ಐಎಸ್‌ಐಎಸ್ ಉಗ್ರರ ಬಳಿ ಸುಧಾರಿತ ಸ್ಫೋಟಕ ಪತ್ತೆ

ಬೆಂಗಳೂರು, ಜನವರಿ 22 : ದೇಶದ ವಿವಿಧ ನಗರಗಳಲ್ಲಿ ಇಂದು ನಡೆಸಿದ ಕಾರ್ಯಾಚರಣೆಯ ನಂತರ ರಾಷ್ಟ್ರೀಯ ತನಿಖಾ ದಳ 5 ಉಗ್ರರನ್ನು ಬಂಧಿಸಿದೆ. ಉಳಿದ ಶಂಕಿತ ಉಗ್ರರ ವಿಚಾರಣೆ ನಡೆಸಲಾಗುತ್ತಿದ್ದು, ಉಗ್ರರ ಬಳಿ ಸುಧಾರಿತ ಸ್ಫೋಟಕಗಳು ಪತ್ತೆಯಾಗಿವೆ.

ಮುಂಬೈ ಮತ್ತು ಹೈದರಾಬಾದ್‌ನಲ್ಲಿ ಬಂಧಿಸಿದ ಉಗ್ರರಿಂದ ಸುಧಾರಿತ ಸ್ಫೋಟಕಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಎನ್‌ಐಎ ಹೇಳಿದೆ. ಮಂಗಳೂರು, ತುಮಕೂರು ಸೇರಿದಂತೆ ದೇಶದ ವಿವಿಧ ನಗರಗಳಲ್ಲಿ ಕಾರ್ಯಾಚರಣೆ ನಡೆಸಿ 14 ಜನರನ್ನು ಎನ್‌ಐಎ ಇಂದು ಬೆಳಗ್ಗೆ ವಶಕ್ಕೆ ಪಡೆದಿತ್ತು. [ದೇಶಾದ್ಯಂತ 24 ISIS ಬೆಂಬಲಿಗರು ವಶಕ್ಕೆ]

isis

ಇವರಲ್ಲಿ ಐವರನ್ನು ಬಂಧಿಸಲಾಗಿದ್ದು, ಅವರ ವಿರುದ್ಧ ಕಾನೂನು ವಿರೋಧಿ ಚಟುವಟಿಕೆಗಳ ಕಾಯ್ದೆಯಡಿ ಪ್ರಕರಣವನ್ನು ದಾಖಲು ಮಾಡಿಕೊಳ್ಳಲಾಗಿದೆ. ಉಳಿದ ಶಂಕಿತರ ವಿಚಾರಣೆ ನಡೆಸಲಾಗುತ್ತಿದೆ ಎಂದು ಎನ್‌ಐಎ ಅಧಿಕಾರಿಗಳು ಹೇಳಿದ್ದಾರೆ. [ನನ್ನ ಮಗ ಉಗ್ರನಲ್ಲ, ಅಮಾಯಕ]

ಕರ್ನಾಟಕದ ಇಬ್ಬರು, ಮುಂಬೈನ ಒಬ್ಬ, ಹೈದರಾಬಾದ್‌ನ ಇಬ್ಬರು ಉಗ್ರರನ್ನು ಬಂಧಿಸಲಾಗಿದೆ ಎಂದು ಎನ್‌ಐಎ ಹೇಳಿದೆ. ಜನವರಿ 26ರ ಗಣರಾಜ್ಯೋತ್ಸವದ ದಿನ ದೇಶದಲ್ಲಿ ದಾಳಿ ನಡೆಸಲು ಈ ಉಗ್ರರು ಸಂಚು ರೂಪಿಸಿದ್ದರು ಎಂದು ಎನ್‌ಐಎ ಶಂಕಿಸಿದೆ.

ಇಂದು ಬಂಧಿಸಿದ ಎಲ್ಲಾ ಶಂಕಿತರು ಒಟ್ಟಾಗಿ ಕಾರ್ಯನಿರ್ವಹಣೆ ಮಾಡುತ್ತಿದ್ದರೆ? ಅಥವ ಪ್ರತ್ಯೇಕವಾಗಿ ಕಾರ್ಯಾಚರಣೆ ಮಾಡುತ್ತಿದ್ದರೆ? ಎಂದು ಎನ್‌ಐಎ ತನಿಖೆ ನಡೆಸುತ್ತಿದೆ. ಒಟ್ಟು 9 ಉಗ್ರರನ್ನು ತೀವ್ರವಾಗಿ ವಿಚಾರಣೆ ನಡೆಸುತ್ತಿದ್ದು, ಅವರಿಂದ ಮಾಹಿತಿ ಸಂಗ್ರಹಣೆ ಮಾಡಲಾಗುತ್ತಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+