ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ರೇಪ್, ವಿಡಿಯೋ ಮಾಡಿದ ದುರುಳರು

Subscribe to Oneindia Kannada

ಪುಣೆ, ಡಿಸೆಂಬರ್, 29: ಪುಣೆಯ ಇನ್ಫೋಸಿಸ್ ಕ್ಯಾಂಪಸ್ ನಲ್ಲಿ ಅತ್ಯಾಚಾರ ನಡೆದಿದೆ. ಕ್ಯಾಂಪಸ್ ಕ್ಯಾಂಟಿನ್ ನಲ್ಲಿ ಮಹಿಳಾ ಉದ್ಯೋಗಿ ಮೇಲೆ ಹೌಸ್ ಕೀಪಿಂಗ್ ಸಿಬ್ಬಂದಿ ಭಾನುವಾರ ರಾತ್ರಿ ಅತ್ಯಾಚಾರ ನಡೆಸಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ವಿಕೃತ ಮನಸ್ಸಿನ ಯುವಕರು ಅತ್ಯಾಚಾರವನ್ನು ಮೊಬೈಲ್ ನಲ್ಲಿ ಚಿತ್ರೀಕರಣ ಮಾಡಿಕೊಂಡಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.[ಅತ್ಯಾಚಾರದ ವಿಡಿಯೋ ಮಾಡಿದ ಪಕ್ಕದ್ಮನೆ ಪುಂಗವ]

rape

ಪುಣೆ ಇನ್ಫೋಸಿಸ್ ನಲ್ಲಿ ಯುವತಿ ಕ್ಯಾಶೀಯರ್ ಆಗಿ ಕೆಲಸ ನಿರ್ವಹಿಸುತ್ತಿದ್ದರು ಎಂದು ವಿವರಿಸಿದೆ. ಘಟನೆ ಸಂಬಂಧ ಇಬ್ಬರನ್ನು ಬಂಧಿಸಲಾಗಿದೆ ಎಂದು ಹೇಳಿದೆ. ಅಲ್ಲದೇ ಸಂಸ್ಥೆಯ ಮಹಿಳಾ ಉದ್ಯೋಗಿಗಳ ಗುಂಪೊಂದು ಸಂಸ್ಥೆಯಲ್ಲಿ ಲೈಂಗಿಕ ದೌರ್ಜನ್ಯದಂಥ ಪ್ರಕರಣಗಳು ನಿರಂತರವಾಗಿ ನಡೆಯುತ್ತಿದೆ ಎಂದು ಇಮೇಲ್ ಮೂಲಕ ದೂರು ದಾಖಲು ಮಾಡಿದೆ. [ರೇಪ್ ಮಾಡಿ ವಾಟ್ಸಪ್ ನಲ್ಲಿ ವಿಡಿಯೋ ಹರಿಬಿಟ್ಟ ಬಾಲಕರು]

ಕಳೆದ ತಿಂಗಳ ಅಂತ್ಯದಲ್ಲೂ ಇನ್ಫೋಸಿಸ್ ಸಂಸ್ಥೆಯ ಮಹಿಳಾ ಉದ್ಯೋಗಿಯೊಬ್ಬರು ಲೈಂಗಿಕ ದೌರ್ಜನ್ಯದ ದೂರು ನೀಡಿದ್ದರು. ಪುಣೆ ಪ್ರಕರಣದ ಬಗ್ಗೆ ಹೇಳಿಕೆ ನೀಡಿರುವ ಇನ್ಫೋಸಿಸ್ ನಾವು ಪೊಲೀಸರಿಗೆ ಎಲ್ಲ ಬಗೆಯ ಸಹಕಾರ ನೀಡುತ್ತೇವೆ. ಭದ್ರತೆಯಲ್ಲಿ ಎಲ್ಲಿ ಲೋಪವಾಗಿದೆ ಎಂಬುದನ್ನು ಮನಗಂಡು ಮುಂದಿನ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ತಿಳಿಸಿದೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
In a shocking incident, a woman was allegedly raped in the campus of Infosys Pune, reported news agency ANI. As per reports, the woman cashier working at a canteen in Infosys Pune was allegedly raped by two persons inside the canteen, police said.
Please Wait while comments are loading...