International Yoga Day 2024: ಮೋದಿ, ಕುಮಾರಸ್ವಾಮಿ, ಡಿಕೆ ಶಿವಕುಮಾರ್, ದಿನೇಶ್ ಗುಂಡೂರಾವ್ ಕೊಟ್ಟ ಸಂದೇಶವಿದು...
ಇಂದು ದೇಶದೆಲ್ಲೆಡೆ ಅಂತಾರಾಷ್ಟ್ರೀಯ ಯೋಗ ದಿನವನ್ನು ಆಚರಿಸಲಾಗುತ್ತಿದೆ. 10ನೇ ಅಂತಾರಾಷ್ಟ್ರೀಯ ಯೋಗ ದಿನದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರಿಂದು ಜಮ್ಮು ಮತ್ತು ಕಾಶ್ಮೀರದ ದಾಲ್ ಸರೋವರ ತೀರದಲ್ಲಿ ಸಾವಿರಾರು ಜನರೊಂದಿಗೆ ಪಾಲ್ಗೊಂಡು ಯೋಗ ಪ್ರದರ್ಶಿಸಿದರು.
ಯೋಗ ದಿನವನ್ನು 'ಸ್ವಯಂ ಮತ್ತು ಸಮಾಜಕ್ಕಾಗಿ ಯೋಗ' ವಸ್ತು ವಿಷಯದ ಅಡಿಯಲ್ಲಿ ಆಚರಿಸಲಾಗುತ್ತಿದೆ. ವೈಯಕ್ತಿಕ ಮತ್ತು ಸಾಮಾಜಿಕ ಯೋಗಕ್ಷೇಮವನ್ನು ಬೆಳೆಸುವಲ್ಲಿ ಯೋಗದ ಪಾತ್ರವನ್ನು ಎತ್ತಿ ತೋರಿಸುವುದು ಇದರ ಉದ್ದೇಶವಾಗಿದೆ.

ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಇದು ಮೊದಲ ಬಾರಿಗೆ ಜಮ್ಮು ಕಾಶ್ಮೀರಕ್ಕೆ ಮೋದಿ ಅವರು ಭೇಟಿ ನೀಡಿ ಯೋಗ ದಿನದ ಆಚರಣೆಯಲ್ಲಿ ಪಾಲ್ಗೊಂಡರು. ಇದರೊಂದಿಗೆ ಸರಿಸುಮಾರು ಏಳು ಸಾವಿರ ಜನ ಪಾಲ್ಗೊಂಡು ವಿಶ್ವಕ್ಕೆ ಆರೋಗ್ಯ ಸಂದೇಶ ಸಾರಿದರು.
#WATCH | Prime Minister Narendra Modi leads a Yoga session at Sher-i-Kashmir International Conference Centre (SKICC) in Srinagar on J&K, on International Day of Yoga. pic.twitter.com/PClCj4aUHN
— ANI (@ANI) June 21, 2024
ಇಡೀ ಜಗತ್ತಿನ ಒಳಿತಿಗಾಗಿ ಇರುವ ಯೋಗವನ್ನು ಪ್ರಬಲ ವಿಷಯವಾಗಿ ಇಂದು ಜಗತ್ತು ನೋಡುತ್ತಿದೆ. ಭೂತಕಾಲದ ವಿಷಯಗಳನ್ನು ಬಿಟ್ಟು ಪ್ರಚಲಿತದಲ್ಲಿ ನೆಮ್ಮದಿಯಿಂದ ಆರೋಗ್ಯಯುತವಾಗಿ ಹೇಗೆ ಬದುಕಬೇಕೆಂಬುದನ್ನು ಯೋಗ ನಮಗೆ ತೋರಿಸಿಕೊಟ್ಟು ಬದುಕಿಗೆ ಸಹಾಯ ಮಾಡುತ್ತದೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಯೋಗ ದಿನ ಆಚರಿಸಿದ ಡಿಕೆ ಶಿವಕುಮಾರ್
ಅಂದಹಾಗೆ ಬೆಂಗಳೂರಿನಲ್ಲಿ ಇಂದು ಯೋಗ ದಿನವನ್ನು ಆಚರಿಸಲಾಯಿತು. ಕರ್ನಾಟಕ ಸರ್ಕಾರದ ವತಿಯಿಂದ ವಿಧಾನಸೌಧದ ಎದುರು ಆಯೋಜಿಸಿದ್ದ 'ಯೋಗೋತ್ಸವ' ಕಾರ್ಯಕ್ರಮದಲ್ಲಿ 10ನೇ ಅಂತಾರಾಷ್ಟ್ರೀಯ ಯೋಗ ದಿನವನ್ನು ಆಚರಿಸಲಾಯಿತು.

