ಪೌರತ್ವ ಕಾಯ್ದೆ ಕಿಚ್ಚು, ಹಿಂಸಾಚಾರ; ಅಸ್ಸಾಂನಲ್ಲಿ ಕರ್ಫ್ಯೂ ತೆರವು

ನವದೆಹಲಿ, ಡಿಸೆಂಬರ್ 17 : ಅಸ್ಸಾಂನಲ್ಲಿ ಕರ್ಫ್ಯೂ ತೆರವುಗೊಳಿಸಲಾಗುತ್ತಿದ್ದು, ಇಂಟರ್‌ ನೆಟ್ ಸಂಪರ್ಕವನ್ನು ಮರು ಸ್ಥಾಪನೆ ಮಾಡಲಾಗುತ್ತದೆ. ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಪ್ರತಿಭಟನೆ ನಡೆದ ಹಿನ್ನಲೆಯಲ್ಲಿ ಕರ್ಫ್ಯೂ ಜಾರಿಗೊಳಿಸಲಾಗಿತ್ತು.

ಪೌರತ್ವ ತಿದ್ದುಪಡಿ ಕಾಯ್ದೆ ಜಾರಿ ವಿರೋಧಿಸಿ ಪ್ರತಿಭಟನೆ ನಡೆಸುವಾಗ ಹಿಂಸಾಚಾರ ನಡೆದ ಹಿನ್ನಲೆಯಲ್ಲಿ ಕರ್ಫ್ಯೂ ಜಾರಿಗೊಳಿಸಲಾಗಿತ್ತು. ಇಂಟರ್ ನೆಟ್ ಸಂಪರ್ಕ ಸ್ಥಗಿತವಾಗಿತ್ತು. ಮಂಗಳವಾರ ಕರ್ಫ್ಯೂ ಸಡಿಲಿಕೆ ಮಾಡಲಾಗುತ್ತಿದೆ.

ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆಗೆ ಅನುಮೋದನೆ ಸಿಗುತ್ತಿದ್ದಂತೆ ಅಸ್ಸಾಂ ರಾಜ್ಯದ ವಿವಿಧ ಪ್ರದೇಶಗಳಲ್ಲಿ ಪ್ರತಿಭಟನೆ ನಡೆದಿತ್ತು. ಹಿಂಸಾಚಾರದಲ್ಲಿ 5 ಜನರು ಸಾವನ್ನಪ್ಪಿದ್ದರು. ಹಲವು ಪೊಲೀಸರು ಗಾಯಗೊಂಡಿದ್ದರು.

Internet Services In Assam Likely Restored

ಪೌರತ್ವ ತಿದ್ದುಪಡಿ ಕಾಯ್ದೆಗೆ ಮೊದಲು ಅಸ್ಸಾಂನಲ್ಲಿ ವಿರೋಧ ವ್ಯಕ್ತವಾಗಿತ್ತು. ಬಳಿಕ ಪ್ರತಿಭಟನೆ ಕಿಚ್ಚು ತ್ರಿಪುರ, ಮೇಘಾಲಯ, ದೆಹಲಿ ಮತ್ತು ಅರುಣಾಚಲ ಪ್ರದೇಶಕ್ಕೂ ವಿಸ್ತರಣೆಯಾಗಿತ್ತು. ಅಸ್ಸಾಂನಲ್ಲಿ ಪೊಲೀಸ್ ಗೋಲಿಬಾರ್‌ನಿಂದಾಗಿ ಒಬ್ಬ ನಾಗರಿಕ ಮೃತಪಟ್ಟಿದ್ದ.

ಡಿಸೆಂಬರ್ 11ರ ಬುಧವಾರ ರಾಜ್ಯಸಭೆಯಲ್ಲಿ ಪೌರತ್ವ ತಿದ್ದುಪಡಿ ವಿಧೇಯಕಕ್ಕೆ ಅನುಮೋದನೆ ಸಿಕ್ಕಿತ್ತು. ಮಸೂದೆ ಜಾರಿಗೊಳಿಸುವುದನ್ನು ವಿರೋಧಿಸಿ ಅಸ್ಸಾಂನಲ್ಲಿ ಬೃಹತ್ ಪ್ರತಿಭಟನೆ ನಡೆದಿತ್ತು. ಆದ್ದರಿಂದ ಜಪಾನ್ ಪ್ರಧಾನಿ ಶಿಂಜೊ ಅಬೆ ಭಾರತ ಪ್ರವಾಸ ಸಹ ಮುಂದೂಡಲಾಗಿತ್ತು.

ಅಸ್ಸಾಂನ ಗುವಾಹಟಿಯ ಲಾಲುಂಗ್‌ಗಾಂವ್‌ನಲ್ಲಿ ಗುರುವಾರ ಕಲ್ಲು ತೂರಾಟ ನಡೆಸಿದ್ದ ಪ್ರತಿಭಟನಾನಿರತರ ಮೇಲೆ ಪೊಲೀಸರು ಗೋಲಿಬಾರ್ ನಡೆಸಿದ್ದರು. ಈ ಗುಂಡಿನ ದಾಳಿಯಲ್ಲಿ ಒಬ್ಬರು ಮೃತಪಟ್ಟಿದ್ದು ಪ್ರತಿಭಟನೆ ಕಿಚ್ಚನ್ನು ಮತ್ತಷ್ಟು ಹೆಚ್ಚಿಸಿತ್ತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+