ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ವಿಶ್ವ ಯೋಗ ದಿನ 2022: ಮಹತ್ವ ಮತ್ತು ಇತಿಹಾಸದ ಬಗ್ಗೆ ಮಾಹಿತಿ ಇಲ್ಲಿದೆ

|
Google Oneindia Kannada News

ಬಾಹ್ಯ ಸೌಂದರ್ಯ ಎಷ್ಟು ಮುಖ್ಯವೋ ಹಾಗೆಯೇ ಆಂತರಿಕ ಸೌದರ್ಯ ಕೂಡ ದೇಹಕ್ಕೆ ಮುಖ್ಯವಾಗಿರುತ್ತದೆ. ಪ್ರತಿ ನಿತ್ಯವೂ ಮನುಷ್ಯನ ಜೀವನದಲ್ಲಿ ವ್ಯಾಯಾಮ ಎನ್ನುವುದು ಪ್ರಮುಖ ಪಾತ್ರವನ್ನು ವಹಿಸುತ್ತದೆ.

ವರ್ಷದಲ್ಲಿ ಉತ್ತರ ಗೋಳಾರ್ಧದ ಅತಿ ಉದ್ದದ ಹಾಗೂ ದಕ್ಷಿಣ ಗೋಳಾರ್ಧದ ಅತಿ ಚಿಕ್ಕ ದಿನವನ್ನು ಅಂತರಾಷ್ಟ್ರೀಯ ಯೋಗ ದಿನಾಚರಣೆಗೆ ಆಯ್ಕೆ ಮಾಡಲಾಗಿದೆ. ಇದನ್ನು ಬೇಸಿಗೆ ಅಯನ ಸಂಕ್ರಾಂತಿ ದಿನವೆಂದು (ವರ್ಷದಲ್ಲಿನ ಅತ್ಯಂತ ಹೆಚ್ಚು ಹಗಲುಳ್ಳ ದಿನ) ಕರೆಯಲಾಗುತ್ತದೆ. ಯೋಗದ ದೃಷ್ಟಿಕೋನದಲ್ಲಿ ಇದು ಅತ್ಯಂತ ಹೆಚ್ಚು ಮಹತ್ವ ಪಡೆದಿದೆ. ಇದು ದಕ್ಷಿಣಯಾನಕ್ಕೆ ಪರಿವರ್ತನೆ ಎಂದು ಗುರುತಿಸಲಾಗುತ್ತದೆ.

ವಿಶ್ವ ಯೋಗದಿನದ ವಿಶೇಷ: ಸಹಜ ರಾಜಯೋಗದ ಮಹತ್ವವೇನು?ವಿಶ್ವ ಯೋಗದಿನದ ವಿಶೇಷ: ಸಹಜ ರಾಜಯೋಗದ ಮಹತ್ವವೇನು?

ದಕ್ಷಿಣಯಾನವನ್ನು ಆಧ್ಯಾತ್ಮಿಕ ಅಭ್ಯಾಸಗಳಿಗೆ ನೈಸರ್ಗಿಕ ಬೆಂಬಲವೆಂದು ಪರಿಗಣಿಸಲಾಗುತ್ತದೆ. ಹಾಗಾಗಿ ಈ ಪರಿವರ್ತನೆಯು ಯೋಗ ಅಭ್ಯಾಸಿಗರಿಗೆ ಬೆಂಬಲಿಸಲಾಗುತ್ತದೆ ಎಂಬ ನಂಬಿಕೆಯಿದೆ. ಬೇಸಿಗೆ ಅಯನ ಸಂಕ್ರಾಂತಿಯ ಬಳಿಕ ಮೊದಲ ಹುಣ್ಣಿಮೆಯನ್ನು ಗುರು ಪೂರ್ಣಿಮಾ ಎಂದು ಕರೆಯಲಾಗುತ್ತದೆ.

International Yoga Day 2021 Date, History, Theme And Significance In kannada

ಯೋಗ ಭಾರತದ ಪ್ರಾಚೀನ ಸಂಪ್ರದಾಯದ ಅಮೂಲ್ಯ ಕೊಡುಗೆಯಾಗಿದೆ. ಯೋಗವು ಮನಸ್ಸು ಮತ್ತು ದೇಹ; ಚಿಂತನೆ ಮತ್ತು ಕ್ರಿಯೆ; ಸಂಯಮ ಮತ್ತು ಸಾರ್ಥಕತೆಯನ್ನು ಒಗ್ಗೂಡಿಸುತ್ತದೆ. ಹಾಗೆಯೇ ಪ್ರಕೃತಿ ಮತ್ತು ಮನುಷ್ಯ ನಡುವೆ ಸಾಮರಸ್ಯವನ್ನುಂಟು ಮಾಡುತ್ತದೆ. ಯೋಗವು ಆರೋಗ್ಯ ಮತ್ತು ಯೋಗಕ್ಷೇಮದ ಸಮಗ್ರ ವಿಧಾನವಾಗಿದೆ.

