ಕಾವೇರಿಗಾಗಿ ಅತ್ತ ತಮಿಳುನಾಡು ರೈತರಿಂದಲೂ ವಿನೂತನ ಪ್ರತಿಭಟನೆ

ಬೆಂಗಳೂರು, ಸೆಪ್ಟೆಂಬರ್‌ 25: ತಮಿಳುನಾಡಿಗೆ ಕಾವೇರಿ ನೀರು ಬಿಡುವ ಆದೇಶ ಖಂಡಿಸಿ ಇತ್ತ ರಾಜ್ಯ ಹೊತ್ತಿ ಉರಿಯುತ್ತಿದ್ದರೆ, ಅತ್ತ ತಮಿಳುನಾಡಿನ ರೈತರೂ ಕೂಟ ಕಾವೇರಿ ನೀರಿಗಾಗಿ ಆಗ್ರಹಿಸಿ ವಿನೂತನವಾಗಿ ಪ್ರತಿಭಟನೆ ನಡೆಸಿದ್ದಾರೆ.

ಸೋಮವಾರ ತಮಿಳುನಾಡಿನ ತಿರುಚ್ಚಿಯಲ್ಲಿ ಅಯ್ಯಕಣ್ಣು ನೇತೃತ್ವದಲ್ಲಿ ರಾಷ್ಟ್ರೀಯ ದಕ್ಷಿಣ ಭಾರತ ನದಿ ಜೋಡಣೆ ರೈತರ ಸಂಘವು ಮಾನವ ಅಸ್ಥಿಪಂಜರದ ಭಾಗಗಳನ್ನು ಹಿಡಿದು ಕಾವೇರಿ ನೀರು ಹಂಚಿಕೆಗೆ ಒತ್ತಾಯಿಸಿ ಪ್ರತಿಭಟನೆ ನಡೆಸಿತು.

Innovative protest by Tamil Nadu farmers for Cauvery

ತಮಿಳುನಾಡಿನಲ್ಲಿ ಬೆಳೆದು ನಿಂತಿರುವ ಕುರುವೈ ಬೆಳೆ ಉಳಿಸಲು ಕಾವೇರಿ ನೀರು ಹಂಚಿಕೆಗೆ ಪ್ರತಿಭಟನಾಕಾರರು ಒತ್ತಾಯಿಸಿದರು. ಕರ್ನಾಟಕದಿಂದ ತಮಿಳುನಾಡಿಗೆ ನೀರು ಬಿಡುವಂತೆ ಮತ್ತು ರಾಜ್ಯ ರೈತರನ್ನು ಉಳಿಸುವಂತೆ ಒತ್ತಾಯಿಸಿ ಪ್ರತಿಭಟನಾಕಾರರು ಘೋಷಣೆಗಳನ್ನು ಎತ್ತುತ್ತಿರುವ ದೃಶ್ಯಗಳು ತಿರುಚ್ಚಿಯಿಂದ ಕಂಡುಬಂದಿವೆ.

ಭಾನುವಾರ ತಿರುಚ್ಚಿಯಲ್ಲಿ ರೈತರ ಗುಂಪು ಕರ್ನಾಟಕದೊಂದಿಗೆ ನಡೆಯುತ್ತಿರುವ ವಿವಾದಕ್ಕೆ ಸಂಬಂಧಿಸಿದಂತೆ ಕಾವೇರಿ ನದಿ ನೀರಿನಲ್ಲಿ ನಿಂತು ಪ್ರತಿಭಟನೆ ನಡೆಸಿತ್ತು. ರಾಜ್ಯದ ಕೆಲವು ಭಾಗಗಳಲ್ಲಿ ಭೀಕರ ಬರಗಾಲವನ್ನು ಉಲ್ಲೇಖಿಸಿ ಕಾವೇರಿ ನೀರು ಹಂಚಿಕೆಗೆ ಕರ್ನಾಟಕ ತನ್ನ ನಿಲುವನ್ನು ಗಟ್ಟಿಗೊಳಿಸಿದ ನಂತರ ಎರಡೂ ರಾಜ್ಯಗಳಲ್ಲಿ ಪ್ರತಿಭಟನೆಗಳು ನಡೆಯುತ್ತಿವೆ.

ನಂತರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ಕರ್ನಾಟಕ ಸರ್ಕಾರಕ್ಕೆ 5,000 ಕ್ಯೂಸೆಕ್ ಕಾವೇರಿ ನದಿ ನೀರನ್ನು ನೆರೆಯ ತಮಿಳುನಾಡಿಗೆ ಬಿಡುವಂತೆ ಆದೇಶಿಸಿತ್ತು. ಆದಾಗ್ಯೂ, ಕಾವೇರಿ ನೀರಿನ ಪ್ರಸ್ತುತ ಪಾಲನ್ನು ದಿನಕ್ಕೆ 5,000 ರಿಂದ 7,200 ಕ್ಯೂಸೆಕ್‌ಗೆ ಹೆಚ್ಚಿಸಲು ತಮಿಳುನಾಡು ಸರ್ಕಾರ ಸಲ್ಲಿಸಿದ ಅರ್ಜಿಯನ್ನು ಪರಿಗಣಿಸಲು ನ್ಯಾಯಾಲಯ ನಿರಾಕರಿಸಿತು.

