ನಮಾಜು ಮಾಡಲು ಮಸೀದಿಯೆ ಬೇಕೆ? ಸುಪ್ರೀಂ ತೀರ್ಪು ನಿರೀಕ್ಷಿಸಿ

ನವದೆಹಲಿ, ಸೆಪ್ಟೆಂಬರ್ 26: ವಿವಾದಿತ ಸ್ಥಳದಲ್ಲಿ ಮುಸ್ಲಿಮರು ನಮಾಜು ಮಾಡುವ ಕುರಿತಂತೆ 1994ರ ಆದೇಶಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟಿನಿಂದ ಸೆಪ್ಟೆಂಬರ್ 27ರಂದು ತೀರ್ಪು ಹೊರ ಬೀಳುವ ಸಾಧ್ಯತೆಯಿದೆ.

1994ರ ಅಲಹಾಬಾದ್ ಹೈಕೋರ್ಟ್ ಆದೇಶದಂತೆ, ಇಸ್ಲಾಂ ಪ್ರಕಾರ ಮಸೀದಿಯ ಮಹತ್ವ ಹಾಗೂ ನಮಾಜ್ ಮಾಡಲು ಅದೇ ಜಾಗ ಆಗಬೇಕೆಂದೇನಿಲ್ಲ, ಬಯಲು ಪ್ರದೇಶವೊಂದರಲ್ಲೂ ಪ್ರಾರ್ಥನೆ ಸಲ್ಲಿಸಬಹುದು ಎನ್ನಲಾಗಿತ್ತು. ಇದನ್ನು ಮುಸ್ಲಿಂ ಸಂಘಟನೆಗಳು ಪ್ರಶ್ನಿಸಿ, ಸಂವಿಧಾನ ಪೀಠ ರಚನೆಗೆ ಆಗ್ರಹಿಸಿವೆ.

ಸಂವಿಧಾನ ಪೀಠ ರಚನೆ ಅಥವಾ ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯ ಕುರಿತು ನ್ಯಾ. ದೀಪಕ್ ಮಿಶ್ರಾ ನೇತೃತ್ವದ ತ್ರಿಸದಸ್ಯ ಪೀಠ ಆದೇಶ ನೀಡಲಿದೆ. ಜಸ್ಟೀಸ್ ಅಶೋಕ್ ಭೂಷಣ್ ಹಾಗೂ ನ್ಯಾ ಅಬ್ದುಲ್ ನಜೀರ್ ಕೂಡಾ ನ್ಯಾಯಪೀಠದಲ್ಲಿದ್ದಾರೆ

Is a Mosque essential to Islam? SC verdict likely tomorrow

ಹಿರಿಯ ವಕೀಲ ರಾಜೀವ್ ಧವನ್ ಅವರು 1994ರ ಆದೇಶವನ್ನು ಮರು ಪರಿಶೀಲಿಸುವಂತೆ ಕೋರಿದ್ದರಿಂದ ಪೂರ್ವಭಾವಿ ವಿವಾದದ ಬಗ್ಗೆ ಪರಿಶೀಲಿಸಲಾಗುವುದು ಎಂದು ಸಿಜೆಐ ಮಿಶ್ರಾ ಹೇಳಿದ್ದಾರೆ.

ಶಿಯಾ ಮುಸ್ಲಿಂ ಸಂಘಟನೆಯೊಂದು ವಿವಾದಿತ ಸ್ಥಳದಲ್ಲಿ ರಾಮಮಂದಿರ ನಿರ್ಮಿಸಲು ನಮ್ಮ ಅಭ್ಯಂತರವೇನು ಇಲ್ಲ ಎಂದು ಕೋರ್ಟಿಗೆ ಹೇಳಿರುವುದನ್ನು ಇಲ್ಲಿ ಸ್ಮರಿಸಬಹುದು

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+