಮಾನಗಳ ಹಾರಾಟ ದಿಢೀರ್ ರದ್ದಾದ ಹಿನ್ನೆಲೆ ಕೆಲ ದಿನಗಳಿಂದ ಪ್ರಯಾಣಿಕರ ಆಕ್ರೋಶಕ್ಕೆ ಸಂಸ್ಥೆ ಗುರಿಯಾಗಿತ್ತು. ಇದೀಗ ಮತ್ತೆ ಕಾರ್ಯಾಚರಣೆ ಎಂದಿನಂತೆ ಸಹಜ ಸ್ಥಿತಿಗೆ ಬರುತ್ತಿರುವ ಸೂಚನೆ ನೀಡಿರುವ ಇಂಡಿಗೋ, ಇತ್ತೀಚೆಗೆ ಟಿಕೆಟ್ ಬುಕಿಂಗ್ ಮಾಡಿಯೂ ವಿಮಾನ ಪ್ರಯಾಣದಿಂದ ವಂಚಿತರಾದ ಪ್ರಯಾಣಿಕರಿಗೆ ರಿಲೀಫ್ ನೀಡಿದೆ. ಇತ್ತೀಚಿನ ಅಡಚಣೆಗೆ ಕ್ಷಮೆ ಕೋರಿರುವ ಇಂಡಿಗೋ, ಬರೋಬ್ಬರಿ 610 ಕೋಟಿ ರೂಪಾಯಿಯಷ್ಟು ಟಿಕೆಟ್ ಹಣವನ್ನು ಪ್ರಯಾಣಿಕರಿಗೆ ವಾಪಸ್ ನೀಡುವುದಾಗಿ ಘೋಷಿಸಿದೆ.
ವಿಮಾನಯಾನ ಸಂಸ್ಥೆಯು 137 ನಿಲ್ದಾಣಗಳಲ್ಲಿ ತನ್ನ ನೆಟ್‌ವರ್ಕ್ ವ್ಯಾಪ್ತಿಯನ್ನು ಪುನಃಸ್ಥಾಪಿಸಿದೆ ಎಂದು ಇಂಡಿಗೋ ಸಿಇಒ ಪೀಟರ್ ಎಲ್ಬರ್ಸ್ ವೀಡಿಯೊ ಸಂದೇಶದಲ್ಲಿ ತಿಳಿಸಿದ್ದಾರೆ. ಇಂಡಿಗೋ 1,650ಕ್ಕೂ ಹೆಚ್ಚು ವಿಮಾನಗಳನ್ನು ನಿರ್ವಹಿಸುವ ಹಾದಿಯಲ್ಲಿದೆ. ನಿನ್ನೆ 1,500 ವಿಮಾನಗಳ ಹಾರಾಟದಿಂದ ಇದು ಹೆಚ್ಚಾಗಿದೆ ಎಂದು ವಿಮಾನಯಾನ ಸಂಸ್ಥೆ ಇಂದು ಮಾಹಿತಿ ನೀಡಿದೆ. ಈಗ 138 ತಾಣಗಳಲ್ಲಿ 137 ಸ್ಥಳಗಳು ಕಾರ್ಯಾಚರಣೆಯಲ್ಲಿದ್ದು, ಸಮಯಕ್ಕೆ ಸರಿಯಾಗಿ ಶೇ 75ರಷ್ಟು ಕಾರ್ಯಕ್ಷಮತೆಯನ್ನು ಹೊಂದಿವೆ ಎಂದು ಹೇಳಿದೆ.

ವರದಿಗಳ ಪ್ರಕಾರ ದೇಶದಾದ್ಯಂತ ಇಂಡಿಗೋ ವಿಮಾನಯಾನ ಸಂಸ್ಥೆಯು ಸತತ ಆರನೇ ದಿನವಾದ ಭಾನುವಾರವೂ ಕೆಲ ಅಡಚಣೆಗಳನ್ನು ಎದುರಿಸಿದೆ. ಮುಂಬೈ ಮತ್ತು ದೆಹಲಿ ವಿಮಾನ ನಿಲ್ದಾಣಗಳಲ್ಲಿ 220ಕ್ಕೂ ಹೆಚ್ಚು ವಿಮಾನಗಳ ಹಾರಾಟವನ್ನು ರದ್ದುಗೊಳಿಸಿದೆ ಎಂದು ಮೂಲಗಳು ತಿಳಿಸಿವೆ. ಅಲ್ಲದೆ ಇಂಡಿಗೋ ಭಾನುವಾರ 650ಕ್ಕೂ ಹೆಚ್ಚು ವಿಮಾನಗಳನ್ನು ರದ್ದುಗೊಳಿಸಿದ್ದು, ತೊಂದರೆಗೊಳಗಾದ ಪ್ರಯಾಣಿಕರಿಗೆ ₹610 ಕೋಟಿಗೂ ಹೆಚ್ಚು ಟಿಕೆಟ್ ಮರುಪಾವತಿ ಪ್ರಕ್ರಿಯೆ ನಡೆದಿದೆ ಎಂದು ವರದಿಯಾಗಿದೆ.