ಯೋಗ ವ್ಯಾಯಾಮ ಮಾತ್ರವಲ್ಲದೆ ನಿಮ್ಮೊಂದಿಗೆ, ವಿಶ್ವ ಹಾಗೂ ಪ್ರಕೃತಿಯ ಜೊತೆಗೆ ಏಕತೆಯ ಅರ್ಥವನ್ನು ಕಂಡುಹಿಡಿಯಲು ನೆರವಾಗುತ್ತದೆ. ನಮ್ಮ ಜೀವನಶೈಲಿ ಹಾಗೂ ಪ್ರಜ್ಞೆ ರಚಿಸುವ ಮೂಲಕ ಹಮಾಮಾನ ಬದಲಾವಣೆ ನಿಭಾಯಿಸಲು ಮತ್ತು ಯೋಗಕ್ಷೇಮವನ್ನು ಸುಧಾರಿಸಲು ಸಹಾಯ ಮಾಡುತ್ತದೆ. ಈ ನಿಟ್ಟಿನಲ್ಲಿ ಅಂತರಾಷ್ಟ್ರೀಯ ಯೋಗ ದಿನವನ್ನು ಆಳವಡಿಸಿಕೊಳ್ಳಲು ನಾವು ಒಂದಾಗಿ ಕೆಲಸ ಮಾಡೋಣ ಎಂಬ ಸಂದೇಶ ನೀಡಿದ್ದರು.

ಪ್ರತಿ ವರ್ಷ ಈ ದಿನದಂದು ಹಲವೆಡೆ ಯೋಗ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತದೆ. ಆದರೆ ಈ ಭಾರಿ ಕೊರೋನಾ ಇರುವ ಕಾರಣದಿಂದಾಗಿ ಆಚರಣೆಯು ವಿಭಿನ್ನವಾಗಿರುತ್ತದೆ. ಹಿಂದಿನ ಸಂದರ್ಭಗಳಿಗಿಂತ ಭಿನ್ನವಾಗಿ ಈ ವರ್ಷ ಮನೆಯಲ್ಲೇ ಅಥವಾ ಅಂತರ್ಜಾಲದ ಮೂಲಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತದೆ. ಯಾವುದೇ ರೀತಿಯ ಸಾಮೂಹಿಕ ಕೂಟಗಳು ಇರುವುದಿಲ್ಲ.

ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಮಹತ್ವ: 2015ರ ನಂತರ ಯೋಗ ಮಾಡುವುದರಿಂದ ಆರೋಗ್ಯಕ್ಕೆ ಆಗುವ ಪ್ರಯೋಜನಗಳು ಮತ್ತು ಅದರ ವಿವಿಧ ಅಭ್ಯಾಸಗಳ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ಜೂನ್ 21 ರಂದು ಪ್ರಪಂಚದಾದ್ಯಂತ ವಾರ್ಷಿಕವಾಗಿ ಈ ದಿನವನ್ನು ಆಚರಿಸಲಾಗುತ್ತದೆ. ಇದನ್ನು ಅಭ್ಯಾಸ ಮಾಡುವುದರಿಂದ ಪಡೆಯಬಹುದಾದ ದೈಹಿಕ, ಮಾನಸಿಕ ಮತ್ತು ಆಧ್ಯಾತ್ಮಿಕ ಪ್ರಯೋಜನಗಳ ಬಗ್ಗೆ ಜನರಿಗೆ ತಿಳಿಸುವುದು ಇದರ ಉದ್ದೇಶವಾಗಿದೆ. ಉತ್ತರ ಗೋಳಾರ್ಧದಲ್ಲಿ ವರ್ಷದ ಅತಿ ಉದ್ದದ ದಿನವಾದ್ದರಿಂದ ಜೂನ್ 21 ರ ದಿನಾಂಕವನ್ನು ಪ್ರಧಾನಿ ಮೋದಿ ಪ್ರಸ್ತಾಪಿಸಿದ್ದರು.

