ಇಸ್ರೋದಿಂದ ಎರಡು ವಿದೇಶಿ ಉಪಗ್ರಹಗಳ ಯಶಸ್ವಿ ಉಡಾವಣೆ
ಶ್ರೀಹರಿಕೋಟಾ, ಸೆಪ್ಟೆಂಬರ್ 16 : ಆಂಧ್ರಪ್ರದೇಶದ ಶ್ರೀಹರಿಕೋಟಾದಲ್ಲಿರುವ ಸತೀಶ್ ಧವನ್ ಅಂತರಿಕ್ಷ ಕೇಂದ್ರದಿಂದ ಎರಡು ವಿದೇಶಿ ಉಪಗ್ರಹಗಳಾದ NovaSAR ಮತ್ತು S1-4ಗಳನ್ನು ಪಿಎಸ್ಎಲ್‌ವಿ-ಸಿ42 ಮೂಲಕ ಇಸ್ರೋ ಭಾನುವಾರ ರಾತ್ರಿ 10.08 ನಿಮಿಷಕ್ಕೆ ಯಶಸ್ವಿಯಾಗಿ ಉಡಾಯಿಸಿದೆ.
ಈ ಎರಡೂ ಉಪಗ್ರಹಗಳು ಬ್ರಿಟನ್‌ನ ಸರ್ರೆ ಸೆಟಲೈಟ್ ಟೆಕ್ನಾಲಜಿ ಲಿಮಿಟೆಡ್ ಕಂಪನಿಗೆ ಸೇರಿದವಾಗಿದ್ದು, ನೋವಾಸಾರ್ 445 ಕೆಜಿ ತೂಗುತ್ತಿದ್ದರೆ, ಎಸ್1-4 ಉಪಗ್ರಹದ ತೂಕ 444 ಕೆಜಿ. ಇದು ಪೋಲಾರ್ ಸೆಟಲೈಟ್ ಲಾಂಚ್ ವೆಹಿಕಲ್ (ಪಿಎಸ್ಎಲ್‌ವಿ)ನ 44ನೇ ಉಡಾವಣೆಯಾಗಿದೆ.
ನೋವಾಸಾರ್ ಎಸ್-ಬ್ಯಾಂಡ್ ಸಿಂಥೆಟಿಕ್ ಅಪರ್ಚರ್ ರಾಡಾರ್ ಉಪಗ್ರಹವಾಗಿದ್ದು, ಅರಣ್ಯದ ನಕ್ಷೆ ತಯಾರಿಸುವುದು, ಭೂಮಿಯ ಬಳಕೆ, ಐಸ್ ಕವರ್ ಪರಿವೀಕ್ಷಣೆ ಮತ್ತು ಪ್ರವಾಹದಂತಹ ನೈಸರ್ಗಿಕ ವಿಕೋಪಗಳ ಅಧ್ಯಯನ ನಡೆಸಲಿದೆ.

ಎಸ್1-4 ಹೈ ರೆಸೊಲ್ಯೂಷನ್ ಆಪ್ಟಿಕಲ್ ಅರ್ಥ್ ಆಬ್ಸರ್ವೇಶನ್ ಉಪಗ್ರಹವಾಗಿದ್ದು, ನಿಕ್ಷೇಪಗಳ ಸಮೀಕ್ಷೆ, ಪರಿಸರ ಪರಿವೀಕ್ಷಣೆ, ನಗರದ ನಿರ್ವಹಣೆ ಮತ್ತು ಪ್ರಕೃತಿ ವಿಕೋಪಗಳ ಅಧ್ಯಯನವನ್ನು ಕೈಗೊಳ್ಳಲಿದೆ. ಸುಮಾರು 5 ತಿಂಗಳ ಬಿಡುವಿನ ನಂತರ ಇಸ್ರೋ ಈ ಉಡಾವಣೆ ಕಾರ್ಯವನ್ನು ಕೈಗೊಂಡಿದೆ.
ಈ ಸಂದರ್ಭದಲ್ಲಿ ಇಸ್ರೋದ ಚೇರ್ಮನ್ ಕೆ ಸಿವನ್ ಮತ್ತು ಯುನೈಟೆಡ್ ಕಿಂಗಡಂನ ಸರ್ರೆ ಸೆಟಲೈಟ್ ಟೆಕ್ನಾಲಜಿ ಸಂಸ್ಥೆಯ ತಂಡ ಶ್ರೀಹರಿಕೋಟಾದ ಸತೀಶ್ ಧವನ್ ಅಂತರಿಕ್ಷ ಕೇಂದ್ರದಲ್ಲಿ ಹಾಜರಿದ್ದು, ಉಪಗ್ರಹ ಉಡಾವಣೆಯನ್ನು ವೀಕ್ಷಿಸಿದರು.
Congratulations to our space scientists! ISRO successfully launched PSLV C42, putting two UK satellites in orbit, demonstrating India's prowess in the competitive space business. @isro
— Narendra Modi (@narendramodi) September 16, 2018
ವಿದೇಶಿ ಉಪಗ್ರಹಗಳನ್ನು ಯಶಸ್ವಿಯಾಗಿ ಉಡಾಯಿಸಿದ್ದಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಇಸ್ರೋದ ವಿಜ್ಞಾನಿಗಳನ್ನು ಹೃತ್ಪೂರ್ವಕವಾಗಿ ಅಭಿನಂದಿಸಿದ್ದಾರೆ. ಸ್ಪರ್ಧಾತ್ಮಕ ಅಂತರಿಕ್ಷ ವ್ಯಾಪಾರದಲ್ಲಿ ಭಾರತದ ಶಕ್ತಿ ಎಷ್ಟಿದೆಯೆಂದು ಇಸ್ರೋ ಇಡೀ ವಿಶ್ವಕ್ಕೆ ತೋರಿಸಿದೆ ಎಂದು ಪ್ರಧಾನಿ ಮೋದಿ ಇಸ್ರೋ ವಿಜ್ಞಾನಿಗಳನ್ನು ಕೊಂಡಾಡಿದ್ದಾರೆ.
-
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ? -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
ಈ ಸಂವತ್ಸರಕ್ಕೇಕೆ ಈ ಹೆಸರು? ‘ಪರಾಭವ’ ಅಂದ್ರೆ ‘ಸೋಲು’ ಎಂಬ ಅರ್ಥವಲ್ಲವೇ? -
Rashmika Mandanna: ಮನೆಮಗಳಾಗಿ ಇಲ್ಲಿಗೆ ಬಂದೆ, ಈಗ ಸೊಸೆಯಾಗಿ ನಿಂತಿದ್ದೇನೆ: ರಶ್ಮಿಕಾ ಮಂದಣ್ಣ ಭಾವುಕ -
ಕೇಂದ್ರೀಯ ವಿದ್ಯಾಲಯ 1ನೇ ತರಗತಿ ಪ್ರವೇಶಾತಿ 2026: ಇಂದಿನಿಂದಲೇ ಅರ್ಜಿ ಸಲ್ಲಿಕೆ ಶುರು, ಪೋಷಕರೇ ಈಗಲೇ ಗಮನಿಸಿ












Click it and Unblock the Notifications