ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

'ಇಂದು ಮಲ್ಹೋತ್ರ' ಸುಪ್ರೀಂ ಕೋರ್ಟ್ ಜಡ್ಜ್, ನ್ಯಾಯಾಂಗದಲ್ಲಿ ಹೊಸ ಇತಿಹಾಸ

By Sachhidananda Acharya
|
Google Oneindia Kannada News

ನವದೆಹಲಿ, ಏಪ್ರಿಲ್ 26: ಹಿರಿಯ ವಕೀಲೆ ಇಂದು ಮಲ್ಹೋತ್ರರನ್ನು ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿಯಾಗಿ ನೇಮಕ ಮಾಡುವಂತೆ ಕೊಲಿಜಿಯಂ ಮಾಡಿದ್ದ ಶಿಫಾರಸ್ಸಿಗೆ ಕೇಂದ್ರ ಸರಕಾರ ಒಪ್ಪಿಗೆ ನೀಡಿದೆ.

ಈ ಮೂಲಕ ದೇಶದ ನ್ಯಾಯಾಂಗ ಇತಿಹಾಸದಲ್ಲಿ ನೇರವಾಗಿ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಯಾಗಿ ನೇಮಕವಾದ ಪ್ರಥಮ ಮಹಿಳಾ ವಕೀಲೆ ಎಂಬ ಹಿರಿಮೆಗೆ ಇಂದು ಮಲ್ಹೋತ್ರಾ ಪಾತ್ರವಾಗಿದ್ದಾರೆ.

ಇಂದು ಮಲ್ಹೋತ್ರಾ ಜೊತೆಗೆ ಉತ್ತರಾಖಂಡ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಕೆ.ಎಂ. ಜೋಸೆಫ್‌ ಅವರ ಹೆಸರನ್ನೂ ಶಿಫಾರಸ್ಸು ಮಾಡಲಾಗಿತ್ತು. ಆದರೆ ಇದಕ್ಕೆ ಸರಕಾರ ತಡೆ ಹಿಡಿದಿದೆ.

Indu Malhotra set to take oath as Supreme Court judge on Friday

ಜನವರಿ 22ರಂದು ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ದೀಪಕ್‌ ಮಿಶ್ರಾ ನೇತೃತ್ವದ ಕೊಲಿಜಿಯಂ ಮಲ್ಹೋತ್ರ ಮತ್ತು ಜೋಸೆಫ್ ಅವರ ಹೆಸರನ್ನು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿತ್ತು. ಇದನ್ನು ಪರಿಶೀಲನೆ ನಡೆಸಿದ್ದ ಕಾನೂನು ಸಚಿವಾಲಯ ಮಲ್ಹೋತ್ರ ಅವರ ನೇಮಕಕ್ಕೆ ಮಾತ್ರ ಅನುಮತಿ ನೀಡಿದೆ.

ಉತ್ತರಾಖಂಡ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಕೆ.ಎಂ. ಜೋಸೆಫ್‌ ಹೆಸರು ಶಿಫಾರಸು ಮಾಡುವಾಗ ಕೊಲಿಜಿಯಂ ಸೇವಾ ಹಿರಿತನ ಮತ್ತು ಪ್ರಾದೇಶಿಕ ಪ್ರಾತಿನಿಧ್ಯವನ್ನು ಕಡೆಗಣಿಸಿದೆ ಎಂಬ ಕಾರಣ ನೀಡಿ ಅವರ ನೇಮಕವನ್ನು ತಡೆ ಹಿಡಿದಿದೆ.

ಶುಕ್ರವಾರ ಪ್ರಮಾಣವಚನ

ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಯಾಗಿ ನೇಮಕವಾಗಿರುವ ಇಂದು ಮಲ್ಹೋತ್ರ ಇದೇ ಶುಕ್ರವಾರ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

English summary
The appointment of senior advocate, Indu Malhotra as Supreme Court judge has been cleared by the Centre. Indu Malhotra becomes the first woman to be appointed as judge of Supreme Court directly from the bar.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X