ಭಜರಂಗದಳ ಕಾರ್ಯಕರ್ತರನ್ನು ಮನಬಂದಂತೆ ತಳಿಸಿದ ಮಧ್ಯಪ್ರದೇಶ ಪೋಲಿಸರು- ಬಿಜೆಪಿ ಸರ್ಕಾರದ ವಿರುದ್ಧ ಆಕ್ರೋಶ
ಇಂದೋರ್, ಜೂನ್ 16: ಪ್ರತಿಭಟನಾ ನಿರತ ಭಜರಂಗ ಕಾರ್ಯಕರ್ತರ ಮೇಲೆ ಮಧ್ಯಪ್ರದೇಶ ಪೊಲೀಸರು ಲಾಟಿಯಿಂದ ಹಲ್ಲೆ ನಡೆಸಿದ್ದಾರೆ. ಇಂದೋರ್ ನಗರದಲ್ಲಿ ಅಕ್ರಮ ಮಾದಕ ದ್ರವ್ಯ ದಂಧೆಯಲ್ಲಿ ತೊಡಗಿರುವವರ ವಿರುದ್ಧ ದೂರು ನೀಡಿದ್ದಕ್ಕಾಗಿ ಸಂಘಟನೆಯ ಸದಸ್ಯರ ವಿರುದ್ಧ ಸುಳ್ಳು ಪ್ರಕರಣಗಳನ್ನು ದಾಖಲಿಸಲಾಗಿತ್ತು. ಇದರ ವಿರುದ್ಧ ಧರಣಿ ನಡೆಸುತ್ತಿದ್ದಾಗ ಪೊಲೀಸರು ಭಜರಂಗದಳದ ಕಾರ್ಯಕರ್ತರ ಮೇಲೆ ಲಾಠಿ ಚಾರ್ಜ್ ನಡೆಸಿ 11 ಮಂದಿಯನ್ನು ಬಂಧಿಸಿದ್ದಾರೆ ಎಂದು ವರದಿಯಾಗಿದೆ.
ಗುರುವಾರ ತಡರಾತ್ರಿ ಈ ಘಟನೆ ನಡೆದಿದೆ. ಭಜರಂಗದಳದ ಕಾರ್ಯಕರ್ತರು ನಗರದ ಜನನಿಬಿಡ ಜಂಕ್ಷನ್ ಪಲೇಶಿಯಾ ಚೌಕದಲ್ಲಿ ಧರಣಿ ಸತ್ಯಾಗ್ರಹ ನಡೆಸುತ್ತಿದ್ದರು. ಇದರಿಂದ ಟ್ರಾಫಿಕ್ ಜಾಮ್ ಉಂಟಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪೊಲೀಸ್ ಲಾಠಿ ಚಾರ್ಜ್‌ನಲ್ಲಿ ಕೆಲವು ಭಜರಂಗದಳ ಸದಸ್ಯರಿಗೆ ಗಾಯಗಳಾಗಿವೆ ಎಂದು ತಿಳಿದುಬಂದಿದೆ. ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರವು ಪ್ರತಿಭಟನೆ ಮತ್ತು ಪೊಲೀಸ್ ಕ್ರಮದ ಬಗ್ಗೆ ತನಿಖೆಗೆ ಆದೇಶಿಸಿದೆ.
ಭಜರಂಗದಳದ ಕಾರ್ಯಕರ್ತರ ಗುಂಪು ಯಾವುದೇ ಅನುಮತಿಯಿಲ್ಲದೆ ದಟ್ಟಣೆಯ ಜಾಗದಲ್ಲಿ ಏಕಾಏಕಿ ಜಮಾಯಿಸಿ ಧರಣಿ ಪ್ರತಿಭಟನೆ ನಡೆಸಿತು. ಇದು ನಾಲ್ಕೂ ರಸ್ತೆಗಳಲ್ಲಿ ಟ್ರಾಫಿಕ್ ಜಾಮ್‌ಗೆ ಕಾರಣವಾಯಿತು. ಪೊಲೀಸರು ಪದೇ ಪದೇ ಮನವಿ ಮಾಡಿದರೂ ಪ್ರತಿಭಟನಾಕಾರರು ಮಣಿಯಲು ನಿರಾಕರಿಸಿದರು. ಅವರನ್ನು ಸ್ಥಳಾಂತರಿಸಲಾಯಿತು. ಲಘು ಲಾಟಿ ಬಲವನ್ನು ಬಳಸಿ ಸ್ಥಳದಿಂದ ಅವರನ್ನು ಹೊರ ಕಳಿಸಲಾಯಿತು ಎಂದು ಉಪ ಪೊಲೀಸ್ ಆಯುಕ್ತ (ಡಿಸಿಪಿ) ಧರ್ಮೇಂದ್ರ ಸಿಂಗ್ ಭಡೋರಿಯಾ ಹೇಳಿದ್ದಾರೆ.