ಇತ್ತ ಬೆಂಗಳೂರಿನಲ್ಲಿ ಕನ್ನಡ ಪರ ಸಂಘಟನೆಗಳು ಸೆಪ್ಟೆಂಬರ್ 26 ರಂದು ಬೆಂಗಳೂರು ಬಂದ್‌ಗೆ ಕರೆ ನೀಡಿವೆ. ಸುಪ್ರೀಂ ಕೋರ್ಟ್ ಆದೇಶವನ್ನು ವಿರೋಧಿಸಿ ಮಂಡ್ಯ ನಗರ ಶನಿವಾರ ಸಂಪೂರ್ಣ ಬಂದ್ ಆಚರಿಸಿದ ನಂತರ ಈಗ ಬೆಂಗಳೂರು ಹಾಗೂ ಕರ್ನಾಟಕ ಬಂದ್‌ಗೆ ಕರೆ ನಿಡಲಾಗಿದೆ. ಈ ಸಂಬಂಧ ರೈತರಿಗೆ ಪ್ರತಿಭಟಿಸುವ ಹಕ್ಕಿದೆ, ಆದರೆ ರಾಜಕೀಯ ಪಕ್ಷಗಳು ಜನರ ಆಕ್ರೋಶಕ್ಕೆ ಗುರಿಯಾಗುತ್ತಿವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಪ್ರಜಾಪ್ರಭುತ್ವದಲ್ಲಿ ಎಲ್ಲರಿಗೂ ಪ್ರತಿಭಟಿಸುವ ಹಕ್ಕಿದ್ದು, ನಾವು ಈ ಪ್ರತಿಭಟನೆಯನ್ನು ಹತ್ತಿಕ್ಕಲು ಹೋಗುವುದಿಲ್ಲ. ಆದರೆ ಈ ವಿಷಯದಲ್ಲಿ ಬಿಜೆಪಿ ಹಾಗೂ ಜೆಡಿಎಸ್‌ ರಾಜಕೀಯ ಮಾಡುತ್ತಿವೆ. ಕಾವೇರಿ ವಿಚಾರವಾಗಿ ನಾಳೆ ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆ ಇದೆ. ನಮ್ಮ ವಕೀಲರು ಸಮರ್ಥ ವಾದ ಮಂಡಿಸಲಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿದರು.

ಸುಪ್ರೀಂ ಕೋರ್ಟ್ ಆದೇಶವಿದೆ. ಸುಪ್ರೀಂ ಕೋರ್ಟ್‌ನಲ್ಲಿ ನಮ್ಮ ಅರ್ಜಿ ವಜಾಗೊಂಡಿದೆ, ನಾವು ನೀರು ಬಿಡಲು ಸಾಧ್ಯವಿಲ್ಲ ಎಂದು ವಾದಿಸಿದ್ದೇವೆ. ಕಾವೇರಿ ಪ್ರಾಧಿಕಾರದ ಆದೇಶ ಪ್ರಶ್ನಿಸಿ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದೆವು. ನಮ್ಮ ಅರ್ಜಿ ಹಾಗೂ ತಮಿಳುನಾಡಿನ ಅರ್ಜಿ ಎರಡನ್ನೂ ನ್ಯಾಯಾಲಯ ತಿರಸ್ಕರಿಸಿದೆ ಎಂದು ಹೇಳಿದರು.

ಕರ್ನಾಟಕದಿಂದ ಕಾವೇರಿ ನದಿ ನೀರು ಬಿಡುಗಡೆಗೆ ತಮಿಳುನಾಡು ಹೊಸ ನಿರ್ದೇಶನಗಳನ್ನು ಕೋರಿದೆ, ನೆರೆಯ ರಾಜ್ಯವು ತನ್ನ ನಿಲುವನ್ನು ಬದಲಾಯಿಸಿದೆ ಎಂದು ಹೇಳಿಕೊಂಡಿದೆ ಮತ್ತು ಮೊದಲು ಒಪ್ಪಿಕೊಂಡಿದ್ದಕ್ಕಿಂತ ಕಡಿಮೆ ಪ್ರಮಾಣದ ನೀರನ್ನು ಬಿಡುಗಡೆ ಮಾಡಿದೆ.

ತಮಿಳುನಾಡು ಸಂಕಷ್ಟದಲ್ಲಿರುವಾಗಲೇ ಕಾವೇರಿಯಲ್ಲಿ ನೀರಿನ ಕೊರತೆ ಇದೆ ಎಂಬುದು ಕರ್ನಾಟಕದ ವಾದವಾಗಿದ್ದರೂ, ರೈತರು ಸಂಪೂರ್ಣವಾಗಿ ಕೃಷಿಯನ್ನೇ ಅವಲಂಬಿಸಿದ್ದಾರೆ. ತಮಿಳುನಾಡು ಸರ್ಕಾರ ಕಾನೂನು ಪ್ರಕ್ರಿಯೆಯ ಮೂಲಕ ಮತ್ತು ಸಾಧ್ಯವಿರುವ ಎಲ್ಲ ರೀತಿಯಲ್ಲಿ ಪ್ರಯತ್ನಿಸುತ್ತಿದೆ. ಕೇಂದ್ರ ಸರ್ಕಾರ ಮತ್ತು ಜಲಶಕ್ತಿ ಸಚಿವರ ಬೆಂಬಲ ಹಾಗೂ ಈ ಸಮಸ್ಯೆಯನ್ನು ಸೌಹಾರ್ದಯುತವಾಗಿ ಬಗೆಹರಿಸಲು ಸಾಧ್ಯವಿರುವ ಎಲ್ಲ ಮೂಲಗಳ ಮೂಲಕ ಸಮನ್ವಯ ಸಾಧಿಸುವುದಾಗಿ ಡಿಎಂಕೆ ಸಂಸದ ತಿರುಚಿ ಶಿವ ಹೇಳಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+