ನಕ್ಸಲರ ನಡುವಿನ ಗುಂಡಿನ ಚಕಮಕಿಯಲ್ಲಿ 2 ಯೋಧರ ಸಾವು

By: ಶಂಭು, ಹುಬ್ಬಳ್ಳಿ
Subscribe to Oneindia Kannada

ನವದೆಹಲಿ,ಮಾರ್ಚ್,12: ಬಿಎಸ್ಎಫ್ ಯೋಧರು ಹಾಗೂ ನಕ್ಸಲರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಯೋಧರು ಮರಣವನ್ನಪ್ಪಿದ್ದು, ನಾಲ್ವರು ಯೋಧರು ಗಾಯಗೊಂಡಿರುವ ಘಟನೆ ಛತ್ತೀಸ್ ಗಡದ ಕಾಂಕರ್ ಅರಣ್ಯ ಪ್ರದೇಶದಲ್ಲಿ ನಡೆದಿದೆ.

ಕಾಂಕರ್ ಅರಣ್ಯಪ್ರದೇಶದಲ್ಲಿ ನಕ್ಸಲರು ಬೀಡು ಬಿಟ್ಟಿರುವ ಖಚಿತ ಮಾಹಿತಿ ಆಧರಿಸಿ ಬಿಎಸ್ಎಫ್ ಯೋಧರು ಕಾರ್ಯಾಚರಣೆ ನಡೆಸಿದ್ದರು. ಆ ವೇಳೆ ಗಾಯಗೊಂಡ 6 ಯೋಧರನ್ನು ಹೆಲಿಕಾಪ್ಟರ್ ಮೂಲಕ ರಾಯ್ಪುರದ ಆಸ್ಪತ್ರೆಗೆ ರವಾನಿಸುವ ವೇಳೆ ಇಬ್ಬರು ಯೋಧರು ಕೊನೆಯುಸಿರೆಳೆದಿದ್ದಾರೆ.[ಹನುಮಂತಪ್ಪನನ್ನು ಬದುಕಿಸಿದ್ದು ಅಸಾಧ್ಯ ಮನೋಬಲ ಛಲ]

Inshort news of New delhi, Bengaluru


ಟಿಪ್ಪು ಸುಲ್ತಾನ್ ಬಗ್ಗೆ ಕೋಮುವಾದಿಗಳು ವ್ಯವಸ್ಥಿತ ಅಪಪ್ರಚಾರ

ಬೆಂಗಳೂರು,ಮಾರ್ಚ್,12: ಮಹಾನ್ ದೇಶ ಭಕ್ತ ಟಿಪ್ಪು ಸುಲ್ತಾನ್ ಬಗ್ಗೆ ಕೋಮುವಾದಿಗಳು ವ್ಯವಸ್ಥಿತವಾಗಿ ಅಪಪ್ರಚಾರ ಮಾಡುತ್ತಿದ್ದು, ಇದನ್ನು ನಿಲ್ಲಿಸಬೇಕೆಂದು ಹಜ್ರತ್ ಟಿಪ್ಪು ಸುಲ್ತಾನ್ ಸಂಯುಕ್ತ ರಂಗದ ರಾಜ್ಯಾದ್ಯಕ್ಷ ಸರ್ದಾರ್ ಅಹಮದ್ ಖುರೇಷಿ ಒತ್ತಾಯಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಖುರೇಷಿ ಅವರು, 'ಬಿಜೆಪಿ ಸರಕಾರ ಪ್ರತಿ ಹೆಜ್ಜೆಯಲ್ಲೂ ಅಲ್ಪಸಂಖ್ಯಾತರ ಮೇಲೆ ಇಲ್ಲಸಲ್ಲದ ಆರೋಪಗಳನ್ನು ಹೊರೆಸುತ್ತಿದೆ. ಸ್ವಾತಂತ್ರ್ಯ ಸಂಗ್ರಾಮದಲ್ಲಿ ಬ್ರಿಟಿಷರ ವಿರುದ್ಧ ಹೋರಾಡದ ಸಂಘಪರಿವಾರದವರಿಂದ ಅಲ್ಪಸಂಖ್ಯಾತರು, ಈ ದೇಶದ ಬಡವರು, ಕೂಲಿ ಕಾರ್ಮಿಕರು, ಶ್ರಮಜೀವಿಗಳು ಪಾಠ ಕಲಿಯಬೇಕಿಲ್ಲ' ಎಂದರು.[ಕೊಡವರು ಟಿಪ್ಪುವನ್ನು ವಿರೋಧಿಸುವುದೇಕೆ?]

ಸರಕಾರ ನ.10ರಂದು ಟಿಪ್ಪು ಜಯಂತಿ ಆಚರಿಸಿ ನುಡಿದಂತೆ ನಡೆದುಕೊಂಡಿದೆ. ಸರಕಾರ ಟಿಪ್ಪು ಭವನಗಳನ್ನು ಎಲ್ಲ ಜಿಲ್ಲೆಗಳಲ್ಲೂ ನಿರ್ಮಿಸಬೇಕು ಎಂದು ಆಗ್ರಹಿಸಿದರು. ಈ ಸಂದರ್ಭದಲ್ಲಿ ಅಹಿಂದ ರಾಜ್ಯಾಧ್ಯಕ್ಷ ಎನ್.ವಿ.ನರಸಿಂಹಯ್ಯ, ರಾಜ್ಯ ರೈತ ಸಂಘದ ಉಪಾಧ್ಯಕ್ಷ ವೀರಸಂಗಯ್ಯ, ಜನಾಬ್ ದಾವುದ್ ಇಕ್ಬಾಲ್, ಜೆಡಿಯು ಪ್ರಧಾನ ಕಾರ್ಯದರ್ಶಿ ಸಿ.ಕೆ.ರವಿಚಂದ್ರ ಮತ್ತಿತರರು ಉಪಸ್ಥಿತರಿದ್ದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
Inshort news of New delhi, Bengaluru. Two BSF (Border Security Force) soldiers passed away in Kankar Forest, Chattisgarh
Please Wait while comments are loading...