ದೇಶದ ಅತಿದೊಡ್ಡ ವಿಮಾನಯಾನ ಸಂಸ್ಥೆಯಾಗಿರುವ ಇಂಡಿಗೋ, ತನ್ನ ಕಾರ್ಯಾಚರಣೆ ನಿಧಾನವಾಗಿ ಸ್ಥಿರವಾಗುತ್ತಿದ್ದಂತೆ ಭಾನುವಾರ 650ಕ್ಕೂ ಹೆಚ್ಚು ವಿಮಾನಗಳನ್ನು ರದ್ದುಗೊಳಿಸಿತು. ವಿಮಾನ ರದ್ದತಿ ಕಡಿಮೆಯಾದರೂ ತೊಂದರೆಗೊಳಗಾದ ಪ್ರಯಾಣಿಕರಿಗೆ 610 ಕೋಟಿ ರೂ. ಮೌಲ್ಯದ ಟಿಕೆಟ್ ಮೊತ್ತವನ್ನು ಮರುಪಾವತಿ ಮಾಡುವುದಾಗಿ ಹೇಳಿದೆ.
ಇಂಡಿಗೋ ಸಾಮಾನ್ಯವಾಗಿ ಪ್ರತಿದಿನ ಸುಮಾರು 2,300 ವಿಮಾನಗಳನ್ನು ನಿರ್ವಹಿಸುತ್ತದೆ. ಭಾನುವಾರ 1,650 ವಿಮಾನಗಳನ್ನು ನಿರ್ವಹಿಸುವ ನಿರೀಕ್ಷೆಯಿತ್ತು. ಹೀಗಾಗಿ ಶನಿವಾರ ಹಾರಾಟ ನಡೆಸಿದ 1,500 ವಿಮಾನಗಳಿಗಿಂತ ಕಾರ್ಯಾಚರಣೆ ಹೆಚ್ಚಾಗಿದೆ ಎಂದು ಪಿಟಿಐ ವರದಿ ಮಾಡಿದೆ. ಇಂಡಿಗೋ ಸದ್ಯ ಕಾರ್ಯಾಚರಣೆಗಳನ್ನು ಸ್ಥಿರಗೊಳಿಸುವಲ್ಲಿ ನಿರತವಾಗಿದ್ದು, ಡಿಸೆಂಬರ್ 10ರೊಳಗೆ ಸಹಜ ಸ್ಥಿತಿಗೆ ಮರುಳುವ ನಿರೀಕ್ಷೆಯಿದೆ.
ಡಿಜಿಸಿಎ ನೋಟಿಸ್
ಭಾರತ ಸರ್ಕಾರವು ವಿಮಾನಯಾನ ಸಂಸ್ಥೆಯ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಹೇಳಿದೆ. ನಾಗರಿಕ ವಿಮಾನಯಾನ ನಿರ್ದೇಶನಾಲಯವು (ಡಿಜಿಸಿಎ) ಇಂಡಿಗೋ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪೀಟರ್ ಎಲ್ಬರ್ಸ್ ಅವರಿಗೆ ಈ ವಿಮಾನ ಅಡಚಣೆಗಳಿಗೆ ವಿವರಣೆ ನೀಡುವಂತೆ ಶೋಕಾಸ್ ನೋಟಿಸ್ ನೀಡಿದೆ. ಭಾರತೀಯ ರೈಲ್ವೆ ಈ ಬಿಕ್ಕಟ್ಟಿನ ನಡುವೆ ಮಧ್ಯಪ್ರವೇಶಿಸಿ, ಇಂಡಿಗೋ ಪ್ರಯಾಣಿಕರಿಗೆ ಸಹಾಯ ಮಾಡಲು ಮುಂದಿನ ಮೂರು ದಿನಗಳವರೆಗೆ ಎಲ್ಲಾ ವಲಯಗಳಲ್ಲಿ 89 ವಿಶೇಷ ರೈಲು ಸೇವೆ ಘೋಷಿಸಿದೆ.
-
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger -
Vijay Mallya: ವಿಜಯ್ ಮಲ್ಯ ಆರ್ಸಿಬಿಗೆ ಇಂಗ್ಲೀಷ್ ಪದಗಳಲ್ಲಿ ಕನ್ನಡದ ವಿಶೇಷ ಸಂದೇಶ: ಭಾರೀ ವೈರಲ್ -
ಸಕಲೇಶಪುರ: ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಸ್ಥಳೀಯರಿಂದ ಹಲ್ಲೆ -
ಐಪಿಎಲ್ 2026: ಆರ್ಸಿಬಿ-ಎಸ್ಆರ್ಎಚ್ ಪಂದ್ಯದ ಸಮಯ, ನೇರಪ್ರಸಾರ, ಸಂಪೂರ್ಣ ತಂಡಗಳ ವಿವರ ತಿಳಿಯಿರಿ -
March 28 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Viral ಆಯ್ತು ಅಕೌಂಟ್ಸ್ ಪ್ರಶ್ನೆಪತ್ರಿಕೆ: ಪರೀಕ್ಷೆಯಲ್ಲೂ ಮಿಂಚಿದ 'ಧುರಂಧರ್: ದಿ ರಿವೆಂಜ್' ಸಿನಿಮಾದ ಪಾತ್ರಗಳು












Click it and Unblock the Notifications