• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಫೆ.28ರವರೆಗೂ ಅಂತಾರಾಷ್ಟ್ರೀಯ ಪ್ರಯಾಣಿಕರ ವಿಮಾನ ಸಂಚಾರಕ್ಕೆ ನಿರ್ಬಂಧ

|

ನವದೆಹಲಿ, ಜನವರಿ.28: ಸಾಂಕ್ರಾಮಿಕ ಪಿಡುಗು ಕೊರೊನಾವೈರಸ್ ನಿಯಂತ್ರಿಸುವ ಉದ್ದೇಶದಿಂದ ಅಂತಾರಾಷ್ಟ್ರೀಯ ವಿಮಾನಗಳ ಸಂಚಾರದ ಮೇಲಿನ ನಿರ್ಬಂಧವನ್ನು ಫೆಬ್ರವರಿ.28ರವರೆಗೂ ವಿಸ್ತರಿಸಲಾಗಿದೆ ಎಂದು ಭಾರತೀಯ ವಿಮಾನಯಾನ ಸಚಿವಾಲಯ ತಿಳಿಸಿದೆ.

ಇದರ ನಡುವೆಯೂ ತುರ್ತು ಸಂದರ್ಭಗಳಲ್ಲಿ ಬಬಲ್ ವ್ಯವಸ್ಥೆ ಅಡಿಯಲ್ಲಿ ವಿದೇಶಕ್ಕೆ ಪ್ರಯಾಣಿಸುವುದಕ್ಕೆ ಅವಕಾಶ ನೀಡಲಾಗುತ್ತಿದೆ. ಅಂತಾರಾಷ್ಟ್ರೀಯ ಆಲ್-ಕಾರ್ಗೋ ಕಾರ್ಯಾಚರಣೆ ಮತ್ತು ಡಿಜಿಸಿಎ ನಿರ್ದಿಷ್ಟವಾಗಿ ಅನುಮೋದಿಸಿದ ವಿಮಾನಗಳಿಗೆ ಈ ನಿರ್ಬಂಧಗಳು ಅನ್ವಯಿಸುವುದಿಲ್ಲ ಎಂದು ಅಧಿಸೂಚನೆಯಲ್ಲಿ ಉಲ್ಲೇಖಿಸಲಾಗಿದೆ.

ಅರ್ಧ ಗಂಟೆಯಲ್ಲೇ 30 ಕೆಜಿ ಕಿತ್ತಳೆ ಹಣ್ಣು ತಿಂದ ಯುವಕರು! ಅರ್ಧ ಗಂಟೆಯಲ್ಲೇ 30 ಕೆಜಿ ಕಿತ್ತಳೆ ಹಣ್ಣು ತಿಂದ ಯುವಕರು!

ಕೊರೊನಾವೈರಸ್ ಸೋಂಕಿನ ಹರಡುವಿಕೆ ಪ್ರಮಾಣ ಹೆಚ್ಚಾದ ಹಿನ್ನೆಲೆ ಮೊದಲ ಬಾರಿಗೆ 2020ರ ಮಾರ್ಚ್ ತಿಂಗಳಿನಲ್ಲಿ ಭಾರತೀಯ ಕೇಂದ್ರ ವಿಮಾನಯಾನ ಸಚಿವಾಲಯವು ಅಂತಾರಾಷ್ಟ್ರೀಯ ವಿಮಾನಗಳ ಸಂಚಾರವನ್ನು ನಿರ್ಬಂಧಿಸಿತ್ತು.


ಇಂಗ್ಲೆಂಡ್ ದೇಶಕ್ಕೆ ವಿಮಾನ ಸಂಚಾರ ನಿರ್ಬಂಧ:

ಬುಧವಾರವಷ್ಟೇ ಇಂಗ್ಲೆಂಡ್ ನಿಂದ ಭಾರತಕ್ಕೆ ಆಗಮಿಸುವ ಅಂತಾರಾಷ್ಟ್ರೀಯ ವಿಮಾನಗಳ ಸಂಚಾರಕ್ಕೆ ವಿಧಿಸಿದ್ದ ನಿರ್ಬಂಧವನ್ನು ಫೆಬ್ರವರಿ.14ರವರೆಗೂ ವಿಸ್ತರಿಸಿ ಆದೇಶಿಸಲಾಗಿತ್ತು. ಬ್ರಿಟಿಷ್ ವಿಮಾನಯಾನ, ವರ್ಜಿನ್ ಅಟ್ಲಾಂಟಿಕಾ ವಿಮಾನಯಾನ ಮತ್ತು ಭಾರತದ ಸಹಕಾರಿ ವಿಮಾನಯಾನ ಸಚಿವಾಲಯವು ಈ ಬಗ್ಗೆ ಅಧಿಕೃತ ಪ್ರಕಟಣೆ ಹೊರಡಿಸಿತ್ತು.

ಉಭಯ ರಾಷ್ಟ್ರಗಳ ನಡುವೆ ವಾರದಲ್ಲಿ 30 ವಿಮಾನಗಳ ಸಂಚಾರಕ್ಕೆ ಅನುಮತಿ ನೀಡಲಾಗಿದೆ. ಈ ಪೈಕಿ 15 ವಿಮಾನಗಳು ಭಾರತದಿಂದ ಇಂಗ್ಲೆಂಡ್ ಗೆ ತೆರಳಿದರೆ, 15 ವಿಮಾನಗಳು ಇಂಗ್ಲೆಂಡ್ ನಿಂದ ಭಾರತಕ್ಕೆ ಸಂಚರಿಸಲಿವೆ. ಪ್ರಸ್ತುತ ದೆಹಲಿ, ಮುಂಬೈ, ಹೈದ್ರಾಬಾದ್ ಮತ್ತು ಬೆಂಗಳೂರಿನಿಂದ ಮಾತ್ರ ಇಂಗ್ಲೆಂಡ್ ಗೆ ಅಂತಾರಾಷ್ಟ್ರೀಯ ವಿಮಾನಗಳು ಸಂಚರಿಸುವುದಕ್ಕೆ ಅವಕಾಶ ನೀಡಲಾಗಿದೆ.

English summary
Coronavirus Impact: International Scheduled Passenger Flights Ban Extended Till February 28.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X