ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Video: ಉತ್ತರಾಖಂಡ್ ನಲ್ಲಿ ಕಾರ್ಮಿಕರ ರಕ್ಷಿಸಲು ಸುರಂಗಕ್ಕೆ ಇಳಿದ ಐಟಿಬಿಪಿ!

|
Google Oneindia Kannada News

ಡೆಹ್ರಾಡೂನ್, ಫೆಬ್ರವರಿ.09: ಉತ್ತರಾಖಂಡ್ ಚಮೋಲಿ ಜಿಲ್ಲೆಯಲ್ಲಿ ಹಿಮಪಾತದಿಂದ ಸೃಷ್ಟಿಯಾಗಿರುವ ಪ್ರವಾಹ ಪರಿಸ್ಥಿತಿ ನಡುವೆ ಸುರಂಗದಲ್ಲಿ ಸಿಲುಕಿರುವ ಕಾರ್ಮಿಕರನ್ನು ರಕ್ಷಿಸುವುದಕ್ಕೆ ಇಂಡೋ-ಟಿಬೆಟಿಯನ್ ಗಡಿ ಪೊಲೀಸರು ತಮ್ಮ ಪ್ರಾಣವನ್ನೇ ಪಣಕ್ಕಿಟ್ಟಿದ್ದಾರೆ.

ಕಗ್ಗತ್ತಲಿನ ಸುರಂಗದಲ್ಲಿ ಹಗ್ಗದ ಸಹಾಯದಿಂದ ಇಳಿದು ಅಲ್ಲಿ ಸಿಲುಕಿರುವ ಕಾರ್ಮಿಕರನ್ನು ರಕ್ಷಿಸುವಲ್ಲಿ ಭದ್ರತಾ ಸಿಬ್ಬಂದಿಯು ನಿರತರಾಗಿದ್ದಾರೆ. ಚಮೋಲಿ ಜಿಲ್ಲೆಯ ಒಂದು ಸುರಂಗದಲ್ಲಿ ಸಿಲುಕಿದ್ದ 12 ಕಾರ್ಮಿಕರನ್ನು ಈಗಾಗಲೇ ರಕ್ಷಿಸಲಾಗಿದೆ. ಕಳೆದ ಜನವರಿ.07ರಂದು ಐಟಿಬಿಪಿ ಸಿಬ್ಬಂದಿಯೊಬ್ಬರು ಸುರಂಗದಲ್ಲಿ ಸಿಲುಕಿದ ಕಾರ್ಮಿಕನಿಗಾಗಿ ಸುರಂಗಕ್ಕಿಳಿದ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

Indo-Tibetan Border Police Personnel Rescued People Who Were Trapped In A Tunnel In Chamoli

Uttarakhand glacier burst live updates: 26 ಮೃತದೇಹ ಪತ್ತೆ, ಇನ್ನೂ 171 ಜನರು ಕಣ್ಮರೆUttarakhand glacier burst live updates: 26 ಮೃತದೇಹ ಪತ್ತೆ, ಇನ್ನೂ 171 ಜನರು ಕಣ್ಮರೆ

ಫೆ. 8ರ ರಾತ್ರಿ ಎಂಟು ಗಂಟೆಯವರೆಗೂ 26 ಮೃತದೇಹಗಳು ಪತ್ತೆಯಾಗಿವೆ. 171 ಜನರು ಇನ್ನೂ ಪತ್ತೆಯಾಗಿಲ್ಲ. ಸುಮಾರು 35 ಜನರು ಸುರಂಗದ ಒಳಗೆ ಇದ್ದಾರೆ ಎಂದು ಶಂಕಿಸಲಾಗಿದೆ. ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ ಎಂದು ಡಿಜಿಪಿ ಅಶೋಕ್ ಕುಮಾರ್ ತಿಳಿಸಿದ್ದಾರೆ.

ಉತ್ತರಾಖಂಡ್ ಹಿಮಪಾತದಲ್ಲಿ 26 ಮಂದಿ ಸಾವು:

ಉತ್ತರಾಖಂಡ್ ಚಮೋಲಿ ಜಿಲ್ಲೆಯಲ್ಲಿ ಹಿಮನದಿ ಸ್ಫೋಟದಿಂದ ಮೃತಪಟ್ಟವರ ಸಂಖ್ಯೆ 26ಕ್ಕೆ ಏರಿಕೆಯಾಗಿದೆ. ಜೋಶಿಮಠ್ ಪ್ರದೇಶದಲ್ಲಿ ಹಿಮಪರ್ವತ ಸ್ಫೋಟದಿಂದ ಅಲಕ್ ನಂದ್, ದೌಲಿಗಂಗಾ ನದಿಯಲ್ಲಿ ನೀರು ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. 171ಕ್ಕೂ ಅಧಿಕ ಮಂದಿ ಕಾರ್ಮಿಕರು ನಾಪತ್ತೆ ಆಗಿದ್ದಾರೆ. ಉತ್ತರಾಖಂಡ್ ನಲ್ಲಿ ರಕ್ಷಣಾ ಕಾರ್ಯಾಚರಣೆಗಾಗಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡ, ಇಂಡೋ-ಟಿಬೆಟಿಯನ್ ಗಡಿ ಪೊಲೀಸರ ತಂಡವು ಉತ್ತರಾಖಂಡ್ ನ ಹಲವು ಪ್ರದೇಶಗಳಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದೆ. ಭಾರತೀಯ ಸೇನಾ ಪಡೆಯ 6 ತಂಡ ಮತ್ತು ನೌಕಾಪಡೆಯ ಆರು ತಂಡವನ್ನು ಕಾರ್ಯಾಚರಣೆಯಲ್ಲಿ ಕೈಜೋಡಿಸಿದೆ.

English summary
Indo-Tibetan Border Police Personnel Rescued People Who Were Trapped In A Tunnel In Chamoli.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X