ಮೋದಿ ಪದವಿ ಪ್ರಮಾಣ ಪತ್ರ ವಿವರ ನೀಡಿಕೆಗೆ ದೆಹಲಿ ಹೈಕೋರ್ಟ್ ತಡೆಯಾಜ್ಞೆ

Posted By:
Subscribe to Oneindia Kannada

ನವದೆಹಲಿ, ಜನವರಿ 23: ಪ್ರಧಾನಿ ನರೇಂದ್ರ ಮೋದಿಯವರು ದೆಹಲಿ ವಿಶ್ವವಿದ್ಯಾಲಯದಿಂದ ಪದವಿ ಪಡೆದಿದ್ದಾರೆನ್ನಲಾದ 1978ರ ವರ್ಷದ ಎಲ್ಲಾ ಪದವಿಧರರ ವಿವರಗಳನ್ನು ನೀಡಬೇಕೆಂದು ಕೇಂದ್ರ ಮಾಹಿತಿ ಆಯೋಗವು (ಸಿಐಸಿ) ದೆಹಲಿ ವಿಶ್ವವಿದ್ಯಾಲಯಕ್ಕೆ ನೀಡಿದ್ದ ನಿರ್ದೇಶನಕ್ಕೆ ದೆಹಲಿ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.

ಮಾಹಿತಿ ಹಕ್ಕು ಕಾರ್ಯಕರ್ತ ನೀರಜ್ ಎಂಬುವರು 1978ರಲ್ಲಿ ದೆಹಲಿ ವಿಶ್ವವಿದ್ಯಾಲಯದಿಂದ ಕಲಾ ವಿಭಾಗದಲ್ಲಿ ಪದವಿ ಪಡೆದ ಎಲ್ಲಾ ವಿದ್ಯಾರ್ಥಿಗಳ ವಿವರ ಸಲ್ಲಿಸುವಂತೆ ಕಳೆದ ವರ್ಷ ದೆಹಲಿ ವಿಶ್ವವಿದ್ಯಾಲಕ್ಕೆ ಮನವಿ ಸಲ್ಲಿಸಿದ್ದರು. ಆದರೆ, ದೆಹಲಿ ವಿಶ್ವವಿದ್ಯಾಲಯ ಈ ಮನವಿಯನ್ನು ನಿರಾಕರಿಸಿತ್ತು.

Inspection of DU records, including PM Modi’s degree, stayed by Delhi HC

ಹಾಗಾಗಿ, ಅವರು ಕೇಂದ್ರ ಮಾಹಿತಿ ಆಯೋಗಕ್ಕೆ ಅರ್ಜಿ ಸಲ್ಲಿಸಿದ್ದರು. ಈ ಹಿನ್ನೆಲೆಯಲ್ಲಿ ಮಾಹಿತಿ ಆಯೋಗವು ದೆಹಲಿ ವಿಶ್ವವಿದ್ಯಾಲಕ್ಕೆ ನಿರ್ದೇಶನ ನೀಡಿ 1978ರಲ್ಲಿ ಕಲಾ ವಿಭಾಗದಲ್ಲಿ ಪದವಿ ಪಡೆದ ಎಲ್ಲಾ ವಿದ್ಯಾರ್ಥಿಗಳ ವಿವರ ನೀಡುವಂತೆ ಸೂಚಿಸಿತ್ತು.

ಸಿಐಸಿಯು ನೀಡಿದ್ದ ಸೂಚನೆಯನ್ನು ದೆಹಲಿ ವಿವಿಯು ಹೈಕೋರ್ಟ್ ನಲ್ಲಿ ಪ್ರಶ್ನೆ ಮಾಡಿತ್ತು. ಇದರ ವಿಚಾರಣೆ ನಡೆಸಿರುವ ಹೈಕೋರ್ಟ್ ಸಿಐಸಿ ಸೂಚನೆಗೆ ತಡೆಯಾಜ್ಞೆ ನೀಡಿದೆಯಲ್ಲದೆ, ಮಾಹಿತಿ ಹಕ್ಕು ಕಾರ್ಯಕರ್ತ ನೀರಜ್ ಅವರಿಗೂ ಈ ಬಗ್ಗೆ ವಿವರಣೆ ನೀಡುವಂತೆ ನೋಟಿಸ್ ಜಾರಿಗೊಳಿಸಿದೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ - ನೋಂದಣಿ ಉಚಿತ!

English summary
A Central Information Commission order directing Delhi University to allow the inspection of records of all students who had passed BA examination in 1978, the year when Prime Minister Narendra Modi had also cleared it
Please Wait while comments are loading...