ಅಂತಾರಾಷ್ಟ್ರೀಯ ಯೋಗ ದಿನದ ಇತಿಹಾಸ: ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಕರಡು ಪ್ರಸ್ತಾವನೆಯನ್ನು 2014 ಡಿಸೆಂಬರ್‌ನಲ್ಲಿ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಭಾರತದ ಖಾಯಂ ಪ್ರತನಿಧಿಯಾಗಿರುವ ಅಶೋಕ್ ಕುಮಾರ್ ಮಂಡಿಸಿದ್ದರು. ವಿಶ್ವಸಂಸ್ಥೆಗೆ ಇದು ಐತಿಹಾಸಿಕ ಕ್ಷಣವಾಗಿದ್ದು, ಅದರ ಸದಸ್ಯ ರಾಷ್ಟ್ರಗಳು ಅಭೂತಪೂರ್ವ ಬೆಂಬಲ ಸೂಚಿಸಿದ್ದರು. ವಿಶ್ವ ಸಂಸ್ಥೆಯ 193 ರಾಷ್ಟ್ರಗಳ ಪೈಕಿ 177 ದೇಶಗಳು ಅನುಮೋದನೆಯನ್ನು ನೀಡಿದ್ದವು.

ಸೆಪ್ಟೆಂಬರ್ 27, 2014 ರಂದು ಪ್ರಧಾನಿ ನರೇಂದ್ರ ಮೋದಿ ಅವರು ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ತಮ್ಮ ಭಾಷಣದಲ್ಲಿ ಜೂನ್ 21 ರಂದು ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ನಡೆಸುವ ಪ್ರಸ್ತಾಪವನ್ನು ಮಾಡಿದರು. ಯೋಗದ ಏಕತೆಯನ್ನು ಸಾಕಾರಗೊಳಿಸುವಂತೆ ಮೋದಿ ತಮ್ಮ ಭಾಷಣದಲ್ಲಿ ಹೇಳಿದ್ದಾರೆ.

2014 ರ ಡಿಸೆಂಬರ್ 11 ರಂದು ನಡೆದ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಜೂನ್ 21 ಅನ್ನುಅಂತಾರಾಷ್ಟ್ರೀಯ ಯೋಗ ದಿನ ಅಥವಾ ವಿಶ್ವ ಯೋಗ ದಿನವಾಗಿ ಘೋಷಿಸಲಾಯಿತು. ವಿಶ್ವ ಸಂಸ್ಥೆಯ 193 ರಾಷ್ಟ್ರಗಳ ಪೈಕಿ 177 ದೇಶಗಳು ಅನುಮೋದನೆಯನ್ನು ನೀಡಿದ್ದವು. 2015ರ ಜೂನ್ 21ನೇ ತಾರೀಖಿನಂದು ಮೊದಲ ಅಂತಾರಾಷ್ಟ್ರೀಯ ಯೋಗ ದಿನವನ್ನು ವಿಶ್ವದಾದ್ಯಂತ ಆಚರಿಸಲಾಯಿತು.

ಅಂತಾರಾಷ್ಟ್ರೀಯ ಯೋಗ ದಿನದ ದಿನಾಂಕ ಮತ್ತು ವಿಷಯವಸ್ತು: ಪ್ರತಿ ವರ್ಷ ಅಂತಾರಾಷ್ಟ್ರೀಯ ಯೋಗ ದಿನವನ್ನು ಜೂನ್ 21 ರಂದು ಆಚರಿಸಲಾಗುವುದು. ವಿಶ್ವವು ಈ ವರ್ಷ ಏಳನೇ ಅಂತಾರಾರಾಷ್ಟ್ರೀಯ ಯೋಗ ದಿನವನ್ನು ಆಚರಿಸಲಿದೆ. ವಿಶ್ವ ಯೋಗ ದಿನವನ್ನು ಪ್ರತಿವರ್ಷ ವಿಶಿಷ್ಟ ವಿಷಯದೊಂದಿಗೆ
ಅಂತಾರಾಷ್ಟ್ರೀಯ ಮಟ್ಟದಲ್ಲಿ ಆಚರಿಸಲಾಗುತ್ತದೆ. ಈ ವರ್ಷದ ಥೀಮ್ "ಯೋಗದೊಂದಿಗೆ ಇರಿ, ಮನೆಯಲ್ಲೇ ಇರಿ"

English summary
International Yoga Day 2021: For International Yoga Day, people around the world are all set to take out their yoga mats and start exercising, but they might not be aware that yoga goes back centuries. Yoga is considered to be an ancient practice that originated 5,000 years ago in India.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X