ವಿಶೇಷ ಸಾಧನಗೈದ ಮಕ್ಕಳಿಗೆ ರಾಷ್ಟ್ರೀಯ ಪ್ರಶಸ್ತಿಗಾಗಿ ಆಹ್ವಾನ

ಬೆಂಗಳೂರು, ಜೂನ್ 13: ಕಲೆ, ಸಾಂಸ್ಕೃತಿಕ ಯಾವುದೇ ಕ್ಷೇತ್ರದಲ್ಲಿ ನಾವೀನ್ಯತೆ, ರಾಷ್ಟ್ರೀಯ ಮಟ್ಟದಲ್ಲಿ ತಾರ್ಕಿಕ ಸಾಧನೆ, ಕ್ರೀಡೆ, ಸಮಾಜ ಸೇವೆ, ಸಂಗೀತ ಮತ್ತು ಕೇಂದ್ರ ಆಯ್ಕೆ ಸಮಿತಿಯ ನಿರ್ಧಾರದ ಪ್ರಕಾರ ಮಾನ್ಯತೆಗೆ ಯೋಗ್ಯವಾದ ಯಾವುದೇ ಕ್ಷೇತ್ರದಲ್ಲಿ ಅತ್ಯುತ್ತಮ ಸಾಧನೆಯನ್ನು ಮಾಡಿರುವಂತಹ ಮಕ್ಕಳಿಗೆ ರಾಷ್ಟ್ರ ಪ್ರಶಸ್ತಿಯನ್ನು ಭಾರತ ಸರ್ಕಾರವು ನೀಡುತ್ತದೆ.

ಭಾರತದಲ್ಲಿ ನೆಲೆಸಿರುವ ಮತ್ತು ಮೇಲ್ಕಂಡ ಕ್ಷೇತ್ರಗಳಲ್ಲಿ ಅಸಾಧಾರಣ ಸಾಧನೆಯನ್ನು ಮಾಡಿರುವ 5 ರಿಂದ 18 ವರ್ಷದೊಳಗಿನ ಅಂದರೆ ದಿನಾಂಕ:01.08.2000 ಹಾಗೂ ನಂತರ ಹುಟ್ಟಿದ ಮಕ್ಕಳನ್ನು 2018ನೇ ಸಾಲಿಗೆ ಆಯ್ಕೆ ಮಾಡಲಾಗುವುದು.

ಈ ರಾಷ್ಟ್ರ ಮಟ್ಟದ ಪ್ರಶಸ್ತಿಯು ಒಂದು ಚಿನ್ನದ ಪದಕ, 20 ಸಾವಿರ ರೂ. ನಗದು, 10 ಸಾವಿರ ರೂ. ಮೌಲ್ಯದ ಪುಸ್ತಕ ವೋಚರ್ ಮತ್ತು ಪ್ರಶಸ್ತಿ ಪತ್ರವನ್ನು ಒಳಗೊಂಡಿರುತ್ತದೆ. ಹಾಗೂ 35 ಬೆಳ್ಳಿ ಪದಕ (ಪ್ರತಿ ರಾಜ್ಯ/ಕೇಂದ್ರಾಡಳಿತ ಪ್ರದೇಶಕ್ಕೆ ಒಂದು ಬೆಳ್ಳಿ ಪದಕ) 10 ಸಾವಿರ ರೂ. ನಗದು, 3 ಸಾವಿರ ಮೌಲ್ಯದ ಪುಸ್ತಕ ವೋಚರ್ ಹಾಗೂ ಪ್ರಶಸ್ತಿ ಪತ್ರ ಒಳಗೊಂಡಿರುತ್ತದೆ.

Invitation for national awards for talented children

ಈ ಪ್ರಶಸ್ತಿಗೆ ಆಯ್ಕೆಯಾಗುವಂತಹ ಮಕ್ಕಳು ಅಪ್ರತಿಮ ಪ್ರತಿಭೆಯುಳ್ಳವರಾಗಿರತಕ್ಕದ್ದು. ಅಸಾಧಾರಣವೆಂದು ಇವರ ಸಾಧನೆಯನ್ನು ಸಮರ್ಥಿಸಲು ಪೂರಕ ದಾಖಲಾತಿಗಳನ್ನು ಒದಗಿಸುವುದು. ಮಕ್ಕಳ ವಯಸ್ಸಿನ ಪ್ರಮಾಣ ಪತ್ರವನ್ನು ಪತ್ರಾಂಕಿತ ಅಧಿಕಾರಿಗಳಿಂದ ದೃಢೀಕರಿಸಿ ಸಲ್ಲಿಸಬೇಕು.

2018ನೇ ವರ್ಷದ ಪ್ರಶಸ್ತಿಗೆ ನಿಗದಿಪಡಿಸಿದ ಅರ್ಜಿ ನಮೂನೆಗಳನ್ನು ಸಂಬಂಧಿಸಿದ ಜಿಲ್ಲೆಯ ಉಪನಿರ್ದೇಶಕರ ಕಛೇರಿ, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಇಲ್ಲಿಂದ ಪಡೆದು, ಆಂಗ್ಲ ಭಾಷೆಯಲ್ಲಿ ದ್ವಿಪ್ರತಿಯಲ್ಲಿ ಭರ್ತಿ ಮಾಡಿದ ಅರ್ಜಿಗಳನ್ನು ಜೂನ್ 30ರೊಳಗೆ ಒಳಗೆ ತಲುಪುವಂತೆ ಸಂಬಂಧಪಟ್ಟ ಜಿಲ್ಲಾ ಉಪ ನಿರ್ದೇಶಕರು, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಇವರಿಗೆಕಳುಹಿಸಬೇಕು.

ನಿಗದಿತ ದಿನಾಂಕದ ನಂತರ ಸಲ್ಲಿಸಿದ ಅರ್ಜಿಗಳನ್ನು ಯಾವುದೇ ಕಾರಣಕ್ಕೂ ಪರಿಗಣಿಸಲಾಗುವುದಿಲ್ಲ ಎಂದು ನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಪ್ರಕಟಣೆಯಲ್ಲಿ ತಿಳಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+