ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಗುಜರಾತಿನಲ್ಲೂ ಇಂದಿರಾ ಕ್ಯಾಂಟೀನ್: ರಾಹುಲ್
ಅಹಮದಾಬಾದ್, ಡಿಸೆಂಬರ್ 8: ಗುಜರಾತ್ ನಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಇಂದಿರಾ ಕ್ಯಾಂಟೀನ್ ಆರಂಭಿಸುವುದಾಗಿ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಹೇಳಿದರು.
ಎರಡನೇ ಹಂತದ ಮತದಾನ ನಡೆಯಲಿರುವ ಆನಂದ್ ನಲ್ಲಿ ಇಂದು ಬಹಿರಂಗ ಸಮಾವೇಶ ಉದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, "ಮಿತ ದರದಲ್ಲಿ ಎಲ್ಲರಿಗೂ ಆಹಾರ ಸಿಗುವ ಮಾದರಿ ಕ್ಯಾಂಟೀನ್ ಯೋಜನೆಯನ್ನು ಕರ್ನಾಟಕದಲ್ಲಿ ಕಾಂಗ್ರೆಸ್ ಸರಕಾರ ಆರಂಭಿಸಿದೆ. ನಾವು ಇದನ್ನು ಗುಜರಾತಿನಲ್ಲಿಯೂ ಆರಂಭಿಸುತ್ತೇವೆ," ಎಂದು ಭರವಸೆ ನೀಡಿದರು.

ಇದೇ ವೇಳೆ ಅವರು ನಾವು ಬಿಜೆಪಿಯ ಪ್ರಣಾಳಿಕೆಯ ಬಗ್ಗೆ ಪ್ರಶ್ನೆ ಎತ್ತಿದ್ದೆವು. ಇದೀಗ ಬಿಜೆಪಿ ಮುಚ್ಚಿದ ಬಾಗಿಲುಗಳ ಹಿಂದೆ ತರಾತುರಿಯಲ್ಲಿ ಪ್ರಣಾಳಿಕೆ ಸಿದ್ಧಪಡಿಸಿ ಅರುಣ್ ಜೇಟ್ಲಿ ಕೈಯಲ್ಲಿ ಬಿಡುಗಡೆ ಮಾಡಿಸಿದೆ ಎಂದು ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದರು.
ಗುಜರಾತಿನಲ್ಲಿ ನಾಳೆ ಅಂದರೆ ಡಿಸೆಂಬರ್ 9ರಂದು ಮೊದಲ ಹಂತದ ಮತದಾನ ನಡೆಯಲಿದೆ. ಡಿಸೆಂಬರ್ 14ರಂದು ಎರಡನೇ ಹಂತದ ಮತದಾನ ನಡೆಯಲಿದೆ. ಡಿಸೆಂಬರ್ 18ರ ಸೋಮವಾರ ಚುನಾವಣೆಯ ಫಲಿತಾಂಶ ಹೊರ ಬೀಳಲಿದೆ.












Click it and Unblock the Notifications