Bajrang Dal goons were brutality thrashed by their Madhya Pradesh police under Shivraj Singh Chauhan.
— Shantanu (@shaandelhite) June 15, 2023
Lol, BJP leaders were shouting on Congress for ban and now they're beating these goons. pic.twitter.com/ZkC7cRlGB2
ಇವರಲ್ಲಿ ಹನ್ನೊಂದು ಪ್ರತಿಭಟನಾಕಾರರನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿ ಹೇಳಿದರು.
'ಚಕ್ಕಾ ಜಾಮ್' ಪ್ರತಿಭಟನೆಯ ವೇಳೆ ಭಜರಂಗದಳದ ಕಾರ್ಯಕರ್ತರನ್ನು ನಿಯಂತ್ರಿಸಲು ಯತ್ನಿಸುತ್ತಿದ್ದಾಗ ಐವರು ಪೊಲೀಸ್ ಸಿಬ್ಬಂದಿಗೆ ಗಾಯಗಳಾಗಿದ್ದು, ಕೆಲವರು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದರು ಎಂದು ವರದಿಯಾಗಿದೆ.
ಈ ಸಂಬಂಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಡಿಸಿಪಿ ತಿಳಿಸಿದ್ದಾರೆ. ಭಜರಂಗದಳದ ಕಾರ್ಯಕರ್ತರು ಗಂಟೆಗಟ್ಟಲೆ ಧರಣಿ ನಡೆಸಿದ್ದರಿಂದ ಸಂಚಾರ ಅಸ್ತವ್ಯಸ್ತಗೊಂಡಿತು. ಪಲಾಸಿಯಾ ಡಿವೈಡರ್‌ನಲ್ಲಿ ವಾಹನಗಳ ಉದ್ದನೆಯ ಸರತಿ ಸಾಲಿನಲ್ಲಿ ನಿಂತಿದ್ದವು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
ಪೊಲೀಸ್ ಲಾಠಿ ಚಾರ್ಜ್‌ನಲ್ಲಿ 11 ಭಜರಂಗದಳ ಕಾರ್ಯಕರ್ತರು ಗಾಯಗೊಂಡಿದ್ದಾರೆ ಎಂದು ರಾಜ್ಯದ ಆಡಳಿತಾರೂಢ ಬಿಜೆಪಿ ಹೇಳಿದೆ.
ಭಜರಂಗದಳದ ಕಾರ್ಯಕರ್ತರ ಮೇಲೆ ಪೊಲೀಸರು ಕ್ರೂರವಾಗಿ ಲಾಠಿ ಚಾರ್ಜ್ ಮಾಡಿದ್ದಾರೆ. ಇದರಿಂದಾಗಿ 11 ಜನರು ಗಾಯಗೊಂಡಿದ್ದಾರೆ ಎಂದು ಬಿಜೆಪಿಯ ಇಂದೋರ್ ಘಟಕದ ಅಧ್ಯಕ್ಷ ಗೌರವ್ ರಾಂದಿವ್ ಪಿಟಿಐಗೆ ತಿಳಿಸಿದ್ದಾರೆ.
ಘಟನೆ ಕುರಿತು ತನಿಖೆ ನಡೆಸಿ ತಪ್ಪಿತಸ್ಥ ಪೊಲೀಸ್ ಸಿಬ್ಬಂದಿ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಏತನ್ಮಧ್ಯೆ, ಶುಕ್ರವಾರ ಭೋಪಾಲ್‌ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ರಾಜ್ಯ ಗೃಹ ಸಚಿವ ಮತ್ತು ಸರ್ಕಾರದ ವಕ್ತಾರ ನರೋತ್ತಮ್ ಮಿಶ್ರಾ ಅವರು ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮವನ್ನು ತೆಗೆದುಕೊಳ್ಳಲಾಗುವುದು ಎಂದು ಹೇಳಿದರು.
'ನಾವು ಪ್ರತಿಭಟನಾಕಾರರ ವಿರುದ್ಧ ಪೊಲೀಸ್ ಕ್ರಮದ ಬಗ್ಗೆ ಗಮನಹರಿಸಿದ್ದೇವೆ. ಅದಕ್ಕೆ ಸಂಬಂಧಿಸಿದ ಎಲ್ಲಾ ವಿಷಯಗಳ ತನಿಖೆಗೆ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಎಡಿಜಿಪಿ) ಮಟ್ಟದ ಅಧಿಕಾರಿಯನ್ನು ಕಳುಹಿಸಲು ನಿರ್ಧರಿಸಿದ್ದೇವೆ' ಎಂದು ಹೇಳಿದ್ದಾರೆ.
-
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು












Click it and Unblock the Notifications