ರಾಜ್ಯಸಭೆ ಅಂಗಳದಲ್ಲಿ ತ್ರಿವಳಿ ತಲಾಖ್ ಮಸೂದೆ, ಗುರುವಾರ ಚರ್ಚೆ

Posted By:
Subscribe to Oneindia Kannada

ನವದೆಹಲಿ, ಜನವರಿ 02: ವಿವಾದಿತ ತ್ರಿವಳಿ ತಲಾಖ್ ಮಸೂದೆ ಲೋಕಸಭೆಯಲ್ಲಿ ಅಂಗೀಕಾರವಾಗಿ ರಾಜ್ಯಸಭೆ ಅಂಗಳ ತಲುಪಿದೆ.

ತ್ರಿವಳಿ ತಲಾಖ್ ಮಸೂದೆ ಲೋಕಸಭೆಯಲ್ಲಿ ಅಂಗೀಕಾರ

ನಾಳೆ ಅಂದರೆ ಗುರುವಾರ ರಾಜ್ಯಸಭೆಯಲ್ಲೂ ತ್ರಿವಳಿ ತಲಾಖ್ ಮಸೂದೆ ಅಂಗೀಕಾರವಾಗುವ ಎಲ್ಲಾ ಸಾಧ್ಯತೆಗಳಿವೆ. ರಾಜ್ಯಸಭೆಯಲ್ಲಿ ಒಪ್ಪುವುದು ಅಷ್ಟು ಸುಲಭವಿಲ್ಲ. ಇದರಿಂದ ಪ್ರಧಾನಿ ನರೇಂದ್ರ ಮೋದಿ ಅವರು ಎಲ್ಲ ಪಕ್ಷಗಳೊಂದಿಗೆ ಈ ಬಗ್ಗೆ ಮಾತುಕತೆ ನಡೆಸಿದ್ದು, ಎಲ್ಲರು ಒಮ್ಮತದಿಂದ ತ್ರಿವಳಿ ತಲಾಖ್ ಮಸೂದೆಯನ್ನು ರಾಜ್ಯಸಭೆಯಲ್ಲಿ ಒಪ್ಪುತ್ತಾರೆ ಎನ್ನುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Instant triple talaq bill in Rajya Sabha, all eyes now on Congress

ಡಿಸೆಂಬರ್ 28ರಂದು ಲೋಕಸಭೆಯಲ್ಲಿ ತ್ರಿವಳಿ ತಲಾಖ್ ಮಸೂದೆ ಅಂಗೀಕಾರವಾಗಿತ್ತು. ತ್ರಿವಳಿ ತಲಾಖ್ ಮಸೂದೆ ಬಗ್ಗೆ ಕೂಲಂಕುಶವಾಗಿ ಪರಿಶೀಲಿಸಲು ಹಾಗೂ ಈ ಬಗ್ಗೆ ಚರ್ಚಿಸಲು ರಾಜ್ಯಸಭೆಯ ಸಂಸದೀಯ ಸಮಿತಿಗೆ ಮಸೂದೆಯನ್ನು ಪಾಸು ಮಾಡಬೇಕೆಂದು ವಿರೋಧ ಪಕ್ಷಗಳು ಒತ್ತಾಯಿಸುತ್ತಿವೆ.

ಈ ಹಿನ್ನೆಯಲ್ಲಿ ತೀವ್ರ ಕುತೂಹಲ ಕೆರಳಿಸಿರುವ ಬಹು ನಿರೀಕ್ಷಿತ ತ್ರಿವಳಿ ತಲಾಖ್ ಮಸೂದೆ ಗುರುವಾರ ರಾಜ್ಯಸಭೆಯಲ್ಲಿ ಚರ್ಚೆ ನಡೆಯಲಿದೆ. ಒಂದು ವೇಳೆ ರಾಜ್ಯಸಭೆಯಲ್ಲಿ ತ್ರಿವಳಿ ತಲಾಖ್ ಅಂಗೀಕಾರವಾದರೆ ಮುಸ್ಲಿಂ ಸಮಿತಿಯು ಸುಪ್ರೀಂ ಕೋರ್ಟ್ ಮೊರೆ ಹೋಗುವುದಾಗಿ ತಿಳಿಸಿದೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Triple Talaq Bill to be tabled in the Rajya Sabha tomorrow. Sources suggest that government is open to amendments in the bill.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