ಡಿಸಿಎಂ ಡಿಕೆ ಶಿವಕುಮಾರ್, ರಾಜ್ಯಾಪಾಲ ಥಾವರ್ ಚಂದ್ ಗೆಹ್ಲೋಟ್ ಸಚಿವರಾದ ದಿನೆಶ್ ಗುಂಡೂರಾವ್ ಸಭಾಪತಿ ಬಸವರಾಜ ಹೊರಟ್ಟಿ, ನಟಿ ಅನು ಪ್ರಭಾಕರ್, ನಟ ಶರಣ್, ಅಶ್ವಿನಿ ನಾಚಪ್ಪ, ಟೀಂ ಇಂಡಿಯಾ ಕ್ರಿಕೆಟಿಗ ಮನೀಷ್ ಪಾಂಡೆ ಸಹ ಪಾಲ್ಗೊಂಡಿದ್ದರು. ಇದರೊಂದಿಗೆ ನೂರಾರು ಸಾರ್ವಜನಿಕರು, ವಿವಿಧ ಶಾಲಾ ಕಾಲೇಜು ಮಕ್ಕಳು ಯೋಗ ಪ್ರದರ್ಶಿಸಿ ಆರೋಗ್ಯ ಸುರಕ್ಷತೆಗಳ ಬಗ್ಗೆ ಜಾಗೃತಿ ಮೂಡಿಸಿದರು.
ದೆಹಲಿಯಲ್ಲಿ ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ ಯೋಗ
ಅಂತಾರಾಷ್ಟ್ರೀಯ ಯೋಗ ದಿನವನ್ನು ಇಂದು ದೆಯಲಿಯ ನೋಯ್ಡಾದ ಬಿಹೆಚ್‌ಇಎಲ್ ಟೌನ್‌ಶಿಪ್‌ನಲ್ಲಿ ಆಯೋಜಿಸಲಾಗಿತ್ತು. ಈ ಸಮಾರಂಭದಲ್ಲಿ ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ ಅವರು ಯೋಗ ಮಾಡಿ ವಿಶೇಷ ದಿನವನ್ನು ಆವರಿಸಿದರು. ಈ ಬಗ್ಗೆ ಮಾತನಾಡಿದ ಕುಮಾರಸ್ವಾಮಿ ಅವರು, ''ಇಂದು ಯೋಗ ದಿನವನ್ನು ಆಚರಿಸಲಾಗುತ್ತಿದೆ. ಮೈಸೂರಿನ ಅರಮನೆ ಮೈದಾನದಲ್ಲಿ ಮೋದಿ ಅವರು ಮೊದಲ ಬಾರಿಗೆ ಯೋಗ ಮಾಡಿದರು. ವಿವಿಧ ಕಾಯಿಲೆಗಳಿಗೆ ಯೋಗ ಸ್ವಲ್ಪ ಮುಕ್ತಿ ನೀಡುತ್ತದೆ. ಯೋಗಕ್ಕೆ ನಮ್ಮ ಸಂಸ್ಕೃತಿಯಲ್ಲಿ ವಿಶೇಷ ಸ್ಥಾನವಿದೆ. ಆರೋಗ್ಯವಂತವಾಗಿರಲು ನಿತ್ಯ ಯೋಗ ಅಳವಡಿಸಿಕೊಳ್ಳಬೇಕು. ಕಾಶ್ಮೀರದಲ್ಲಿ ಮೋದಿ ಅವರು ಯೋಗ ಮಾಡುತ್ತಿದ್ದಾರೆ. ಇದು ಒಳ್ಳೆಯ ಸಂದೇಶ, ಪ್ರೇರಣೆ'' ಎಂದು ತಿಳಿಸಿದರು.












Click it and Unblock the Notifications